ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಪಟ್ಟ? ಗರಿಗೆದರಿದ ರಾಜಕೀಯ ಚಟುವಟಿಕೆ

Mahayuti alliance: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹುದ್ದೆಗೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ. ರಾಜಕೀಯ ವಲಯಗಳಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಅಧಿಕೃತ ಘೋಷಣೆ ಹೊರಬರುವ ಬಗ್ಗೆ ನಿರೀಕ್ಷಿಸಲಾಗಿದೆ. ಸುನೇತ್ರಾ ಪವಾರ್ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದಾರೆ.

ದಿವಂಗತ ಅಜಿತ್ ಪವಾರ್ ಹಾಗೂ ಅವರ ಪತ್ನಿ ಸುನೇತ್ರಾ ಪವಾರ್ (ಸಂಗ್ರಹ ಚಿತ್ರ)

ಮುಂಬೈ, ಜ. 29: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಒಳಗೆ ಅಧಿಕಾರಕ್ಕಾಗಿ ಜಗಳ ಆರಂಭವಾಗಿದ್ದು, ದಿವಂಗತ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ (Maharashtra DCM) ಹುದ್ದೆಗೆ ಪ್ರಸ್ತಾಪಿಸಲು ಪಕ್ಷ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಸುನೇತ್ರಾ ಪವಾರ್ ಅವರನ್ನು ರಾಜ್ಯ ಸಚಿವಾಲಯಕ್ಕೆ ತರಬೇಕೆಂದು ಸಾರ್ವಜನಿಕರು ಬಯಸುತ್ತಾರೆ ಎಂದು ಹಿರಿಯ ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಎಫ್‌ಡಿಎ ಸಚಿವ ನರಹರಿ ಜಿರ್ವಾಲ್ ಹೇಳಿದ್ದಾರೆ. ಮೂಲಗಳ ಪ್ರಕಾರ, ಹಿರಿಯ ಎನ್‌ಸಿಪಿ ನಾಯಕರಾದ ಪ್ರಫುಲ್ ಪಟೇಲ್, ಛಗನ್ ಭುಜಬಲ್, ಧನಂಜಯ್ ಮುಂಡೆ ಮತ್ತು ಸುನಿಲ್ ತತ್ಕರೆ ಆಂತರಿಕ ಸಮಾಲೋಚನೆಯ ಭಾಗವಾಗಿ ಸುನೇತ್ರಾ ಪವಾರ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಅಜಿತ್ ಪವಾರ್ ಅವರಿಂದ ತೆರವಾದ ಬಾರಾಮತಿ ಕ್ಷೇತ್ರದಿಂದ ಸುನೇತ್ರಾ ಪವಾರ್ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಸ್ತಾವನೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಸೇರಿಸಿಕೊಳ್ಳುವುದು ಸೇರಿದೆ. ಪ್ರಸ್ತಾವನೆ ಮತ್ತು ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಎನ್‌ಸಿಪಿ ನಾಯಕರು ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಅಜಿತ್‌ ಪವಾರ್‌ ರಾಜಕೀಯ ಬೆನ್ನೆಲುಬು ಈಕೆ; ಪತ್ನಿ ಸುನೇತ್ರಾ ಪವಾರ್‌ ಬಗ್ಗೆ ನಿಮಗೆಷ್ಟು ಗೊತ್ತು?

ಪಕ್ಷದ ಕಾರ್ಯನಿರ್ವಹಣಾಧಿಕಾರಿ ಪ್ರಫುಲ್ ಪಟೇಲ್ ಈ ಸಮಯದಲ್ಲಿ ಎನ್‌ಸಿಪಿಯನ್ನು ಮುನ್ನಡೆಸುವ ಜವಾಬ್ದಾರಿ ವಹಿಸಬಹುದು. ಎನ್‌ಸಿಪಿ (ಎಸ್‌ಪಿ) ಜತೆಗಿನ ಸಂಭಾವ್ಯ ವಿಲೀನದ ಕುರಿತು ನಂತರದ ಹಂತದಲ್ಲಿ ಚರ್ಚೆಗಳು ನಡೆಯುವ ಸಾಧ್ಯತೆಯಿದೆ. ಪುರಸಭೆ ಚುನಾವಣೆಯ ನಂತರ ಅಜಿತ್ ಪವಾರ್ ಎನ್‌ಸಿಪಿ (ಎಸ್‌ಪಿ) ಜತೆ ವಿಲೀನದ ಕುರಿತು ಮಾತುಕತೆ ನಡೆಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಎರಡು ಎನ್‌ಸಿಪಿ ಗುಂಪುಗಳ ವಿಲೀನದ ಕುರಿತ ಪ್ರಶ್ನೆಗೆ, ಎರಡೂ ಬಣಗಳು ಈಗಾಗಲೇ ಒಟ್ಟಿಗೆ ಇವೆ. ಚದುರಿಹೋಗುವುದರಲ್ಲಿ ಯಾವುದೇ ಅರ್ಥವಿಲ್ಲ. ಒಟ್ಟಿಗೆ ಇರಬೇಕಾಗುತ್ತದೆ ಎಂದು ಎಲ್ಲರೂ ಅರಿತುಕೊಂಡಿದ್ದಾರೆ ಎಂದು ಜಿರ್ವಾಲ್ ಹೇಳಿದರು.

ಅಜಿತ್ ಪವಾರ್ ಅವರ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯೊಂದಿಗೆ ರಾಜ್ಯದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಒಂದು ಘಟಕ ಪಕ್ಷ ಎನಿಸಿಕೊಂಡಿದೆ.

ಎನ್‌ಸಿಪಿ ನಾಯಕ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ (ಜನವರಿ 28) ಬೆಳಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಪತನಗೊಂಡಿತು. ದುರ್ಘಟನೆಯಲ್ಲಿ ವಿಮಾನದಲ್ಲಿದ್ದವರೆಲ್ಲೂ ದುರ್ಮರಣಕ್ಕೀಡಾಗಿದ್ದಾರೆ. ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಗುರುವಾರ (ಜನವರಿ 29) ನೆರವೇರಿದೆ.