ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

'ಯುವಕರ ಭವಿಷ್ಯಕ್ಕೆ ಆದ್ಯತೆ' ಪ್ರತಿಜ್ಞೆ ಮುರಿದಿದ್ದಾರೆ ಪ್ರಧಾನಿ ನರೇಂದ್ರ ಮೋದಿ: ರಾಹುಲ್ ಗಾಂಧಿ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರು ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕೆ ಪ್ರಮುಖ ಆದ್ಯತೆ ನೀಡುವುದಾಗಿ ಹೇಳಿರುವ ಪ್ರತಿಜ್ಞೆಯನ್ನು ಮುರಿದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯ ಮೇಲೆ ಸಂಪೂರ್ಣ ಹಿಡಿತ ಸಾಧಿಸಿ ಅದನ್ನು ನಾಶ ಮಾಡಲು ಪ್ರೋತ್ಸಾಹಿಸಿದ್ದೀರಿ ಎಂದು ಅವರು ಹೇಳಿದ್ದಾರೆ.

ಸಂಗ್ರಹ ಚಿತ್ರ

ನವದೆಹಲಿ: ಸಂಸತ್ ಚಲೋ ಅಭಿಯಾನ ನಡೆಸುತ್ತಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರ (CJP protest) ಮೇಲೆ ಪೊಲೀಸ್ ದೌರ್ಜನ್ಯವು ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಿದೆ. ವಿರೋಧ ಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಕಾಂಗ್ರೆಸ್ ನಾಯಕ (leader of the opposition) ರಾಹುಲ್ ಗಾಂಧಿ (rahul gandhi) ಅವರು ಗುರುವಾರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರವು ದೇಶದ ಯುವಕರ ಭವಿಷ್ಯಕ್ಕೆ ಹಾನಿ ಮಾಡಿದೆ ಎಂದು ಆರೋಪಿಸಿದರು.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಅವರು ಯುವಕರ ಕಲ್ಯಾಣ ಮತ್ತು ಭವಿಷ್ಯ ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಅದಕ್ಕೆ ಹಾನಿ ಮಾಡಲು ಪ್ರಯತ್ನಿಸಿದವರನ್ನು ಬಿಡಲಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಆದರೆ ಈಗ ಅವರ ಸರ್ಕಾರ ಈ ಪ್ರತಿಜ್ಞೆಯನ್ನು ಮುರಿದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯಲ್ಲಿ ಹಿಂಸಾಚಾರ: ಇಬ್ಬರು ಎಸಿಪಿಗಳ ಮೇಲೆ ಪ್ರತಿಭಟನಾಕಾರರಿಂದ ದಾಳಿ

ಯುವಕರ ಭವಿಷ್ಯಕ್ಕೆ ಹೆಚ್ಚಿನ ಹಾನಿ ಮಾಡಿದ್ದೀರಿ. ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ನಿಯಂತ್ರಣದಲ್ಲಿರಿಸಿ ಅದನ್ನು ನಾಶ ಮಾಡಲು ಪ್ರೋತ್ಸಾಹಿಸುತ್ತಿದ್ದೀರಿ. ಇದಕ್ಕೆ ಕಾರಣರಾದ ಪ್ರತಿಯೊಬ್ಬ ವ್ಯಕ್ತಿಯನ್ನು ಕೂಡ ರಕ್ಷಿಸಿದ್ದೀರಿ ಎಂದು ಹೇಳಿದ್ದಾರೆ.



ಈ ಕುರಿತು ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ ಬರೆದಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಿಂದಿನ ಪೋಸ್ಟ್‌ನಲ್ಲಿ "ಯುವಕರ ಕಲ್ಯಾಣ ಮತ್ತು ಭವಿಷ್ಯ" ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದ್ದರು. ಅಲ್ಲದೇ ಅದಕ್ಕೆ ಹಾನಿ ಮಾಡಲು ಪ್ರಯತ್ನಿಸಿದವರನ್ನು ಬಿಡಲಾಗುವುದಿಲ್ಲ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರು ವಿದ್ಯಾರ್ಥಿ ಪ್ರತಿಭಟನಾಕಾರರ ಬೇಡಿಕೆಯ ಬಗ್ಗೆಯೂ ಉಲ್ಲೇಖಿಸಿದ್ದು, ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಿ, ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿ, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

ಪ್ರತಿಭಟನಾಕಾರರ ಬೇಡಿಕೆಗಳು ಮಾತುಕತೆಗೆ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ನಾಯಕರು ಹೇಳಿರುವುದಾಗಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ರಾಹುಲ್ ಗಾಂಧಿ ತಮ್ಮ ನಿಲುವಿಗೆ ತಾವು ಬದ್ಧರಾಗಿರುವುದಾಗಿ ತಿಳಿಸಿದರು. ಕಾಂಗ್ರೆಸ್‌ನ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಇದನ್ನು ಪುನರುಚ್ಚರಿಸಿದರು.

ಸಂಸತ್ತು ಒತ್ತಾಯಿಸಿದರೂ ಕೂಡ ಪ್ರಧಾನಿಯವರು ಸಂಸತ್ತಿನಲ್ಲಿ ಎದ್ದು ನಿಂತು ಮಾತನಾಡುವ ಧೈರ್ಯ ತೋರಿಲ್ಲ. ಅವರಿಗೆ ಗಂಭೀರ ಚರ್ಚೆಯಲ್ಲಿ ತೊಡಗಿಸಿಕೊಳ್ಳಲು ಧೈರ್ಯವಿಲ್ಲ ಎಂದು ಜೈರಾಮ್ ರಮೇಶ್ ಹೇಳಿದರು.

ದೇಶದ ಯುವಜನತೆಗೆ ಪ್ರಧಾನಿ ಸಂದೇಶ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಮೋದಿ ಹೇಳಿದ್ದೇನು?

ದೇಶಾದ್ಯಂತ ವಿದ್ಯಾರ್ಥಿಗಳು ಎತ್ತುತ್ತಿರುವ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ ಎಂದು ತೋರಿಸಲು ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಅವರು ಹಂಚಿಕೊಂಡಿದ್ದಾರೆ. ವಾಸ್ತವವಾಗಿ ಅವರು ಹೆದರಿದ್ದಾರೆ ಈ,ಎಂಬುದನ್ನು ಇದು ತೋರಿಸುತ್ತದೆ ಎಂದರು.

ವಿದ್ಯಾ ಇರ್ವತ್ತೂರು

View all posts by this author