ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

POK Protest: ಪಿಒಕೆ ಪ್ರತಿಭಟನಾಕಾರರ ಹತ್ಯೆ: ಪಾಕ್ ವಿರುದ್ಧ ಭಾರತ ವಾಗ್ದಾಳಿ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅವಾಮಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನ ನಡೆಸಿರುವ ದಮನಕಾರಿ ಕ್ರಮವನ್ನು ಭಾರತ ಖಂಡಿಸಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಪ್ರತಿಭಟನಾಕಾರರನ್ನು ಹತ್ತಿಕ್ಕುವ ಪಾಕ್ ಕ್ರಮಕ್ಕೆ ಭಾರತ ಖಂಡನೆ

-

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK Protest) ಪ್ರತಿಭಟನಾಕಾರರನ್ನು (Awami Action Committee) ಹತ್ತಿಕ್ಕಲು ಪಾಕಿಸ್ತಾನ (Pakistan) ಅಧಿಕಾರಿಗಳು ನಡೆಸಿರುವ ದಮನಕಾರಿ ಕ್ರಮವನ್ನು ಭಾರತ (India) ಖಂಡಿಸಿದೆ. ಈ ಘಟನೆಯಲ್ಲಿ (Pakistan-occupied Kashmir) ಹಲವಾರು ಮಂದಿ ಗಾಯಗೊಂಡಿದ್ದು, ಸುಮಾರು ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಇದು ಅಧಿಕಾರಿಗಳ ದಬ್ಬಾಳಿಕೆಯನ್ನು ತೋರಿಸಿದೆ. ಅಲ್ಲದೇ ಇದು ಮಾನವ ಹಕ್ಕುಗಳ (Human rights violations) ಸ್ಪಷ್ಟ ಉಲ್ಲಂಘನೆಯಾಗಿದೆ. ಇದಕ್ಕಾಗಿ ಪಾಕಿಸ್ತಾನವನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಶುಕ್ರವಾರ ಭಾರತ ಒತ್ತಾಯಿಸಿದೆ.

ನಾಗರಿಕ ಸಂಘಟನೆಗಳು ಮತ್ತು ವ್ಯಾಪಾರಿಗಳನ್ನು ಪ್ರತಿನಿಧಿಸುವ ಜಮ್ಮು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿಯು (ಜೆಎಎಸಿ) ಸರ್ಕಾರಿ ಅಧಿಕಾರಿಗಳು ಮತ್ತು ಮಂತ್ರಿಗಳಿಗೆ ವಿಶೇಷ ಸವಲತ್ತುಗಳನ್ನು ಕೊನೆಗೊಳಿಸಬೇಕು ಮತ್ತು ಜಮ್ಮು ಕಾಶ್ಮೀರದ ನಿರಾಶ್ರಿತರಿಗೆ ಮೀಸಲಾಗಿರುವ 12 ವಿಧಾನಸಭಾ ಸ್ಥಾನಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವ್ಯಾಪಕ ಪ್ರತಿಭಟನೆಗಳನ್ನು ಪ್ರಾರಂಭಿಸಿತ್ತು. ಈ ವೇಳೆ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನ ಮಿಲಿಟರಿ ಬಲಪ್ರಯೋಗವನ್ನು ಮಾಡಿದೆ. ಇದು ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಹಿಂಸಾತ್ಮಕ ಘರ್ಷಣೆಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: PoK Protest: ಇಸ್ಲಾಮಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರ; ಪ್ರತಿಭಟನೆ ಸುದ್ದಿ ಮಾಡಿದ್ದಕ್ಕೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

ಇದನ್ನು ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಜನರು ಸಂಪೂರ್ಣ ಬಂದ್ ನಡೆಸಿದರು. ಈ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸುದ್ದಿಗಾರರೊಂದಿಗೆ ಮಾತನಾಡಿ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಮುಗ್ಧ ನಾಗರಿಕರ ಮೇಲೆ ಪಾಕಿಸ್ತಾನ ಪಡೆಗಳು ದೌರ್ಜನ್ಯ ನಡೆಸುತ್ತಿರುವುದು ವರದಿಯಾಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಜಮ್ಮು, ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಅದು ಹಾಗೆಯೇ ಉಳಿಯುತ್ತದೆ ಎಂದ ಅವರು, ಇಸ್ಲಾಮಾಬಾದ್ ನಿಯಂತ್ರಣದಲ್ಲಿರುವ ಪ್ರದೇಶಗಳ ಕುರಿತು ನವದೆಹಲಿಯ ನಿಲುವನ್ನು ಪುನರುಚ್ಚರಿಸಿದರು.

ಪಾಕಿಸ್ತಾನ ಸರ್ಕಾರದಿಂದ ನಿಯೋಜಿಸಲಾದ ಅಧಿಕಾರಿಗಳು ಶುಕ್ರವಾರ ಪಾಕ್ ಆಕ್ರಮಿತ ಕಾಶ್ಮೀರದ ಮುಜಫರಾಬಾದ್‌ನಲ್ಲಿ ಜೆಎಸಿ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿತ್ತು.

ಇದನ್ನೂ ಓದಿ: Drink and Drive case: ಪತ್ರಕರ್ತ ರಾಜೀವ್ ಪ್ರತಾಪ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌; ತನಿಖಾಧಿಕಾರಿಗಳು ಹೇಳಿದ್ದೇನು?

ಸದ್ಯ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಂವಹನ ನಿರ್ಬಂಧವನ್ನು ಮುಂದುವರಿಸಲಾಗಿದ್ದು, ಸೆಪ್ಟೆಂಬರ್ 28 ರಿಂದ ದೂರಸಂಪರ್ಕ ಮತ್ತು ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಪ್ರತಿಭಟನೆ ಹತ್ತಿಕ್ಕಲು ಪಾಕ್ ಕೈಗೊಂಡ ಕ್ರಮವನ್ನು ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗ (HRCP), ಸ್ವತಂತ್ರ ಮಾನವ ಹಕ್ಕುಗಳ ಕಾವಲು ಸಂಸ್ಥೆಯು ಬಲವಾಗಿ ಖಂಡಿಸಿದೆ.