Narendra Modi: ಭಾರತ-ಬಾಂಗ್ಲಾದೇಶ ಸ್ನೇಹ ದಿನ; ಮುಹಮ್ಮದ್ ಯೂನಸ್‌ಗೆ ಪತ್ರ ಬರೆದ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರಿಗೆ ಪತ್ರ ಬರೆಯುವ ಮೂಲಕ ಶುಭ ಕೋರಿದ್ದಾರೆ. ತಮ್ಮ ಪತ್ರದಲ್ಲಿ, ಪ್ರಧಾನಿ ಮೋದಿ ಅವರು 1971 ರ ವಿಮೋಚನಾ ಯುದ್ಧದ ಐತಿಹಾಸಿಕ ಮಹತ್ವವನ್ನು ಒತ್ತಿಹೇಳಿದ್ದಾರೆ.


ಢಾಕಾ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರಿಗೆ ಪತ್ರ ಬರೆಯುವ ಮೂಲಕ ಶುಭ ಕೋರಿದ್ದಾರೆ. ತಮ್ಮ ಪತ್ರದಲ್ಲಿ, ಪ್ರಧಾನಿ ಮೋದಿ ಅವರು 1971 ರ ವಿಮೋಚನಾ ಯುದ್ಧದ ಐತಿಹಾಸಿಕ ಮಹತ್ವವನ್ನು ಒತ್ತಿಹೇಳಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಬಲವಾದ ಮತ್ತು ಶಾಶ್ವತ ಸಂಬಂಧಗಳ ಕುರಿತು ಉಲ್ಲೇಖಿಸಿದ್ದಾರೆ. ಇದಲ್ಲದೆ, ಬಾಂಗ್ಲಾದೇಶದೊಂದಿಗಿನ ಸಂಬಂಧಗಳನ್ನು ಬಲಪಡಿಸಲು ಭಾರತ 'ಬದ್ಧವಾಗಿದೆ' ಎಂದು ಪ್ರಧಾನಿ ಯೂನಸ್ ಅವರಿಗೆ ತಿಳಿಸಿದರು.
ಪತ್ರದಲ್ಲಿ ಭಾರತ ಹಾಗೂ ಬಾಂಗ್ಲಾದೇಶದ ಸಂಬಂಧದ ಬಗ್ಗೆ ಉಲ್ಲೇಖಿಸಿರುವ ಮೋದಿ, ಬಾಂಗ್ಲಾದೇಶದೊಂದಿಗಿನ ಸಂಬಂಧಗಳನ್ನು ಬಲಪಡಿಸಲು ಭಾರತ 'ಬದ್ಧವಾಗಿದೆ' ಆದರೆ ಪರಸ್ಪರ ನಂಬಿಕೆ ವಿಶ್ವಾಸ ಅಗತ್ಯ ಎಂದು ಹೇಳಿದ್ದಾರೆ.ಬಾಂಗ್ಲಾದೇಶದ ರಾಷ್ಟ್ರೀಯ ದಿನದಂದು ನಿಮಗೆ ಮತ್ತು ಬಾಂಗ್ಲಾದೇಶದ ಜನರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ದಿನವು ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯ ಅಡಿಪಾಯವನ್ನು ಹಾಕಿದ ನಮ್ಮ ಹಂಚಿಕೆಯ ಇತಿಹಾಸ ಮತ್ತು ತ್ಯಾಗಗಳಿಗೆ ಸಾಕ್ಷಿಯಾಗಿದೆ. ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಪರಸ್ಪರ ಸಂವೇದನೆಯನ್ನು ಆಧರಿಸಿ ಈ ಪಾಲುದಾರಿಕೆಯನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ" ಎಂದು ಅವರು ಹೇಳಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಾಂಗ್ಲಾದೇಶದ ರಾಷ್ಟ್ರಪತಿ ಮೊಹಮ್ಮದ್ ಶಹಾಬುದ್ದೀನ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ನವ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ನಿಮ್ಮ ರಾಷ್ಟ್ರೀಯ ದಿನದ ಸಂದರ್ಭದಲ್ಲಿ ಸರ್ಕಾರದ ಪರವಾಗಿ, ಭಾರತದ ಜನರ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮಗೆ ಮತ್ತು ಬಾಂಗ್ಲಾದೇಶದ ಸ್ನೇಹಪರ ಜನರಿಗೆ ಹೃತ್ಪೂರ್ವಕ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ಸಲ್ಲಿಸುತ್ತೇನೆ" ಎಂದು ಮುರ್ಮು ಹೇಳಿದರು. ಭಾರತ-ಬಾಂಗ್ಲಾದೇಶ ಸಂಬಂಧಗಳು ಬಹುಮುಖಿಯಾಗಿದ್ದು, ನಮ್ಮ ಸಹಕಾರವು ವ್ಯಾಪಾರ, ಬಹುಮಾದರಿ ಸಂಪರ್ಕ, ಅಭಿವೃದ್ಧಿ ಪಾಲುದಾರಿಕೆ, ವಿದ್ಯುತ್ ಮತ್ತು ಇಂಧನ, ಶಿಕ್ಷಣ, ಸಾಮರ್ಥ್ಯ ವೃದ್ಧಿ, ಸಾಂಸ್ಕೃತಿಕ ಸಹಕಾರ ಮತ್ತು ಜನರಿಂದ ಜನರಿಗೆ ವಿನಿಮಯದಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಒಳಗೊಂಡಿದೆ. ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತ ತನ್ನ ಬೆಂಬಲವನ್ನು ಪುನರುಚ್ಚರಿಸುತ್ತದೆ" ಎಂದು ಅವರು ಹೇಳಿದರು.
ಈ ಸುದ್ದಿಯನ್ನೂ ಓದಿ: Bangladesh Unrest: ಬಾಂಗ್ಲಾದೇಶದಲ್ಲಿ ಶೀಘ್ರವೇ ಎಮರ್ಜೆನ್ಸಿ ಜಾರಿ? ಸೇನೆಯಿಂದ ತುರ್ತು ಸಭೆ
ಡಿಸೆಂಬರ್ 6, 1971 ರಂದು ಬಾಂಗ್ಲಾದೇಶವನ್ನು ಸಾರ್ವಭೌಮ ಮತ್ತು ಸ್ವತಂತ್ರ ರಾಷ್ಟ್ರವೆಂದು ಗುರುತಿಸಲಾಗಿತ್ತು. ಮಾರ್ಚ್ 2021 ರಲ್ಲಿ, ಪ್ರಧಾನಿ ನರೇಂದ್ರ ಮೋದಿ ಈ ದಿನಾಂಕವನ್ನು ಭಾರತ-ಬಾಂಗ್ಲಾದೇಶ ಸ್ನೇಹ ದಿನ (ಮೊಯಿತ್ರೀ ದಿವಸ್) ಎಂದು ಗೊತ್ತುಪಡಿಸಿದರು.