Narendra Modi: ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಥೈಲ್ಯಾಂಡ್, ಶ್ರೀಲಂಕಾ ಭೇಟಿ; ದ್ವೀಪಕ್ಷೀಯ ಮಾತುಕತೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್‌ನಲ್ಲಿ ಥೈಲ್ಯಾಂಡ್, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಏಪ್ರಿಲ್ 3 ಮತ್ತು 4 ರಂದು ಥೈಲ್ಯಾಂಡ್‌ನಲ್ಲಿ ನಡೆಯಲಿರುವ ವ 6 ನೇ BIMSTEC ರಾಷ್ಟ್ರಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಏಪ್ರಿಲ್‌ನಲ್ಲಿ ಥೈಲ್ಯಾಂಡ್, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಏಪ್ರಿಲ್ 3 ಮತ್ತು 4 ರಂದು ಥೈಲ್ಯಾಂಡ್‌ನಲ್ಲಿ ನಡೆಯಲಿರುವ ವ 6 ನೇ BIMSTEC ರಾಷ್ಟ್ರಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದು ಥೈಲಾಂಡ್‌ಗೆ ಅವರ ಮೂರನೇ ಭೇಟಿಯಾಗಿದೆ. BIMSTEC ಬಾಂಗ್ಲಾದೇಶ, ಭೂತಾನ್, ಭಾರತ, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ ಮತ್ತು ಥೈಲ್ಯಾಂಡ್ ಸೇರಿ ಏಳು ಸದಸ್ಯ ರಾಷ್ಟ್ರವನ್ನು ಒಳಗೊಂಡಿದೆ. ಥೈಲ್ಯಾಂಡ್ ಪ್ರಧಾನಿ ಪೊಯೆಟೊಂಗ್ಟಾರ್ನ್ ಶಿನವಾತ್ರ ಅವರು ಪ್ರಧಾನಿ ಮೋದಿಯವರನ್ನು ಈ ಸಭೆಗೆ ಆಹ್ವಾನಿಸಿದ್ದಾರೆ.
2018 ರಲ್ಲಿ ನೇಪಾಳದ ಕಠ್ಮಂಡುವಿನಲ್ಲಿ ನಡೆದ ನಾಲ್ಕನೇ BIMSTEC ಶೃಂಗಸಭೆಯ ನಂತರ BIMSTEC ದೇಶಗಳ ಈ ಭೌತಿಕ ಸಭೆ ನಡೆಯುತ್ತಿದೆ. ಐದನೇ ಶೃಂಗಸಭೆಯು ಮಾರ್ಚ್ 2022 ರಲ್ಲಿ ಶ್ರೀಲಂಕಾದ ಕೊಲಂಬೊದಲ್ಲಿ ವರ್ಚುವಲ್ ಆಗಿ ನಡೆದಿತ್ತು. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ . ಉಭಯ ನಾಯಕರು ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುವ ಮತ್ತು ದೇಶಗಳ ನಡುವಿನ ಭವಿಷ್ಯದ ಪಾಲುದಾರಿಕೆಗೆ ಮಾರ್ಗವನ್ನು ರೂಪಿಸುವ ನಿರೀಕ್ಷೆಯಿದೆ ಎಂದು ವಿದೇಶಾಂಗ ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ವ್ಯಾಪಾರ ಮತ್ತು ಹೂಡಿಕೆಯನ್ನು ಸುಗಮಗೊಳಿಸುವಿಕೆ, ಆಹಾರ, ಇಂಧನ, ಹವಾಮಾನ ಮತ್ತು ಮಾನವ ಭದ್ರತೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸುತ್ತಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಇದಾದ ನಂತರ ಪ್ರಧಾನಿ ಏಪ್ರಿಲ್ 4 ರಿಂದ ಏಪ್ರಿಲ್ 6 ರವರೆಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಶ್ರೀಲಂಕಾ ಅಧ್ಯಕ್ಷರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಭಾರತದ ಆರ್ಥಿಕ ನೆರವಿನೊಂದಿಗೆ ಜಾರಿಗೆ ತರಲಾದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಅನುರಾಧಪುರಕ್ಕೂ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ: PM Narendra Modi : 2022-2024ರವರೆಗೆ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಪ್ರವಾಸಗಳಿಗಾಗಿ ಕೇಂದ್ರ ಸರ್ಕಾರ ಎಷ್ಟು ಖರ್ಚು ಮಾಡಿದೆ?
ಕಳೆದ ವರ್ಷ ಡಿಸೆಂಬರ್ 15 ರಂದು ದಿಸ್ಸಾನಾಯಕೆ ಭಾರತಕ್ಕೆ ಭೇಟಿ ನೀಡಿದಾಗ ಇಬ್ಬರು ನಾಯಕರು ಕಡಲ ಭದ್ರತಾ ಸಹಕಾರದ ಬಗ್ಗೆ ಚರ್ಚಿಸಿದ್ದರು. ಭಾರತದ ಭದ್ರತಾ ಹಿತಾಸಕ್ತಿಗಳ ವಿರುದ್ಧ ತಮ್ಮ ದೇಶದ ಪ್ರದೇಶವನ್ನು ಬಳಸಲಾಗುವುದಿಲ್ಲ ಎಂದು ಭರವಸೆ ನೀಡಿದ್ದರು.