ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Narendra Modi: ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ

PM Modi Foreign Visit: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಮೊದಲೆರಡು ದಿನ ಇಂಗ್ಲೆಂಡ್‌ಗೆ ಭೇಟಿ ನೀಡಲಿರುವ ಅವರು ಅಲ್ಲಿ ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಹಲವು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇದಾದ ಬಳಿಕ ಮಾಲ್ಡೀವ್ಸ್‌ಗೆ ತೆರಳಿರುವ ಅವರು ಅಲ್ಲಿನ ಸ್ವಾತಂತ್ರ್ಯ ದಿನಾಚರಣೆಗೆ ಗೌರವಾನ್ವಿತ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು

Rakshita Karkera Rakshita Karkera Jul 23, 2025 11:31 AM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಇಂದಿನಿಂದ ನಾಲ್ಕು ದಿನಗಳ ಕಾಲ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ ಎರಡು ದಿನಗಳ ಅಧಿಕೃತ ಪ್ರವಾಸ ವೇಳೆ ಪ್ರಧಾನಿ ಮೋದಿ ಇಂಗ್ಲೆಂಡ್‌ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ(Free Trade Agreement) ಸಹಿ ಹಾಕುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ನಂತರ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿ ಮಾಡಲಿದ್ದಾರೆ. ಲಂಡನ್ ಬಳಿಯ ಬ್ರಿಟಿಷ್ ಪ್ರಧಾನಿಯ ಅಧಿಕೃತ ನಿವಾಸವಾದ ಚೆಕರ್ಸ್‌ನಲ್ಲಿ ಸ್ಟಾರ್ಮರ್ ಅವರನ್ನು ಆತಿಥ್ಯ ವಹಿಸಲಿದ್ದಾರೆ.

ಇನ್ನು ಪ್ರಧಾನಿ ಮೋದಿಗೆ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಸಾಥ್‌ ನೀಡಿದ್ದಾರೆ. ಅವರು ಇಂಗ್ಲೆಂಡ್‌ ಸಚಿವ ಜೋನಾಥನ್ ರೆನಾಲ್ಡ್ಸ್ ಜೊತೆ ಮುಕ್ತ ವ್ಯಾಪಾರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಆ ಮೂಲಕ ಸತತ ಮೂಲಕ ಮೂರು ವರ್ಷಗಳ ನಡುವಿನ ಭಾರತ ಬೇಡಿಕೆಗೆ ಅಂತ್ಯ ಹಾಡಲಿದ್ದಾರೆ. ಸುಂಕಗಳನ್ನು ತೆಗೆದುಹಾಕುವ ಮೂಲಕ ಭಾರತದಿಂದ ರಫ್ತಾಗುವ ಸುಮಾರು 99 ಪ್ರತಿಶತದಷ್ಟು ಉತ್ಪನ್ನಗಳಿಗೆ ಸುಂಕ ಮುಕ್ತ ಪ್ರಯೋಜನವನ್ನು ನೀಡುವ ಮತ್ತು ಬ್ರಿಟಿಷ್ ಸಂಸ್ಥೆಗಳು ಭಾರತಕ್ಕೆ ವಿಸ್ಕಿ ಮತ್ತು ಕಾರುಗಳಂತಹ ಉತ್ಪನ್ನಗಳನ್ನು ಹೆಚ್ಚು ಸುಲಭವಾಗಿ ರಫ್ತು ಮಾಡಲು ಸಹಾಯ ಮಾಡುವ ಒಪ್ಪಂದಕ್ಕೆ ಸಂಬಂಧಿಸಿದಂತೆ "ಕೊನೆಯ ಕ್ಷಣದ ಕೆಲಸ" ನಡೆಯುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ದೃಢಪಡಿಸಿದರು.

2023–24 ರಲ್ಲಿ, ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವು USD 55 ಶತಕೋಟಿ ದಾಟಿದೆ. ಯುಕೆ ಇದುವರೆಗೆ USD 36 ಶತಕೋಟಿ ಹೂಡಿಕೆ ಮಾಡುವುದರೊಂದಿಗೆ ಭಾರತದ ಆರನೇ ಅತಿದೊಡ್ಡ ಹೂಡಿಕೆದಾರರಾಗಿದ್ದು, ಬ್ರಿಟನ್‌ನಲ್ಲಿರುವ ಸುಮಾರು 1,000 ಭಾರತೀಯ ಕಂಪನಿಗಳು ಸುಮಾರು 1,00,000 ಜನರನ್ನು ನೇಮಿಸಿಕೊಂಡಿವೆ. ಯುಕೆಯಲ್ಲಿ ಭಾರತೀಯ ಹೂಡಿಕೆಗಳು USD 20 ಶತಕೋಟಿಯ ಹತ್ತಿರದಲ್ಲಿವೆ.

ಏತನ್ಮಧ್ಯೆ, ಪ್ರಧಾನಿ ಮೋದಿ ಭೇಟಿಯ ಸಮಯದಲ್ಲಿ ಖಲಿಸ್ತಾನ್ ಪರ ಗುಂಪುಗಳಿಂದ ಯಾವುದೇ ಅಡ್ಡಿಯಾಗದಂತೆ ತಡೆಯಲು ಬ್ರಿಟಿಷ್ ಅಧಿಕಾರಿಗಳು ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ನವದೆಹಲಿಯ ಕಳವಳಗಳ ಬಗ್ಗೆ ಭದ್ರತಾ ಸಂಸ್ಥೆಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ, ಪ್ರತಿಭಟನೆಗಳು ಅಥವಾ ಉಲ್ಲಂಘನೆಗಳನ್ನು ತಪ್ಪಿಸಲು ವಿಶೇಷ ಸೂಚನೆಗಳನ್ನು ನೀಡಲಾಗಿದೆ. ಮಾರ್ಚ್‌ನಲ್ಲಿ ಖಲಿಸ್ತಾನ್ ಪರ ಪ್ರತಿಭಟನಾಕಾರರು ಭದ್ರತೆಯನ್ನು ಉಲ್ಲಂಘಿಸಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಲಂಡನ್ ನಿಲ್ದಾಣದಲ್ಲಿ ಅವರ ವಾಹನವನ್ನು ಸಮೀಪಿಸಿದ ಘಟನೆಯ ಪುನರಾವರ್ತನೆಯಾಗದಂತೆ ತಡೆಯಲು ಭಾರತ ಮತ್ತು ಯುಕೆ ಎರಡೂ ದೇಶಗಳು ಹೆಚ್ಚಿನ ಭದ್ರತೆಗೆ ಆದ್ಯತೆ ನೀಡಿದೆ.

ಈ ಸುದ್ದಿಯನ್ನೂ ಓದಿ: ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಭೇಟಿ; ಜಾಗತಿಕ ನಾಯಕರೊಂದಿಗೆ ʼಮೆಲೋಡಿʼ ಚರ್ಚೆ

ಪ್ರಧಾನಿ ಮೋದಿ ಮಾಲ್ಡೀವ್ಸ್ ಭೇಟಿ

ಬ್ರಿಟನ್‌ನಿಂದ ಪ್ರಧಾನಿ ಮೋದಿ ಮಾಲ್ಡೀವ್ಸ್‌ಗೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ದ್ವೀಪ ರಾಷ್ಟ್ರದ ಸ್ವಾತಂತ್ರ್ಯ ದಿನಾಚರಣೆಗೆ "ಗೌರವಾನ್ವಿತ ಅತಿಥಿಯಾಗಿ" ಭಾಗಿಯಾಗಲಿದ್ದಾರೆ. ಜುಲೈ 25-26 ರಂದು ಮಾಲ್ಡೀವ್ಸ್‌ಗೆ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ, ಪ್ರಧಾನಿಯವರು ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ದ್ವೀಪ ರಾಷ್ಟ್ರದಲ್ಲಿ ಭಾರತ ನೆರವಿನ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.2023 ರ ನವೆಂಬರ್‌ನಲ್ಲಿ ಚೀನಾ ಪರ ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟ ಮೊಹಮ್ಮದ್ ಮುಯಿಝು ಅಧಿಕಾರ ವಹಿಸಿಕೊಂಡ ನಂತರ ಹದಗೆಟ್ಟ ದ್ವಿಪಕ್ಷೀಯ ಸಂಬಂಧಗಳನ್ನು ಮರುಸ್ಥಾಪಿಸುವತ್ತ ಪ್ರಧಾನಿಯವರ ಮಾಲ್ಡೀವ್ಸ್ ಭೇಟಿಯನ್ನು ನಿರ್ಣಾಯಕ ಹೆಜ್ಜೆ ಎಂದು ಪರಿಗಣಿಸಲಾಗುತ್ತಿದೆ.