ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Emmanuel Macron: ಉಕ್ರೇನ್‌ ಸಂಘರ್ಷ ಕೊನೆಗೊಳಿಸುವ ಬಗ್ಗೆ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜತೆ ಮೋದಿ ಚರ್ಚೆ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು. ಉಕ್ರೇನ್‌ನಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸಲು ಭಾರತ ಮತ್ತು ಫ್ರಾನ್ಸ್ ದೃಢ ಸಂಕಲ್ಪವನ್ನು ಹೊಂದಿವೆ ಎಂದು ಮೋದಿ ಅವರೊಂದಿಗಿನ ದೂರವಾಣಿ ಸಂಭಾಷಣೆಯ ನಂತರ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದರು.

ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜತೆ ಮೋದಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್. -

Ramesh B Ramesh B Sep 6, 2025 11:14 PM

ದೆಹಲಿ: ಮಹತ್ವದ ಬೆಳವಣಿಗೆೆಯೊಂದರಲ್ಲಿ ಶನಿವಾರ (ಸೆಪ್ಟೆಂಬರ್‌ 6) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು. ಉಕ್ರೇನ್‌ನಲ್ಲಿ (Ukraine War) ಶಾಶ್ವತ ಶಾಂತಿಯನ್ನು ಸ್ಥಾಪಿಸಲು ಭಾರತ ಮತ್ತು ಫ್ರಾನ್ಸ್ ದೃಢ ಸಂಕಲ್ಪವನ್ನು ಹೊಂದಿವೆ ಎಂದು ಮೋದಿ ಅವರೊಂದಿಗಿನ ದೂರವಾಣಿ ಸಂಭಾಷಣೆಯ ನಂತರ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದರು. ಜತೆಗೆ ವಿವಿಧ ವಲಯಗಳಲ್ಲಿ ಎರಡೂ ದೇಶಗಳು ತಮ್ಮ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಬಗ್ಗೆ ಎಕ್ಸ್​​ನಲ್ಲಿ ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.

ಮ್ಯಾಕ್ರನ್ ಅವರೊಂದಿಗಿನ ತಮ್ಮ ಮಾತುಕತೆ ಧನಾತ್ಮಕವಾಗಿತ್ತು ಪ್ರಧಾನಿ ಮೋದಿ ಬಣ್ಣಿಸಿದರು. "ವಿವಿಧ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರದಲ್ಲಿನ ಪ್ರಗತಿಯನ್ನು ನಾವು ದೂರವಾಣಿ ಸಂಭಾಷಣೆ ವೇಳೆ ಪರಿಶೀಲಿಸಿದ್ದೇವೆ. ಉಕ್ರೇನ್‌ನಲ್ಲಿನ ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸುವ ಪ್ರಯತ್ನಗಳು ಸೇರಿದಂತೆ ಅಂತಾರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಶಾಂತಿ ಮತ್ತು ಸ್ಥಿರತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ" ಎಂದು ಮೋದಿ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.



ಈ ಸುದ್ದಿಯನ್ನೂ ಓದಿ: Donald Trump: ಮೋದಿ ಯಾವಗಲೂ ನನ್ನ ಉತ್ತಮ ಸ್ನೇಹಿತ; ಉಲ್ಟಾ ಹೊಡೆದ ಟ್ರಂಪ್‌

ಕಳೆದ ಒಂದು ತಿಂಗಳಲ್ಲಿ ಈ ಇಬ್ಬರು ನಾಯಕರು ನಡೆಸಿದ ಎರಡನೇ ದೂರವಾಣಿ ಸಂಭಾಷಣೆ ಇದು. ಮುಂದಿನ ವರ್ಷದ ಫೆಬ್ರವರಿಯಲ್ಲಿ ಭಾರತ ಆಯೋಜಿಸಲಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ ಆಹ್ವಾನವನ್ನು ಸ್ವೀಕರಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರು ಮ್ಯಾಕ್ರನ್‌ಗೆ ಧನ್ಯವಾದ ಅರ್ಪಿಸಿದರು. ಜತೆಗೆ ಫ್ರೆಂಚ್ ಅಧ್ಯಕ್ಷರನ್ನು ಸ್ವಾಗತಿಸಲು ಎದುರು ನೋಡುತ್ತಿರುವುದಾಗಿ ತಿಳಿಸಿದರು.



"ಉಕ್ರೇನ್‌ನಲ್ಲಿ ತಲೆದೋರಿರುವ ಸಂಘರ್ಷವನ್ನು ಕೊನೆಗೊಳಿಸುವ ಇತ್ತೀಚಿನ ಪ್ರಯತ್ನಗಳ ಕುರಿತು ಇಬ್ಬರು ನಾಯಕರು ಮಾತುಕತೆ ನಡೆಸಿದರು. ಶಾಂತಿ ಪುನಃಸ್ಥಾಪನೆಗೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರುʼʼ ಎಂದು ಮೂಲಗಳು ತಿಳಿಸಿವೆ.