ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕೋಲ್ಕತ್ತಾದಲ್ಲಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು 2026ರ ಅಂತಾರಾಷ್ಟ್ರೀಯ ಯೋಗ ದಿನವನ್ನು ಕೋಲ್ಕತ್ತಾದಲ್ಲಿ ಆಚರಿಸಲಿದ್ದಾರೆ. "ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ" ಎಂಬ ಥೀಮ್ ನೊಂದಿಗೆ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರ ಯೋಗ ಸಂಗಮ ಪೋರ್ಟಲ್ ಅನ್ನು ತೆರೆದಿದೆ. ಆಸಕ್ತರು ಇದರಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಸಂಗ್ರಹ ಚಿತ್ರ

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ (International Yoga Day) ದಿನಗಣನೆ ಆರಂಭವಾಗಿದೆ. ಖಜುರಾಹೊದಲ್ಲಿರುವ ವೆಸ್ಟರ್ನ್ ಗ್ರೂಪ್ ಆಫ್ ಟೆಂಪಲ್ಸ್‌ನ ಯುನೆಸ್ಕೋ ವಿಶ್ವ ಪರಂಪರೆಯ ತಾಣದಲ್ಲಿ ಆಯೋಜಿಸಲಾದ ಯೋಗ ಮಹೋತ್ಸವ- 2026ರ ಸಂದರ್ಭದಲ್ಲಿ ಈ ಬಾರಿಯ ಯೋಗ ದಿನದ ಥೀಮ್ . "ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ" (Yoga for Healthy Ageing) ಅನ್ನು ಹಂಚಿಕೊಳ್ಳಲಾಗಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಕೋಲ್ಕತ್ತಾದಲ್ಲಿ (Kolkata) ಯೋಗ ದಿನವನ್ನು (Yoga day-2026) ಆಚರಿಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಪ್ರಧಾನಿ ಮೋದಿ ಅವರು ಇದೇ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಜೂನ್ 21ರಂದು ಕೋಲ್ಕತ್ತಾದಲ್ಲಿ ನಡೆಯುವ ಯೋಗ ದಿನಾಚರಣೆಯ ಆತಿಥ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಈ ಬಾರಿ ಯೋಗ ದಿನದಲ್ಲಿ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ.

Siddaramaiah's Delhi Visit: ರಾಜೀನಾಮೆ ಬೆನ್ನಲ್ಲೇ ದೆಹಲಿಯಲ್ಲಿ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿದ್ದರಾಮಯ್ಯ

ಖಜುರಾಹೊದಲ್ಲಿರುವ ವೆಸ್ಟರ್ನ್ ಗ್ರೂಪ್ ಆಫ್ ಟೆಂಪಲ್ಸ್‌ನ ಯುನೆಸ್ಕೋ ವಿಶ್ವ ಪರಂಪರೆಯ ತಾಣದಲ್ಲಿ ಆಯೋಜಿಸಲಾದ ಯೋಗ ಮಹೋತ್ಸವದಲ್ಲಿ ಯೋಗ ದಿನದ ಥೀಮ್ ಅನ್ನು ಘೋಷಣೆ ಮಾಡಲಾಗಿದೆ. ಇದರ ಬಳಿಕ ಈ ವರ್ಷದ ಯೋಗ ದಿನದ ಥೀಮ್ "ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ" ಎಂದು ಘೋಷಿಸಿದ ಕೇಂದ್ರ ಸಚಿವ ಪ್ರತಾಪ್‌ರಾವ್ ಜಾಧವ್ ಅವರು ದೈಹಿಕ ಆರೋಗ್ಯ, ಮಾನಸಿಕ ಯೋಗಕ್ಷೇಮ ಮತ್ತು ಆರೋಗ್ಯಕರ ವೃದ್ಧಾಪ್ಯವನ್ನು ಉತ್ತೇಜಿಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವತ್ತ ಗಮನ ಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಯೋಗ ಸಂಗಮ ಪೋರ್ಟಲ್ ಅನ್ನು ಮರುಪ್ರಾರಂಭಿಸಲಾಗಿದೆ ಎಂದು ತಿಳಿಸಿದ ಅವರು ಇದರಲ್ಲಿ ನೋಂದಣಿಗಳನ್ನು ನಡೆಸುವಂತೆ ಹೇಳಿದ ಅವರು, ರಾಜ್ಯ, ಸಂಸ್ಥೆಗಳು ಮೀಸಲಿರಿಸಿರುವ ಯೋಗ ಸ್ಥಳಗಳಲ್ಲಿ ಪಾಲ್ಗೊಳುವವರನ್ನು ಬೆಂಬಲಿಸಲು ಯೋಗ ಪಾರ್ಕ್ ಪೋರ್ಟಲ್ ಅನ್ನು ತೆರೆದಿರುವುದಾಗಿ ಅವರು ತಿಳಿಸಿದರು.

2014ರ ಸೆಪ್ಟೆಂಬರ್ 27ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನದ ಕಲ್ಪನೆಯನ್ನು ಪ್ರಸ್ತಾಪಿಸಿದ್ದರು. ಇದರ ಬಳಿಕ ಅದೇ ವರ್ಷ ಡಿಸೆಂಬರ್ 11 ರಂದು ವಿಶ್ವಸಂಸ್ಥೆಯು 193 ಸದಸ್ಯ ರಾಷ್ಟ್ರಗಳು ಮತ್ತು 173 ಸಹ-ಪ್ರಾಯೋಜಕರ ಬೆಂಬಲದೊಂದಿಗೆ ಜೂನ್ 21ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುವುದಾಗಿ ಘೋಷಿಸಿತ್ತು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಪ್ರಧಾನಿ ವೈಯಕ್ತಿಕವಾಗಿ ಲೋಪಗಳ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದ ಸರ್ಕಾರ

ಮೊದಲ ಬಾರಿಗೆ 2015ರ ಜೂನ್ 21ರಂದು ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ನವದೆಹಲಿಯ ರಾಜ್‌ಪಥ್‌ನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಸಲಾಯಿತು. ಇದರಲ್ಲಿ ಅತೀ ಹೆಚ್ಚಿನ ಮಂದಿ ಪಾಲ್ಗೊಂಡಿದ್ದು, ಇದು ಗಿನ್ನೆಸ್ ವಿಶ್ವ ದಾಖಲೆಯನ್ನು ಸೇರಿದೆ.

ವಿದ್ಯಾ ಇರ್ವತ್ತೂರು

View all posts by this author