ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಂತ್ರಿಮಂಡಲ ಸಭೆ; ಸಚಿವ ಸಂಪುಟ ಪುನಾರಚನೆ ಚರ್ಚೆ ಸಾಧ್ಯತೆ
PM Modi To Chair Key Meet Today: ಸರ್ಕಾರದ ‘ಸುಧಾರಣಾ ಎಕ್ಸ್‌ಪ್ರೆಸ್’ ಕ್ರಮದಿಂದಾಗಿ ಜನಸಾಮಾನ್ಯರಿಗೆ ಪ್ರಯೋಜನವಾಗಿದೆ ಎಂದು ಈ ಹಿಂದಿನ ಸಂಪುಟ ಸಭೆಗಳಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ ಮೋದಿ, ಮುಂದಿನ 10 ವರ್ಷಗಳ ಸುಧಾರಣಾ ಆದ್ಯತೆಗಳನ್ನು ವಿವರಿಸಿದ್ದರು. ಇದರ ಜಾರಿ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.
PM Modi To Chair Key Meet Today -
ನವದೆಹಲಿ, ಮೇ 21: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಇಂದು(ಗುರುವಾರ) ದೆಹಲಿಯ ಸೇವಾ ತೀರ್ಥದಲ್ಲಿ ಸಚಿವ ಸಂಪುಟದ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲಾ ಕ್ಯಾಬಿನೆಟ್ ಸಚಿವರು, ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರು ಮತ್ತು ಇತರ ರಾಜ್ಯ ಸಚಿವರು ಭಾಗವಹಿಸಲಿದ್ದಾರೆ. ಇದು ಈ ವರ್ಷದ ಇಂಥ ಮೊದಲ ಸಭೆಯಾಗಿದೆ. ಸಂಪುಟ ಪುನಾರಚನೆಯ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಏರ್ಪಡಿಸಲಾಗಿರುವುದು ಗಮನಾರ್ಹ.
ಮೂಲಗಳ ಪ್ರಕಾರ, ಈ ಸಭೆಯಲ್ಲಿ ಸಂಪುಟ ಪುನಾರಚನೆಯೇ ಸಭೆಯಲ್ಲಿ ಪ್ರಮುಖ ಅಜೆಂಡಾ ಆಗುವ ಸಾಧ್ಯತೆ ಇದೆ. ಜತೆಗೆ ಎಲ್ಲಾ ಸಚಿವಾಲಯಗಳ ಕಾರ್ಯನಿರ್ವಹಣೆ, ತೆಗೆದುಕೊಳ್ಳಲಾಗಿರುವ ಪ್ರಮುಖ ನಿರ್ಧಾರಗಳು, ಅದರ ಫಲಿತಾಂಶ, ಮುಂದಿನ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆಯಾಗಲಿದೆ. ಜತೆಗೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳು, ಗರಿಷ್ಠ ಯಶಸ್ಸು ಲಭಿಸುವಂತೆ ಅವುಗಳ ಅನುಷ್ಠಾನದ ಬಗ್ಗೆಯೂ ವಿಮರ್ಶೆಗಳು ನಡೆಯುವ ಸಾಧ್ಯತೆಯಿದೆ.
ಯುದ್ಧದ ಬಗ್ಗೆಯೂ ಪ್ರಸ್ತಾಪ
ಪ್ರಧಾನಿ ಮೋದಿ ಅವರು ನಡೆಯುತ್ತಿರುವ ಮಧ್ಯಪ್ರಾಚ್ಯ ಬಿಕ್ಕಟ್ಟು ಮತ್ತು ಇರಾನ್ ಯುದ್ಧ ಮತ್ತು ಇಂಧನ ಬೆಲೆಗಳು ಮತ್ತು ವ್ಯಾಪಾರದ ಹರಿವು ಸೇರಿದಂತೆ ಭಾರತದ ಮೇಲೆ ಅದರ ಆರ್ಥಿಕ ಪರಿಣಾಮಗಳನ್ನು ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನಿರ್ದೇಶನ ಕೊಡುವ ನಿರೀಕ್ಷೆಯಿದೆ.
ಹೆಚ್ಚುವರಿಯಾಗಿ, ಪ್ರಧಾನಿ ಮೋದಿ ಅವರು ಇಂಧನ, ಕೃಷಿ, ರಸಗೊಬ್ಬರಗಳು, ವಾಯುಯಾನ, ಹಡಗು ಮತ್ತು ಲಾಜಿಸ್ಟಿಕ್ಸ್‌ನಂತಹ ಕ್ಷೇತ್ರಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸಾಮಾನ್ಯ ಜನರ ಅನುಕೂಲಕ್ಕಾಗಿ ಎಲ್ಲಾ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ತರಲು ಸರ್ಕಾರದ ಆದ್ಯತೆಯ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಮೆಲೋಡಿ ಚಾಕೊಲೇಟ್ ಬೆನ್ನಲ್ಲೇ ಮೋದಿ-ಮೆಲೋನಿಯ ಮತ್ತೊಂದು ವಿಡಿಯೊ ವೈರಲ್; ಹಿಂದಿಯಲ್ಲಿ ಮಾತನಾಡಿದ ಇಟಲಿ ಪ್ರಧಾನಿ
ಸರ್ಕಾರದ ‘ಸುಧಾರಣಾ ಎಕ್ಸ್‌ಪ್ರೆಸ್’ ಕ್ರಮದಿಂದಾಗಿ ಜನಸಾಮಾನ್ಯರಿಗೆ ಪ್ರಯೋಜನವಾಗಿದೆ ಎಂದು ಈ ಹಿಂದಿನ ಸಂಪುಟ ಸಭೆಗಳಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ ಮೋದಿ, ಮುಂದಿನ 10 ವರ್ಷಗಳ ಸುಧಾರಣಾ ಆದ್ಯತೆಗಳನ್ನು ವಿವರಿಸಿದ್ದರು. ಇದರ ಜಾರಿ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.
ಇತ್ತೀಚೆಗಷ್ಟೇ ನಡೆದ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಯಶಸ್ಸು ಸಾಧಿಸಿ, ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚನೆಯಾದ ಬೆನ್ನಲ್ಲೇ ಇಂದಿನ ಪ್ರಮುಖ ಸಭೆ ಕೂಡ ನಡೆಯಲಿದೆ.