ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Narendra Modi: ಪಿಎಂ ಕಿಸಾನ್‌ ನಿಧಿಯ 19ನೇ ಕಂತು ಬಿಡುಗಡೆ; 22 ಸಾವಿರ ಕೋಟಿ ರೂ. ರಿಲೀಸ್‌ ಮಾಡಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದರು. ಭಾಗಲ್ಪುರಕ್ಕೆ ಆಗಮಿಸಿದ ಪ್ರಧಾನಿಯವರನ್ನು ಉನ್ನತ ನಾಯಕರು ಮಖಾನದಿಂದ ಮಾಡಿದ ಹಾರವನ್ನು ನೀಡಿ ಸನ್ಮಾನಿಸಿದ್ದಾರೆ.

ಪಿಎಂ ಕಿಸಾನ್‌ 19ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ

ಬಿಹಾರದ ಕಾರ್ಯಕ್ರಮದಲ್ಲಿ ಮೋದಿ

Profile Vishakha Bhat Feb 24, 2025 4:55 PM

ಪಟನಾ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸೋಮವಾರ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದರು ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19 ನೇ ಕಂತಿನ ಅಡಿಯಲ್ಲಿ ಭಾಗಲ್ಪುರದಿಂದ 9.8 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 22,000 ಕೋಟಿ ರೂ.ಗಳನ್ನು ಪ್ರಧಾನ ಮಂತ್ರಿ ವರ್ಗಾಯಿಸಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2019ರ ಫೆಬ್ರವರಿ 24ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (PM Kisan Scheme) ನಿಧಿ ಯೋಜನೆಯನ್ನು ಜಾರಿಗೊಳಿಸಿದೆ.



ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬಿಹಾರದ ಭಾಗಲ್ಪುರದ ರ್ಯಾಲಿ ಸ್ಥಳಕ್ಕೆ ತೆರೆದ ವಾಹನದ ಮೇಲೆ ರಾಜ್ಯ ಮುಖ್ಯಮಂತ್ರಿ ಮತ್ತು ಎನ್‌ಡಿಎ ಮಿತ್ರಪಕ್ಷ ನಿತೀಶ್ ಕುಮಾರ್ ಅವರೊಂದಿಗೆ ಆಗಮಿಸಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ "ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವುದರ ಜೊತೆಗೆ ಬಿಹಾರದ ಪವಿತ್ರ ಭೂಮಿಯ ನಮ್ಮ ರೈತ ಸಹೋದರ ಸಹೋದರಿಯರ ಖಾತೆಗಳಿಗೆ ಪಿಎಂ-ಕಿಸಾನ್ ಯೋಜನೆಯ 19 ನೇ ಕಂತನ್ನು ವರ್ಗಾಯಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ" ಎಂದು ಹೇಳಿದ್ದಾರೆ. ರೈತರು ಎದುರಿಸುತ್ತಿರುವ ಪ್ರತಿಯೊಂದು ಸವಾಲನ್ನು ಎದುರಿಸಲು ತಮ್ಮ ಸರ್ಕಾರ ಅವಿಶ್ರಾಂತವಾಗಿ ಶ್ರಮಿಸಿದೆ ಎಂದು ಅವರು ಹೇಳಿದ್ದಾರೆ. ರೈತರ ಕಲ್ಯಾಣಕ್ಕೆ ಎನ್‌ಡಿಎಯ ಬದ್ಧತೆಯನ್ನು ಒತ್ತಿ ಹೇಳಿದ ಅವರು, "ನಾನು ಯಾವಾಗಲೂ ಬಡವರು, 'ಅನ್ನದಾತರು, ಯುವಕರು ಮತ್ತು ಮಹಿಳೆಯರನ್ನು ಪ್ರಜಾಪ್ರಭುತ್ವದ ನಾಲ್ಕು ಸ್ತಂಭಗಳೆಂದು ಪರಿಗಣಿಸಿದ್ದೇನೆ ಎಂದು ಹೇಳಿದ್ದಾರೆ.



ಈ ಸುದ್ದಿಯನ್ನೂ ಓದಿ: PM Kisan Scheme: ತಿಂಗಳಾಂತ್ಯದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ 19ನೇ ಕಂತು ಬಿಡುಗಡೆ? ಅರ್ಜಿ ಸಲ್ಲಿಕೆ ಹೇಗೆ?

ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು ಪ್ರಧಾನಿಯವರ ಈ ಪ್ರವಾಸ ನಡೆದಿದೆ. ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಸರ್ಕಾರ ಐದನೇ ಅವಧಿಗೆ ಅಧಿಕಾರ ಹಿಡಿಯುವ ನಿರೀಕ್ಷೆಯಲ್ಲಿದೆ. ಭಾಗಲ್ಪುರಕ್ಕೆ ಆಗಮಿಸಿದ ಪ್ರಧಾನಿಯವರನ್ನು ಉನ್ನತ ನಾಯಕರು 'ಮಖಾನ'ದಿಂದ ಮಾಡಿದ ಹಾರವನ್ನು ನೀಡಿ ಸನ್ಮಾನಿಸಿದ್ದಾರೆ.