Droupadi Murmu: ಮಹಾ ಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು!
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಜಗತ್ತಿನ ಬಹುದೊಡ್ಡ ಧಾರ್ಮಿಕ ಉತ್ಸವವಾದ ಮಹಾ ಕುಂಭಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಫೆ.10) ಭಾಗವಹಿಸಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಬಳಿಕ ಬಡೇ ಹನುಮಾನ್ ಮತ್ತು ಅಕ್ಷಯವತ್ ದೇವಸ್ಥಾನಗಳಿಗೆ ಭೇಟಿ ನೀಡಿರುವ ಮುರ್ಮು ಅಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
![ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ರಾಷ್ಟ್ರಪತಿ ಮುರ್ಮು!](https://cdn-vishwavani-prod.hindverse.com/media/original_images/Droupadi_Murmu_1_I5Tl0nU.jpg)
Droupadi Murmu
![Profile](https://vishwavani.news/static/img/user.png)
ಲಖನೌ: ಉತ್ತರಪ್ರದೇಶದ(Uttar Pradesh) ಪ್ರಯಾಗ್‌ರಾಜ್‌ನಲ್ಲಿ(Prayagraj) ನಡೆಯುತ್ತಿರುವ ಜಗತ್ತಿನ ಬಹುದೊಡ್ಡ ಧಾರ್ಮಿಕ ಉತ್ಸವವಾದ ಮಹಾ ಕುಂಭಮೇಳದಲ್ಲಿ(Mahakumbh) ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಇಂದು (ಫೆ.10) ಭಾಗವಹಿಸಿದ್ದು, ತ್ರಿವೇಣಿ ಸಂಗಮದಲ್ಲಿ(Triveni Sangam) ಪುಣ್ಯ ಸ್ನಾನ(Holy Dip) ಮಾಡಿದರು. ಬಳಿಕ ಬಡೇ ಹನುಮಾನ್ ಮತ್ತು ಅಕ್ಷಯವತ್ ದೇವಸ್ಥಾನಗಳಿಗೆ ಭೇಟಿ ನೀಡಿರುವ ಮುರ್ಮು ಅಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರಯಾಗ್‌ರಾಜ್‌ಗೆ ಆಗಮಿಸಿದ ಮುರ್ಮು ಅವರನ್ನು ಉತ್ತರಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬರಮಾಡಿಕೊಂಡರು.
#WATCH | Prayagraj, UP: President Droupadi Murmu takes a holy dip at Triveni Sangam during the ongoing Maha Kumbh Mela. pic.twitter.com/2PQ4EYn08b
— ANI (@ANI) February 10, 2025
ಇಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಕೂಡ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ನಿನ್ನೆ (ಫೆ.9) ತ್ರಿವೇಣಿ ಸಂಗಮದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಂಪತಿ ಪುಣ್ಯ ಸ್ನಾನ ಮಾಡಿದರು.
ಈ ಸುದ್ದಿಯನ್ನೂ ಓದಿ:ಬಡ ಮಕ್ಕಳಿಗೆ ಅನ್ನ ನೀಡಲು ಅನುಮತಿ ನೀಡಿ ಪುಣ್ಯ ಬರಲಿದೆ: ಸಂದೀಪ್ ರೆಡ್ಡಿ ಮನವಿ
ನರೇಂದ್ರ ಮೋದಿ ಪುಣ್ಯಸ್ನಾನ!
ಪ್ರಧಾನಿ ನರೇಂದ್ರ ಮೋದಿ ಫೆ.5 ರಂದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ಪವಿತ್ರ ಸ್ನಾನ ಮಾಡಿದ್ದರು. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮಕ್ಕೆ ಆಗಮಿಸಿದ್ದ ಮೋದಿ ಅವರಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಸಾಥ್ ನೀಡಿದ್ದರು. ದೆಹಲಿ ವಿಧಾನಸಭೆ ಚುನಾವಣೆಯ ಮತದಾನದ ದಿನದಂದೇ ಮೋದಿ ಕುಂಭಮೇಳಕ್ಕೆ ಭೇಟಿ ನೀಡಿದ್ದರು.
ಮಾಘ ಅಷ್ಠಮಿ ಮತ್ತು ಭೀಷ್ಮ ಅಷ್ಠಮಿಯ ದಿನ ಮತ್ತು ಹಿಂದೂಗಳ ಪಾಲಿಗೆ ಅತ್ಯಂತ ಪವಿತ್ರವಾದ ದಿನವಾದ ಹಿನ್ನೆಲೆಯಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆದಿರುವ ಐತಿಹಾಸಿಕ ಕುಂಭಮೇಳದಲ್ಲಿ ಪ್ರಧಾನಿ ಭಾಗವಹಿಸಿದ್ದರು. ದೋಣಿ ಮೂಲಕ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮಘಾಟ್‌ಗೆ ತೆರಳಿದ್ದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ಬಣ್ಣದ ವಸ್ತ್ರ ತೊಟ್ಟು ಸಂಗಮದಲ್ಲಿ ಮಿಂದೆದ್ದಿದ್ದರು. ಈ ಸಂದರ್ಭದಲ್ಲಿ ರುದ್ರಾಕ್ಷಿಮಾಲೆಯನ್ನು ಹಿಡಿದು ಸೂರ್ಯದೇವ ಮತ್ತು ಗಂಗಾಮಾತೆಗೆ ನಮಸ್ಕರಿಸಿದ್ದರು.