ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: "ಈ ಹೇಯ ಕೃತ್ಯದ ಹಿಂದಿರುವವರನ್ನು ಬಿಡುವ ಮಾತೇ ಇಲ್ಲ" ; ಉಗ್ರರಿಗೆ ಖಡಕ್‌ ಎಚ್ಚರಿಕೆ ನೀಡಿದ ಪ್ರಧಾನಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದು, ಘಟನೆಯಲ್ಲಿ ಕರ್ನಾಟಕ ಮೂಲದ ಉದ್ಯಮಿ ಮಂಜುನಾಥ್‌ ಅವರು ಮೃತಪಟ್ಟಿದ್ದಾರೆ. ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ. ಈ ಘಟನೆಯನ್ನು ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಉಗ್ರರಿಗೆ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ.

ಪಹಲ್ಗಾಮ್ ದಾಳಿಕೋರರನ್ನು ಬಿಡುವುದಿಲ್ಲ; ಪ್ರಧಾನಿ ಮೋದಿ

Profile Vishakha Bhat Apr 22, 2025 7:27 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದು, ಘಟನೆಯಲ್ಲಿ ಕರ್ನಾಟಕ ಮೂಲದ ಉದ್ಯಮಿ ಮಂಜುನಾಥ್‌ ಅವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 12 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಅನಂತ್‌ನಾಗ್‌ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಖಂಡಿಸಿದ್ದಾರೆ. ಈ ಘಟನೆಯನ್ನು ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಉಗ್ರರಿಗೆ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ. ಅವರು ಟ್ವೀಟ್‌ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಎರಡು ದಿನಗಳ ಸೌದಿ ಪ್ರವಾಸದಲ್ಲಿರುವ ಪ್ರಧಾನಿ ಟ್ವೀಟ್‌ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ" ಎಂದು ಅವರು ಹೇಳಿದರು.



ಈ ಹೇಯ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಅವರನ್ನು ನಾವು ಸುಮ್ಮನರ ಬಿಡುವುದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಅವರ ದುಷ್ಟ ಕಾರ್ಯ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದರು. , ಕೇಂದ್ರ ಗೃಹ ಸಚಿವರು ಇಂದು ಸಂಜೆ 7 ಗಂಟೆಗೆ ಪಹಲ್ಗಾಮ್ ತಲುಪಲಿದ್ದಾರೆ. ಇದರ ನಡುವೆ, ಅಮಿತ್​ ಶಾ ಅವರು ಗುಪ್ತಚರ ಇಲಾಖೆಯ (IB) ಮುಖ್ಯಸ್ಥರು, ಜಮ್ಮು ಮತ್ತು ಕಾಶ್ಮೀರದ ಡಿಜಿಪಿ, ಸೇನೆ, ಮತ್ತು CRPFನ ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Terror Attack: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ; ಆರು ಮಂದಿ ಪ್ರವಾಸಿಗರಿಗೆ ಗಾಯ



ಈ ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬದ ಸದಸ್ಯರ ಜೊತೆ ನಾವಿದ್ದೇವೆ. ಈ ಹೇಯ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಅವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.