#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Droupadi Murmu: ನಾಳೆ ಮಹಾಕುಂಭ ಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯಸ್ನಾನ!

144 ವರ್ಷಗಳ ನಂತರ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ಧಾರ್ಮಿಕ ಉತ್ಸವವಾದ ಮಹಾಕುಂಭ ಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ (ಫೆ.10) ಭಾಗವಹಿಸಲಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ರಾಷ್ಟ್ರಪತಿಯ ಭೇಟಿ ಕುರಿತು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.

ತ್ರಿವೇಣಿ ಸಂಗಮದಲ್ಲಿ ನಾಳೆ ರಾಷ್ಟ್ರಪತಿ ಮುರ್ಮು ಪುಣ್ಯಸ್ನಾನ!

Droupadi Murmu

Profile Deekshith Nair Feb 9, 2025 6:40 PM

ನವದೆಹಲಿ: 144 ವರ್ಷಗಳ ನಂತರ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ಧಾರ್ಮಿಕ ಉತ್ಸವವಾದ ಮಹಾಕುಂಭ ಮೇಳದಲ್ಲಿ(Mahakumbh) ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ನಾಳೆ (ಫೆ.10) ಭಾಗವಹಿಸಲಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ಕುಂಭಮೇಳಕ್ಕೆ ರಾಷ್ಟ್ರಪತಿಯ ಭೇಟಿ ಕುರಿತು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ಈಗಾಗಲೇ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ಮೋದಿ, ಭೂತಾನ್​ ದೇಶದ ರಾಜ ಜಿಗ್ಮೆ ಕೇಸರ್ ನಾಮ್ಗ್ಯೆಲ್ ವಾಂಗ್ಚುಕ್, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು, ಸಾಧು-ಸಂತರು ಮತ್ತು ಕೋಟ್ಯಂತರ ಭಕ್ತರು ಭಾಗವಹಿಸಿ ಪುಣ್ಯ ಸ್ನಾನ ಮಾಡಿದ್ದಾರೆ.



ನರೇಂದ್ರ ಮೋದಿ ಪುಣ್ಯಸ್ನಾನ!

ಪ್ರಧಾನಿ ನರೇಂದ್ರ ಮೋದಿ ಫೆ.5 ರಂದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ಪವಿತ್ರ ಸ್ನಾನ ಮಾಡಿದ್ದರು. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮಕ್ಕೆ ಆಗಮಿಸಿದ್ದ ಮೋದಿ ಅವರಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಸಾಥ್ ನೀಡಿದ್ದರು. ದೆಹಲಿ ವಿಧಾನಸಭೆ ಚುನಾವಣೆಯ ಮತದಾನದ ದಿನದಂದೇ ಮೋದಿ ಕುಂಭಮೇಳಕ್ಕೆ ಭೇಟಿ ನೀಡಿದ್ದರು.

ಈ ಸುದ್ದಿಯನ್ನೂ ಓದಿ:Viral News: ಆಲಿಘಡ್‌ ವಿವಿ ಹಾಸ್ಟೆಲ್‌ ನೋಟಿಸ್‌ನಲ್ಲಿ ಬೀಫ್‌ ಬಿರಿಯಾನಿ ಉಲ್ಲೇಖ: ಆಡಳಿತ ಮಂಡಳಿ ಹೇಳಿದ್ದೇನು?

ಮಾಘ ಅಷ್ಠಮಿ ಮತ್ತು ಭೀಷ್ಮ ಅಷ್ಠಮಿಯ ದಿನ ಮತ್ತು ಹಿಂದೂಗಳ ಪಾಲಿಗೆ ಅತ್ಯಂತ ಪವಿತ್ರವಾದ ದಿನವಾದ ಹಿನ್ನೆಲೆಯಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆದಿರುವ ಐತಿಹಾಸಿಕ ಕುಂಭಮೇಳದಲ್ಲಿ ಪ್ರಧಾನಿ ಭಾಗವಹಿಸಿದ್ದರು. ದೋಣಿ ಮೂಲಕ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮಘಾಟ್‌ಗೆ ತೆರಳಿದ್ದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ಬಣ್ಣದ ವಸ್ತ್ರ ತೊಟ್ಟು ಸಂಗಮದಲ್ಲಿ ಮಿಂದೆದ್ದಿದ್ದರು. ಈ ಸಂದರ್ಭದಲ್ಲಿ ರುದ್ರಾಕ್ಷಿಮಾಲೆಯನ್ನು ಹಿಡಿದು ಸೂರ್ಯದೇವ ಮತ್ತು ಗಂಗಾಮಾತೆಗೆ ನಮಸ್ಕರಿಸಿದ್ದರು.