Narendra Modi: ಉಪರಾಷ್ಟ್ರಪತಿ ಧನ್‌ಕರ್ ಏಮ್ಸ್ ಆಸ್ಪತ್ರೆ ದಾಖಲು; ಆರೋಗ್ಯ ವಿಚಾರಿಸಿದ ಮೋದಿ
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಭಾನುವಾರ ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 2 ಗಂಟೆಗೆ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಜಗದೀಪ್ ಧನಕರ್ ಅವರ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಳವಳ ವ್ಯಕ್ತಪಡಿಸಿದ್ದು, ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಮೋದಿ ಏಮ್ಸ್‌ಗೆ ಭೇಟಿ ನೀಡಿದ್ದಾರೆ.

ನರೇಂದ್ರ ಮೋದಿ

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಅವರಿಗೆ ಭಾನುವಾರ ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 2 ಗಂಟೆಗೆ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಜಗದೀಪ್ ಧನಕರ್ ಅವರ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಕಳವಳ ವ್ಯಕ್ತಪಡಿಸಿದ್ದು, ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಮೋದಿ ಏಮ್ಸ್‌ಗೆ ಭೇಟಿ ನೀಡಿದ್ದಾರೆ. ಏಮ್ಸ್‌ನಲ್ಲಿ ಉಪರಾಷ್ಟ್ರಪತಿಗಳನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯ ವಿಚಾರಿಸಿದೆನು. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಸ್ತುತ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ ನಲ್ಲಿ ನಿಗಾದಲ್ಲಿ ಇರಿಸಲಾಗಿದೆ. ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.
Went to AIIMS and enquired about the health of Vice President Shri Jagdeep Dhankhar Ji. I pray for his good health and speedy recovery. @VPIndia
— Narendra Modi (@narendramodi) March 9, 2025
ಸದ್ಯ ಧನ್‌ಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಮೇಲೆ ನಿಗಾ ಇಡಲಾಗಿದೆ ಎಂದು ಮೂಲಗಳು ವರದಿ ಮಾಡಿದ್ದು, ವೈದ್ಯರ ತಂಡವು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿದು ಬಂದಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಧನ್‌ಕರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಲು ಏಮ್ಸ್‌ಗೆ ಭೇಟಿ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ: Mahakumbh 2025 : ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
ಇತ್ತೀಚೆಗೆ ಧನ್‌ಕರ್ ಅವರು ಮಹಾಕುಂಭ ಮೇಳದಲ್ಲಿ ಪಾಲ್ಗೊಂಡಿದ್ದರು. ವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮಹಾಕುಂಭ ಮೇಳದ ಅತ್ಯುತ್ತಮ ವ್ಯವಸ್ಥೆಗಾಗಿ ಆದಿತ್ಯನಾಥ ಯೋಗಿ ಅವರ ಸರ್ಕಾರವನ್ನು ಅವರು ಅಭಿನಂದಿಸಿದ್ದರು. ಇದು ಒಂದು ಐತಿಹಾಸಿಕ ಕುಂಭ ಮೇಳವಾಗಿದೆ. ಇಷ್ಟು ಹಿಂದೂಗಳೂ ಯಾವತ್ತು ಒಟ್ಟಿಗೆ ಸೇರಿರಲಿಲ್ಲ. ಮಹಾಕುಂಭಕ್ಕೆ ಆಗಮಿಸಿದ ಜನರ ಸಂಖ್ಯೆ ಅಮೆರಿಕದ ಜನಸಂಖ್ಯೆಗೆ ಸರಿಸುಮಾರು ಸಮಾನವಾಗಿದೆ ಎಂದು ತಿಳಿದರೆ ಜಗತ್ತೇ ಬೆರಗಾಗುತ್ತದೆ ಎಂದು ಅವರು ಹೇಳಿದ್ದರು.