ಆಂಬುಲೆನ್ಸ್-ಬಿಎಸ್‌ಎಫ್ ಪಿಕಪ್ ಡಿಕ್ಕಿ; ಗರ್ಭಿಣಿ ಸಾವು, 7 ಮಂದಿಗೆ ಗಾಯ
Accident: ಮಣಿಪುರದಲ್ಲಿ ಅತ್ಯಂತ ಹೃದಯವಿದ್ರಾವಕ ರಸ್ತೆ ಅಪಘಾತವೊಂದು ಸಂಭವಿಸಿದ್ದು, ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ. ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ವೇಗವಾಗಿ ಬಂದ ಪಿಕಪ್ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಗೆ ಆಂಬ್ಯುಲೆನ್ಸ್ ನಜ್ಜುಗುಜ್ಜಾಗಿದ್ದು, ಜೊತೆಯಲ್ಲಿದ್ದ ಇತರರಿಗೂ ಗಾಯಗಳಾಗಿವೆ. ಆಸ್ಪತ್ರೆ ತಲುಪುವ ಮೊದಲೇ ಗರ್ಭಿಣಿ ಸಾವನ್ನಪ್ಪಿದ್ದಾರೆ.
Manipur accident -
ಇಂಫಾಲ, ನ.24: ಮಣಿಪುರದ ಬಿಷ್ಣುಪುರ ಜಿಲ್ಲೆಯ ತಿನ್ನುಂಗೈ ಎಂಬಲ್ಲಿ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ಭದ್ರತಾ ಪಡೆಗಳ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಪಿಕಪ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಗರ್ಭಿಣಿ ಮಹಿಳೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದೆ. ಪರಿಣಾಮ ಆಸ್ಪತ್ರೆ ತಲುಪುವ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಸೇರಿದಂತೆ ಮೂವರು ನಾಗರಿಕರು ಹಾಗೂ ಪಿಕಪ್ ವಾಹನದಲ್ಲಿದ್ದ ನಾಲ್ವರು ಗಡಿ ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ.
ಅಪಘಾತದ ವಿಡಿಯೊ ನೋಡಿ
#Manipur: Pregnant woman killed, four injured in ambulance-BSF vehicle collision; CCTV footage surfaces Imphal, November 23, 2026: A pregnant woman was killed and four others injured in a road accident involving an ambulance and a Tata DI pickup vehicle carrying Border Security Force (BSF) personnel in Manipur. CCTV footage of the collision has surfaced. According to preliminary reports, the ambulance collided with the BSF personnel-carrying Tata DI pickup. The crash resulted in the death of the pregnant woman, while four other individuals sustained injuries. Further details on the exact location, circumstances of the collision, and identities of those involved are awaited as authorities investigate. Police and local administration have been informed, and the injured have been shifted for medical treatment. The incident has raised questions about road safety involving emergency and security vehicles in the region. More updates are expected as the inquiry progresses.
— Siraj Noorani (@sirajnoorani) November 23, 2026
ಸಿಸಿಟಿವಿಯಲ್ಲಿ ಸೆರೆಯಾಯಿತು ಅಪಘಾತದ ಭೀಕರ ದೃಶ್ಯ
ಈ ಭೀಕರ ಅಪಘಾತದ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಂಬುಲೆನ್ಸ್ ಮತ್ತು ಪಿಕಪ್ ಟ್ರಕ್ ಎರಡೂ ಅತಿವೇಗದಲ್ಲಿ ಬಂದು ಪರಸ್ಪರ ಡಿಕ್ಕಿ ಹೊಡೆದುಕೊಂಡಿರುವುದು ಹಾಗೂ ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ರಸ್ತೆಯಲ್ಲಿ ಅಡ್ಡಲಾಗಿ ಬಿದ್ದಿರುವುದು ದೃಶ್ಯಗಳಲ್ಲಿ ಕಂಡುಬಂದಿದೆ. ಡಿಕ್ಕಿಯ ಹೊಡೆತಕ್ಕೆ ಪಿಕಪ್ ವಾಹನದಲ್ಲಿದ್ದ ಭದ್ರತಾ ಸಿಬ್ಬಂದಿ ರಸ್ತೆಗೆ ಎಸೆಯಲ್ಪಟ್ಟಿದ್ದು, ತಾವಾಗಿಯೇ ಎದ್ದೇಳಲು ಸಾಧ್ಯವಾಗದ ಸ್ಥಿತಿಯಲ್ಲಿ ನರಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಲಂಡನ್‌ಗೆ ಹೊರಟಿದ್ದ ಸಿಜೆಪಿ ಸಂಚಾಲಕ ಸೌರವ್ ದಾಸ್‌ಗೆ ವಿಮಾನ ನಿಲ್ದಾಣದಲ್ಲಿ ತಡೆ
ಗಾಯಾಳು ಯೋಧರು ಆಸ್ಪತ್ರೆಗೆ ದಾಖಲು, ತನಿಖೆ ಆರಂಭ
ಮಣಿಪುರದಲ್ಲಿ ಭದ್ರತಾ ಪಡೆ ಬಾಡಿಗೆಗೆ ಪಡೆದಿದ್ದ ಪಿಕಪ್ ವಾಹನದಲ್ಲಿ ಬಿಎಸ್‌ಎಫ್‌ನ 24ನೇ ಬೆಟಾಲಿಯನ್‌ಗೆ ಸೇರಿದ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಗಾಯಗೊಂಡ ನಾಲ್ವರು ಬಿಎಸ್‌ಎಫ್ ಯೋಧರು ಮತ್ತು ಮೂವರು ನಾಗರಿಕರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಗರ್ಭಿಣಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.