ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರಧಾನಿ ನರೇಂದ್ರ ಮೋದಿ ಸೆಲ್ಫಿ ವಿಡಿಯೊ ಎಫೆಕ್ಟ್‌; ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಸಂಖ್ಯೆ ಒಮ್ಮೆಲೇ 11 ಲಕ್ಷ ಏರಿಕೆ

PM Narendra Modi: ಪ್ರಧಾನಿ ನರೇಂದ್ರ ಮೋದಿ ಗುರುವಾರ (ಜು. 23) ತಡರಾತ್ರಿ ದೇಶದ ಯುವ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸೆಲ್ಫಿ ವಿಡಿಯೊವನ್ನು ಹಂಚಿಕೊಂಡಿದ್ದರು. ಈ ವಿಡಿಯೊದ ಮೂಲಕ ಮೋದಿ ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆಯ ಬಗ್ಗೆ ಮಾತನಾಡಿದ್ದರು. ಪ್ರಸ್ತುತ ಮೋದಿ ಇನ್‌ಸ್ಟಾಗ್ರಾಂನಲ್ಲಿ 102 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ.

ಮೋದಿ ಇನ್‌ಸ್ಟಾಗ್ರಾಂ  ಹಿಂಬಾಲಕರ ಸಂಖ್ಯೆ ಒಮ್ಮೆಲೇ 11 ಲಕ್ಷಕ್ಕೆ ಏರಿಕೆ

ನರೇಂದ್ರ ಮೋದಿ (ಸಂಗ್ರಹ ಚಿತ್ರ) -

Priyanka P
Priyanka P Jul 25, 2026 8:19 PM

ದೆಹಲಿ, ಜು. 25: ಪ್ರಧಾನಿ ನರೇಂದ್ರ ಮೋದಿ (PM Narendra Modi) ಗುರುವಾರ (ಜುಲೈ 23) ತಡರಾತ್ರಿ ದೇಶದ ಯುವಕರನ್ನು ಉದ್ದೇಶಿಸಿ ಮಾತನಾಡಿದ ವಿಡಿಯೊವನ್ನು ಹಂಚಿಕೊಂಡಿದ್ದು, ಆ ಮೂಲಕ ಹೊಸದೊಂದು ದಾಖಲೆ ಬರೆದಿದ್ದಾರೆ. ಈ ವಿಡಿಯೊದ ಮೂಲಕ ಮೋದಿ ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆಯ ಬಗ್ಗೆ ಮಾತನಾಡಿದ್ದರು. ಮೋದಿ ಈ ವಿಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಕೆಲ ಗಂಟೆಗಳಲ್ಲೇ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿತು. ವಿಡಿಯೊ ಅಪ್‌ಲೋಡ್‌ ಆಗಿ 24 ಗಂಟೆಗಳು ಕಳೆದಿಲ್ಲ, ಆಗಲೇ ಸುಮಾರು 28 ಕೋಟಿ ವೀಕ್ಷಣೆ ಕಂಡಿದೆ. ಇದೇ ವೇಳೆ ಪ್ರಧಾನಿ ಮೋದಿ ಅವರ ಇನ್‌ಸ್ಟಾಗ್ರಾಂ ಖಾತೆಯು ಈ ವಿಡಿಯೊ ಮೂಲಕ 11 ಲಕ್ಷ ಹೆಚ್ಚುವರಿ ಫಾಲೋವರ್ಸ್‌ ಪಡೆದುಕೊಂಡಿತು.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಇನ್‌ಸ್ಟಾಗ್ರಾಂನಲ್ಲಿ 102 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ. ಸಚಿವ ಸಂಪುಟದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳು ಬರಲಿವೆ ಎಂಬ ಶೀರ್ಷಿಕೆಯ ವಿಡಿಯೊ ಇದುವರೆಗೆ 271 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಇನ್‌ಸ್ಟಾಗ್ರಾಂನಲ್ಲಿ 15 ಮಿಲಿಯನ್ ಲೈಕ್ಸ್‌ಗಳು ಮತ್ತು 1.3 ಮಿಲಿಯನ್ ಕಮೆಂಟ್‌ಗಳನ್ನು ಗಳಿಸಿದೆ.

ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತರಲಿದೆ ಎಂದು ಅವರು ವಿಡಿಯೊದಲ್ಲಿ ಘೋಷಿಸಿದರು. ಶುಕ್ರವಾರ (ಜುಲೈ 24) ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ಕಾರ್ಯಸೂಚಿಯ ಬಗ್ಗೆಯೂ ಅವರು ಮಾಹಿತಿ ನೀಡಿದರು. ʼʼಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ ಎಂದು ನನಗೆ ತಿಳಿದಿದೆ. ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಇದು ತುಂಬಾ ನೋವಿನ ಸಂಗತಿʼʼ ಎಂದು ಅವರು ಹೇಳಿದರು.

ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮಾಡಿ; ಸಚಿವರಿಗೆ ಸಲಹೆ ಕೊಟ್ಟ ಪ್ರಧಾನಿ ಮೋದಿ

ʼʼಪ್ರಶ್ನೆಪತ್ರಿಕೆ ಸೋರಿಕೆಯ ನಂತರ ಕಳೆದ ಎರಡೂವರೆ ತಿಂಗಳಲ್ಲಿ ಹಲವು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಪರಾಧಿಗಳನ್ನು ಬಂಧಿಸಲಾಗಿದೆ. ವಿದ್ಯಾರ್ಥಿಗಳ ಒಂದು ವರ್ಷ ವ್ಯರ್ಥವಾಗದಂತೆ ನೋಡಿಕೊಳ್ಳುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿತ್ತು. 22 ಲಕ್ಷ ವಿದ್ಯಾರ್ಥಿಗಳು ಕಡಿಮೆ ಸಮಯದಲ್ಲಿ ಪರೀಕ್ಷೆ ಬರೆಯುವಂತೆ ನೋಡಿಕೊಳ್ಳಲು ಸರ್ಕಾರ ತನ್ನೆಲ್ಲ ಶಕ್ತಿಯನ್ನು ಬಳಸಿದೆʼʼ ಎಂದು ಅವರು ವಿವರಿಸಿದರು.

ಶುಕ್ರವಾರ ಕೇಂದ್ರ ಸಚಿವ ಸಂಪುಟವು ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಕಾನೂನಿನ ತಿದ್ದುಪಡಿಗಳನ್ನು ಅಂಗೀಕರಿಸಿದ್ದು, ಅಕ್ರಮದಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆಯನ್ನು ಪ್ರಸ್ತಾಪಿಸಿದೆ. ಪರಿಷ್ಕೃತ ಕಾನೂನು 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಕೋಟಿ ರುಪಾಯಿವರೆಗೆ ದಂಡ ವಿಧಿಸಲು ಅವಕಾಶ ನೀಡುತ್ತದೆ ಮತ್ತು ಕನಿಷ್ಠ ಜೈಲು ಶಿಕ್ಷೆಯನ್ನು ಮೂರು ವರ್ಷದಿಂದ ಐದು ವರ್ಷಗಳಿಗೆ ಹೆಚ್ಚಿಸುತ್ತದೆ ಎಂದು ಮೂಲಗಳು ತಿಳಿಸಿವೆ.