ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
PM Narendra Modi: ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ಪೀಡಿತ ಇರಾನ್‌ನ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಈದ್ ಶುಭಾಶಯ ತಿಳಿಸಿದ ಮೋದಿ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.
ಮಸೂದ್ ಪೆಜೆಶ್ಕಿಯನ್ ಮತ್ತು ನರೇಂದ್ರ ಮೋದಿ (ಸಂಗ್ರಹ ಚಿತ್ರ) -
ದೆಹಲಿ, ಮಾ. 21: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದ ಬಳಿಕ ಪಶ್ಚಿಮ ಏಷ್ಯಾ ಹೊತ್ತಿಉರಿಯುತ್ತಿದ್ದು, ಯುದ್ಧ ಮುಂದುವರಿದಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ (Masoud Pezeshkian) ಜತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಈದ್ ಶುಭಾಶಯ ತಿಳಿಸಿದ ಮೋದಿ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದರು. "ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದ್ದೇನೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ ತರಲಿದೆ ಎಂದು ನಾವು ಆಶಿಸುತ್ತೇವೆ" ಎಂಬುದಾಗಿ ಮೋದಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇರಾನ್‌ನ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ನಡೆದ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ, "ಪ್ರಾದೇಶಿಕ ಸ್ಥಿರತೆಗೆ ಬೆದರಿಕೆ ಒಡ್ಡುವ ಮತ್ತು ಜಾಗತಿಕ ಪೂರೈಕೆ ಸರಪಳಿಗೆ ಅಡ್ಡಿಪಡಿಸುವ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಖಂಡಿಸುತ್ತೇನೆ" ಎಂದು ಹೇಳಿದರು.
ಮೋದಿ ಅವರ ಎಕ್ಸ್ ಪೋಸ್ಟ್:
Spoke with President Dr. Masoud Pezeshkian and conveyed Eid and Nowruz greetings. We expressed hope that this festive season brings peace, stability and prosperity to West Asia.
— Narendra Modi (@narendramodi) March 21, 2026
Condemned attacks on critical infrastructure in the region, which threaten regional stability and…
ಜಾಗತಿಕ ವ್ಯಾಪಾರದ ಅಡೆತಡೆಯಿಲ್ಲದ ಚಲನೆಯನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಸಂಚಾರ ಸ್ವಾತಂತ್ರ್ಯವನ್ನು ರಕ್ಷಿಸುವ ಮತ್ತು ಹಡಗು ಮಾರ್ಗಗಳು ಮುಕ್ತ ಮತ್ತು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಅವರು ಪುನರುಚ್ಚರಿಸಿದರು. ಇರಾನ್‌ನಲ್ಲಿರುವ ಭಾರತೀಯರ ಸುರಕ್ಷತೆಗೆ ಕ್ರಮ ಕೈಗೊಂಡಿರುವ ಅಲ್ಲಿನ ಸರ್ಕಾರದ ಕ್ರಮವನ್ನು ಮೋದಿ ಶ್ಲಾಘಿಸಿದರು. ಫೆಬ್ರವರಿ 28ರಂದು ಯುದ್ಧ ಆರಂಭವಾದ ಬಳಿಕ ನರೇಂದ್ರ ಮೋದಿ ಮತ್ತು ಡಾ. ಮಸೂದ್ ಪೆಜೆಶ್ಕಿಯನ್ ಮಾತನಾಡುತ್ತಿರುವುದು ಇದು 2ನೇ ಬಾರಿ.
ಇರಾನ್ ದಾಳಿಯಿಂದ ಕತಾರ್ ಎಲ್‌ಎನ್‌ಜಿ ರಫ್ತಿಗೆ ಅಡ್ಡಿ: ಭಾರತ ಸೇರಿ ಹಲವು ರಾಷ್ಟ್ರಗಳ ಕಾಡಲಿದ್ಯಾ ಇಂಧನ ಕೊರತೆ?
ಈ ತಿಂಗಳ ಆರಂಭದಲ್ಲಿ ಈ ಇಬ್ಬರು ನಾಯಕರು ಮಾತುಕತೆ ನಡೆಸಿದ್ದರು. ಈ ವೇಳೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಪರಿಸ್ಥಿತಿ ಕುರಿತು ಚರ್ಚಿಸಿದ್ದಾಗಿ ಮೋದಿ ಹೇಳಿದ್ದರು. ಉದ್ವಿಗ್ನ ಪರಿಸ್ಥಿತಿ, ನಾಗರಿಕರ ಜೀವಹಾನಿ ಹಾಗೂ ಮೂಲಸೌಕರ್ಯಕ್ಕೆ ಹಾನಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಜತೆಗೆ ಭಾರತೀಯ ಸುರಕ್ಷತೆ ಬಗ್ಗೆಯೂ ಮೋದಿ ಧ್ವನಿಗೂಡಿಸಿದ್ದರು.
ಹೊರ್ಮುಜ್ ಜಲಸಂಧಿಯ ಬಗ್ಗೆ ಹೆಚ್ಚುತ್ತಿದೆ ಕಳವಳ
ಇರಾನ್‌ನಲ್ಲಿರುವ ಜಗತ್ತಿನ ಶೇಕಡಾ 65 ತೈಲ ಸಾಗಣೆ ನಡೆಯುವ ಹೊರ್ಮುಜ್ ಜಲಸಂಧಿ ಸದ್ಯ ಸ್ಥಗಿತಗೊಂಡಿದ್ದು, ಭಾರತ ಸೇರಿದಂತೆ ವಿವಿಧ ದೇಶಗಳ ನೂರಾರು ಹಡಗುಗಳು ಸಿಲುಕಿಕೊಂಡಿವೆ. ಸದ್ಯ ಇರಾನ್ ಭಾರತದ ಕೆಲವು ಹಡಗುಗಗಳಿಗೆ ಸಾಗಲು ಅನುಮತಿ ನೀಡಿದೆ. ಇದರಿಂದ ದೇಶದಲ್ಲಿ ಕಾಣಿಸಿಕೊಂಡಿರುವ ಇಂಧನ ಬಿಕ್ಕಷ್ಟು ತಕ್ಕ ಮಟ್ಟಿಗೆ ಬಗರಹರಿದಿದ್ದು, ಸಂಪೂರ್ಣ ಸಾಮಾನ್ಯ ಸ್ಥಿತಿಗೆ ಇನ್ನೂ ಬಂದಿಲ್ಲ. ಈಗಲೂ ಕಮರ್ಷಿಯಲ್ ಎಲ್‌ಪಿಜಿ ಕೊರತೆ ಮುಂದುವರಿದ್ದಿದ್ದು, ಸಮಸ್ಯೆ ಶೀರದಲ್ಲೇ ಬಗೆಹರಿಯುವ ಭರವಸೆ ಮೂಡಿದೆ.
ಇಸ್ರೇಲ್-ಅಮೆರಿಕಕ್ಕೆ ಸವಾಲೊಡ್ಡಿದ ಕೆಲವೇ ಹೊತ್ತಲ್ಲಿ ಇರಾನ್ ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿಯ ಹತ್ಯೆ
1,400 ಮಂದಿ ಸಾವು
ಕಳೆದ ಮಾಸಾಂತ್ಯಕ್ಕೆ ಆರಂಭವಾದ ಯುದ್ಧದಿಂದ ಇರಾನ್‌ನಲ್ಲಿ ಇದುವರೆಗೆ 1,400 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ 204 ಮಕ್ಕಳೂ ಸೇರಿದ್ದಾರೆ. ಜತೆಗೆ ಹಲವು ಕಟ್ಟಡಗಳಿಗೆ ಹಾನಿಯಾಗಿದೆ. ಸದ್ಯ ಯುದ್ಧ ನಿಲ್ಲುವ ಯಾವುದೇ ಲಕ್ಷಣ ಕಂಡು ಬರುತ್ತಿಲ್ಲ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.
ವಿದೇಶ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.