ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಳಪೆ ಸೌಕರ್ಯ: ಮೋದಿ ತರಾಟೆ

ಮಂಗಳವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಮಗಾರಿಗಳಲ್ಲಿ ಗುಣಮಟ್ಟದ ಕೊರತೆಯನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಈ ರೀತಿಯ ಕಾರ್ಯವೈಖರಿ ನಡೆಯುವುದಿಲ್ಲ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

ಸಾರ್ವಜನಿಕ ಮೂಲಸೌಕರ್ಯ ಕಳಪೆ ನಿರ್ಮಾಣಕೆ ಸಿಟ್ಟಾದ ಪ್ರಧಾನಿ ಕಾರ್ಯದರ್ಶಿಗಳಿಗೆ ಪ್ರಶ್ನೆ, 30 ಸಾವಿರ ಕೋಟಿ ಕಾಮಗಾರಿ ಪರಿಶೀಲನೆ

ದೆಹಲಿ: ನಿರ್ಮಾಣ ಹಾಗೂ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಲ್ಲಿ ಕಂಡುಬರುತ್ತಿರುವ ಕಳಪೆ ಗುಣಮಟ್ಟದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ದ್ದಾರೆ. ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗೆ ಈಗ ನಾಲ್ಕನೇ ವ್ಯಕ್ತಿಗಳಿಂದ ಆಡಿಟ್ ಮೊರೆ ಹೋಗಬೇಕೆ? ಎಂದು ಅವರು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಹಾಗೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳನ್ನು ಪ್ರಶ್ನಿಸಿದ್ದಾರೆ. ಸಾಮಾನ್ಯವಾಗಿ ಯೋಜನೆಗಳ ಗುಣಮಟ್ಟ ಪರಿಶೀಲನೆಗೆ ‘ಥರ್ಡ್ ಪಾರ್ಟಿ’ (ಮೂರನೇ ವ್ಯಕ್ತಿ/ಸಂಸ್ಥೆ) ಆಡಿಟ್ ವ್ಯವಸ್ಥೆ ಚಾಲ್ತಿಯಲ್ಲಿದ್ದರೂ ಅದು ನಿರೀಕ್ಷಿತ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: Modi-Putin: ಮೋದಿ- ಪುಟಿನ್ ಮಧ್ಯೆ ದ್ವಿಪಕ್ಷಿಯ ಒಪ್ಪಂದ; ವಿಷನ್ 2030 ಒಪ್ಪಂದಕ್ಕೆ ಸಹಿ

ಮಂಗಳವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಮಗಾರಿಗಳಲ್ಲಿ ಗುಣಮಟ್ಟದ ಕೊರತೆಯನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಈ ರೀತಿಯ ಕಾರ್ಯವೈಖರಿ ನಡೆಯುವುದಿಲ್ಲ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

ಈ ಸಭೆಯಲ್ಲಿ ರೈಲ್ವೆ, ರಸ್ತೆ ಮತ್ತು ವಿದ್ಯುತ್ ಕ್ಷೇತ್ರಗಳಿಗೆ ಸಂಬಂಧಿಸಿದಂತೆ 9 ರಾಜ್ಯಗಳಲ್ಲಿ ನಡೆಯು ತ್ತಿರುವ ಸುಮಾರು 30000 ಸಾವಿರ ಕೋಟಿ ರು. ಅಽಕ ವೆಚ್ಚದ ಆರು ಪ್ರಮುಖ ಮೂಲ ಸೌಕರ್ಯ ಯೋಜನೆಗಳ ಪ್ರಗತಿಯನ್ನು ಪ್ರಧಾನಿ ಪರಿಶೀಲಿಸಿದರು. ಮೂಲಸೌಕರ್ಯ ಕಾಮಗಾರಿಗಳನ್ನು ಕೇವಲ ಬಿಡಿಯಾಗಿ ನೋಡದೇ ಸಮಗ್ರ ದೃಷ್ಟಿಕೋನದಿಂದ ಮೇಲ್ವಿಚಾರಣೆ ನಡೆಸಬೇಕು ಎಂದು ಅವರು ತಿಳಿಸಿದರು.