Narendra Modi: ಫೆ.12,13 ರಂದು ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ: ಟ್ರಂಪ್ ಜೊತೆ ಮಹತ್ವದ ಚರ್ಚೆ!
ಅಕ್ರಮ ಭಾರತೀಯ ವಲಸಿಗರನ್ನು ತನ್ನ ದೇಶದಿಂದ ಟ್ರಂಪ್ ಆಡಳಿತವು ಗಡಿಪಾರು ಮಾಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಫೆ. 12 ಮತ್ತು 13 ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನದ ಮೇರೆಗೆ ಮೋದಿ ಅವರು ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಇಂದು(ಫೆ.7) ತಿಳಿಸಿದ್ದಾರೆ.
ನವದೆಹಲಿ: ಅಕ್ರಮ ಭಾರತೀಯ ವಲಸಿಗರನ್ನು(Illegal Migrant) ತನ್ನ ದೇಶದಿಂದ ಟ್ರಂಪ್ ಆಡಳಿತವು ಗಡಿಪಾರು ಮಾಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಫೆ. 12 ಮತ್ತು 13 ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಆಹ್ವಾನದ ಮೇರೆಗೆ ಮೋದಿ ಅವರು ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ (Foreign Secretary) ವಿಕ್ರಮ್ ಮಿಶ್ರಿ(Vikram Misri ಅವರು ಇಂದು(ಫೆ.7) ತಿಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರಿಗಾಗಿ ವಿಶೇಷ ಔತಣಕೂಟವನ್ನು ಆಯೋಜಿಸಲಿದ್ದಾರೆ ಎನ್ನಲಾಗಿದೆ.
ಟ್ರಂಪ್ ಎರಡನೇ ಬಾರಿ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೋದಿ ಅವರು ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಬಹುಮುಖ್ಯ ವಿಷಯವೆಂದರೆ ಟ್ರಂಪ್ ಅಧಿಕಾರ ವಹಿಸಿಕೊಂಡ ಮೂರು ವಾರಗಳೊಳಗೆ ಮೋದಿ ಅವರಿಗೆ ಈ ಆಹ್ವಾನ ಬಂದಿದ್ದು, ಇದು ಭಾರತ-ಅಮೆರಿಕ ಪಾಲುದಾರಿಕೆಯ ಮಹತ್ವವನ್ನು ತಿಳಿಸಿ ಕೊಡುತ್ತದೆ. ಟ್ರಂಪ್ ಅವರು ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಅಮೆರಿಕಕ್ಕೆ ಭೇಟಿ ನೀಡುತ್ತಿರುವ ಮೊದಲ ಕೆಲವು ವಿಶ್ವ ನಾಯಕರಲ್ಲಿ ಪ್ರಧಾನಿ ಮೋದಿ ಕೂಡ ಒಬ್ಬರು ಎಂದು ಮಿಶ್ರಿ ತಿಳಿಸಿದ್ದಾರೆ.
PM #Modi to visit US on Feb 12-13, will meet #DonaldTrump , says foreign secretary pic.twitter.com/c3wYdeRghH
— Saleem Iqbal Qadri (@SaleemQadri_) February 7, 2025
ಅಮೆರಿಕ ಭೇಟಿಗೂ ಮುನ್ನ ಮೋದಿ ಫೆಬ್ರವರಿ 10-12ರಂದು ಫ್ರಾನ್ಸ್ ಗೆ ಭೇಟಿ ನೀಡಲಿದ್ದು, ಅಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಎಐ ಆ್ಯಕ್ಷನ್ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸುದ್ದಿಯನ್ನೂ ಓದಿ:Narendra Modi: ನೆಹರೂ ಸರ್ಕಾರ ದೇವಾನಂದ್, ಕಿಶೋರ್ ಅವರನ್ನು ಬ್ಯಾನ್ ಮಾಡಿತ್ತು: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮೋದಿ!
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 2025 ರ ಫೆಬ್ರವರಿ 10 ರಿಂದ 12 ರವರೆಗೆ ಫ್ರಾನ್ಸ್ ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯು ಫ್ರಾನ್ಸ್ ಆಯೋಜಿಸುತ್ತಿರುವ ಕೃತಕ ಬುದ್ಧಿಮತ್ತೆ ಶೃಂಗಸಭೆಯ ಸಂದರ್ಭದಲ್ಲಿ ನಡೆಯಲಿದೆ. ಪ್ರಧಾನಿಯವರು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಈ ಎಐ ಕ್ರಿಯಾ ಶೃಂಗಸಭೆಯ ಸಹ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.