ಹಿಮಾಚಲ ಪ್ರದೇಶದ (Himachal Pradesh) ಸೋಲನ್ ಜಿಲ್ಲೆಯ ನಲಗಢದಲ್ಲಿರುವ ಪೊಲೀಸ್ ಠಾಣೆಯಿಂದ ಕೇವಲ ನೂರು ಮೀಟರ್ ದೂರದಲ್ಲಿ ಗುರುವಾರ ಪ್ರಬಲ (Blast) ಸ್ಫೋಟ ಸಂಭವಿಸಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಮತ್ತು ಸ್ಫೋಟದ ಕಾರಣವನ್ನು ಗುರುತಿಸಲು ತನಿಖೆ ಪ್ರಾರಂಭಿಸಲಾಗಿದೆ. ವರದಿಯ ಪ್ರಕಾರ, ಪೊಲೀಸ್ ಠಾಣೆ ಬಳಿಯ ಲೇನ್‌ನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮವು ಹತ್ತಿರದ ಕಟ್ಟಡಗಳ ಕಿಟಕಿಗಳು ಪುಡಿಪುಡಿಯಾಗಿವೆ. ಸ್ಫೋಟದ ದೊಡ್ಡ ಶಬ್ದ 400 ರಿಂದ 500 ಮೀಟರ್‌ಗಳವರೆಗೆ ಕೇಳಿಬಂದಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ಸ್ಫೋಟದ ನಂತರ ಹಿಮಾಚಲ ಪ್ರದೇಶ ಪೊಲೀಸರು ಕಾರ್ಯಪ್ರವೃತ್ತರಾದರು ಮತ್ತು ಸ್ಫೋಟದ ಕುರಿತು ಹೆಚ್ಚಿನ ತನಿಖೆಗಾಗಿ ಪ್ರದೇಶವನ್ನು ಬ್ಯಾರಿಕೇಡ್ ಹಾಕಲಾಗಿದೆ. ತನಿಖೆಗಾಗಿ ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಆಗಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರಗಿನ ನೌಗಮ್ ಪೊಲೀಸ್ ಠಾಣೆಯೊಳಗೆ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಒಂಬತ್ತು ಸಿಬ್ಬಂದಿ ಸಾವನ್ನಪ್ಪಿದರು ಮತ್ತು 32 ಜನರು ಗಾಯಗೊಂಡಿದ್ದರು. ಕಡ್ಡಾಯ ವಿಧಿವಿಜ್ಞಾನ ಕಾರ್ಯವಿಧಾನದ ಸಮಯದಲ್ಲಿ ಆಕಸ್ಮಿಕ ಸ್ಫೋಟವನ್ನು ಸೂಚಿಸಿವೆ. ರಾಜ್ಯ ತನಿಖಾ ಸಂಸ್ಥೆಯ (SIA) ಒಬ್ಬ ಅಧಿಕಾರಿ, ಮೂವರು FSL ಸಿಬ್ಬಂದಿ, ಇಬ್ಬರು ಅಪರಾಧ ದೃಶ್ಯ ಛಾಯಾಗ್ರಾಹಕರು, ಮ್ಯಾಜಿಸ್ಟ್ರೇಟ್ ತಂಡಕ್ಕೆ ಸಹಾಯ ಮಾಡುತ್ತಿದ್ದ ಇಬ್ಬರು ಕಂದಾಯ ಅಧಿಕಾರಿಗಳು ಮತ್ತು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಒಬ್ಬ ದರ್ಜಿ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಡಿಜಿಪಿ ಆ ಸಮಯದಲ್ಲಿ ಮಾಹಿತಿ ನೀಡಿದ್ದರು.
ಡ್ರೋನ್ ಮೂಲಕ ಸ್ಫೋಟಕಗಳ ರವಾನೆ; ಪಾಕಿಸ್ತಾನದ ಸಂಚು ವಿಫಲಗೊಳಿಸಿದ ಭಾರತೀಯ ಸೇನೆ
ಬಾರ್ ಸ್ಫೋಟ
ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತವೊಂದು ನಡೆದಿದೆ. ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್ ಮೊಂಟಾನಾದ ಬಾರ್‌ನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಹೊಸ ವರ್ಷದ ಆಚರಣೆಯ ಸಮಯದಲ್ಲಿ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಎಂಬ ಬಾರ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ವಿಸ್ ಪೊಲೀಸರು ಗುರುವಾರ ಮುಂಜಾನೆ ತಿಳಿಸಿದ್ದಾರೆ.