ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

3 ರಾಷ್ಟ್ರಗಳ ಪ್ರವಾಸ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ: ಭಾರತದೊಂದಿಗಿನ ಸಂಬಂಧಕ್ಕೆ ಮತ್ತಷ್ಟು ಬಲ

PM Modi begins 3-nation tour: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೂರು ರಾಷ್ಟ್ರಗಳ ಪ್ರವಾಸ ಆರಂಭಿಸಿದ್ದಾರೆ. ಈ ಭೇಟಿಯು ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ಜತೆಗಿನ ಭಾರತದ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

3 ರಾಷ್ಟ್ರಗಳ ಪ್ರವಾಸ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) -

Priyanka P
Priyanka P Jul 6, 2026 4:48 PM

ನವದೆಹಲಿ, ಜು. 6: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮೂರು ರಾಷ್ಟ್ರಗಳ ಪ್ರವಾಸ ಆರಂಭಿಸಿದ್ದಾರೆ. ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ತಮ್ಮ ಆರು ದಿನಗಳ ಭೇಟಿಯು ಭಾರತದ ಆ್ಯಕ್ಟ್ ಈಸ್ಟ್ ನೀತಿಯನ್ನು ಬಲಪಡಿಸುವುದರ ಜತೆಗೆ, ಮಹಾಸಾಗರ ದೃಷ್ಟಿಕೋನವನ್ನು ಮುನ್ನಡೆಸುತ್ತದೆ. ಅಲ್ಲದೆ, ಮುಕ್ತ, ಎಲ್ಲರನ್ನೂ ಒಳಗೊಂಡ ಇಂಡೋ-ಪೆಸಿಫಿಕ್‌ಗೆ (Indo-Pacific) ದೇಶದ ಬದ್ಧತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಈ ಮೂರು ಪ್ರಮುಖ ಮಿತ್ರ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನೂ ಮತ್ತಷ್ಟು ಬಲಪಡಿಸಲಿದೆ.

ಈ ಭೇಟಿಯು ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ಜತೆಗಿನ ಭಾರತದ ಸಂಬಂಧಗಳಲ್ಲಿನ ಬಲವಾದ ವೇಗವನ್ನು ಈ ಭೇಟಿ ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಅವರು ಹೇಳಿದರು. ಅಲ್ಲದೆ, ಕಾರ್ಯತಂತ್ರ, ಆರ್ಥಿಕತೆ ಮತ್ತು ಜನಕೇಂದ್ರಿತ ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಅವರು ಭಾರತದಿಂದ ತೆರಳುವ ಮುನ್ನ ತಿಳಿಸಿದರು.

ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರ ಆಹ್ವಾನದ ಮೇರೆಗೆ ಪ್ರಧಾನಿ ಜುಲೈ 6ರಿಂದ 8ರವರೆಗೆ ಇಂಡೋನೇಷ್ಯಾ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. 2018ರ ತಮ್ಮ ಭೇಟಿಯ ಸಮಯದಲ್ಲಿ ಎರಡೂ ದೇಶಗಳು ತಮ್ಮ ಸಂಬಂಧಗಳನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಿದ್ದನ್ನು ನೆನಪಿಸಿಕೊಂಡ ಪ್ರಧಾನಿ, ಅಂದಿನಿಂದ ಇದು ತಮ್ಮ ಮೊದಲ ದ್ವಿಪಕ್ಷೀಯ ಭೇಟಿಯಾಗಲಿದೆ. ಹಾಗೆಯೇ 2025ರ ಜನವರಿಯಲ್ಲಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಪ್ರಬೋವೊ ಭಾರತಕ್ಕೆ ಭೇಟಿ ನೀಡಿದ ನಂತರ ಇದು ಮಹತ್ವದ ಭೇಟಿ ಎಂದು ಹೇಳಿದರು.

ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್: ಸೀಶೆಲ್ಸ್‌ನ ಅತ್ಯುನ್ನತ ಗೌರವ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ

ಇಂಡೋನೇಷ್ಯಾ ಪ್ರವಾಸದ ಸಂದರ್ಭದಲ್ಲಿ ಅವರು ಭಾರತೀಯ ವಲಸಿಗರೊಂದಿಗೆ ಸಂವಹನ ನಡೆಸಲಿದ್ದಾರೆ ಮತ್ತು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಲಿದ್ದಾರೆ. ಯುನೆಸ್ಕೋ ಪಟ್ಟಿ ಮಾಡಿರುವ ಈ ತಾಣವು ಎರಡು ರಾಷ್ಟ್ರಗಳ ನಡುವಿನ ಆಳವಾದ ಸಾಂಸ್ಕೃತಿಕ ಸಂಪರ್ಕದ ಸಂಕೇತ ಎಂದು ಬಣ್ಣಿಸಿದರು.

ಅಲ್ಲಿಂದ ಪ್ರಧಾನಿ ನರೇಂದ್ರ ಮೋದಿ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ. ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ. ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಶಿಕ್ಷಣ ಇತ್ಯಾದಿ ಕುರಿತು ಉಭಯ ನಾಯಕರು ಚರ್ಚಿಸಲಿದ್ದಾರೆ. ಮೆಲ್ಬೋರ್ನ್‌ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಲು ಸಹ ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರವಾಸದ ಕೊನೆಯ ಭೇಟಿಯಾಗಿ ಆಕ್ಲೆಂಡ್ ತಲುಪಲಿರುವ ಅವರು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಭೇಟಿ ಮಾಡಲಿದ್ದಾರೆ. ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಆರ್ಥಿಕ, ವ್ಯಾಪಾರ ಮತ್ತು ವಾಣಿಜ್ಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಲಿದ್ದಾರೆ.