ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಾವಲು ವಾಹನಗಳ ಸಂಖ್ಯೆ ಶೇಕಡ 50ರಷ್ಟು ಕಡಿಮೆ ಮಾಡುವಂತೆ ಪ್ರಧಾನಿ ಮೋದಿ ಸೂಚನೆ: ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲೂ ಕ್ರಮ

Escort Vehicles Reduction: ಪ್ರಧಾನಿ ನರೇಂದ್ರ ಮೋದಿ ತಮ್ಮ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಶೇ. 50ರಷ್ಟು ಕಡಿಮೆ ಮಾಡಲು ನಿರ್ದೇಶಿಸಿದ್ದಾರೆ. ಇದು ಪ್ರಸ್ತುತ ಜಾಗತಿಕ ಪರಿಸ್ಥಿತಿಯ ನಡುವೆ ಕಠಿಣ ಕ್ರಮಗಳನ್ನು ಉತ್ತೇಜಿಸುವ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ನವದೆಹಲಿ, ಮೇ 13: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ತಮ್ಮ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಶೇ. 50ರಷ್ಟು ಕಡಿಮೆ ಮಾಡಲು ನಿರ್ದೇಶನ ನೀಡಿದ್ದಾರೆ. ಇದು ಪ್ರಸ್ತುತ ಜಾಗತಿಕ ಪರಿಸ್ಥಿತಿಯ ನಡುವೆ ಕಠಿಣ ಕ್ರಮಗಳನ್ನು ಉತ್ತೇಜಿಸುವ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ತಮ್ಮ ಬೆಂಗಾವಲು ಪಡೆಯಲ್ಲಿ ಎಲೆಕ್ಟ್ರಿಕ್ ವಾಹನಗಳ (EV vehicle) ಸಂಖ್ಯೆಯನ್ನು ಹೆಚ್ಚಿಸುವಂತೆ ಪ್ರಧಾನಿ ತಮ್ಮ ಭದ್ರತೆಗೆ ಜವಾಬ್ದಾರರಾಗಿರುವ ಸಂಸ್ಥೆಯಾದ ವಿಶೇಷ ರಕ್ಷಣಾ ಪಡೆಗೆ (SPG) ಸೂಚಿಸಿದ್ದಾರೆ. ಆದರೆ ಈ ಉದ್ದೇಶಕ್ಕಾಗಿ ಹೊಸ ವಾಹನಗಳನ್ನು ಖರೀದಿಸಬಾರದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಕ್ರಮವನ್ನು ಈಗ ಬಿಜೆಪಿ ನೇತೃತ್ವದ ರಾಜ್ಯಗಳಲ್ಲೂ ಜಾರಿಗೆ ತರಲು ಅಲ್ಲಿನ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಮತ್ತು ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸೇರಿ ಇತರ ಸಚಿವರು ತಮ್ಮ ಅಧಿಕೃತ ಬೆಂಗಾವಲುಗಳಲ್ಲಿ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ.

ಈ ಕ್ರಮವನ್ನು ಜವಾಬ್ದಾರಿಯುತ ಇಂಧನ ಬಳಕೆ ಮತ್ತು ಆಡಳಿತಾತ್ಮಕ ಮಿತವ್ಯಯವನ್ನು ಉತ್ತೇಜಿಸುವ ವಿಸ್ತೃತ ಪ್ರಯತ್ನಗಳ ಭಾಗವಾಗಿ ಪರಿಗಣಿಸಲಾಗುತ್ತಿದೆ. ಇತ್ತೀಚೆಗೆ ಪ್ರಧಾನಮಂತ್ರಿ ಅನಗತ್ಯ ಪ್ರಯಾಣವನ್ನು ಕಡಿಮೆ ಮಾಡಿ ರಾಷ್ಟ್ರೀಯ ಸಂಪನ್ಮೂಲಗಳನ್ನು ಸಂರಕ್ಷಿಸುವಂತೆ ಕರೆ ನೀಡಿದ್ದಾರೆ.

ಪ್ರಧಾನಿ ಹೆಸರಲ್ಲಿ 1 ವರ್ಷ ವರ್ಕ್‌ ಫ್ರಮ್‌ ಹೋಂ ಕೇಳಿದ ಉದ್ಯೋಗಿ: ಇಮೇಲ್ ಮೂಲಕ ಮನವಿ

ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಅಮೆರಿಕ-ಇರಾನ್ ಯುದ್ಧದಿಂದ ಉಂಟಾದ ಇಂಧನ ಬಿಕ್ಕಟ್ಟಿನ ಮಧ್ಯೆ, ಜಾಗತಿಕ ಆರ್ಥಿಕ ಅನಿಶ್ಚಿತತೆಗಳು, ಸರಕು ಸರಪಳಿ ವ್ಯತ್ಯಯಗಳು ಮತ್ತು ಹಣದುಬ್ಬರದ ಒತ್ತಡಗಳನ್ನು ತಡೆದುಕೊಳ್ಳಲು ದೇಶಕ್ಕೆ ಸಹಾಯ ಮಾಡಲು ಸಾಮೂಹಿಕ ಭಾಗವಹಿಸುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ವಿದೇಶಿ ವಿನಿಮಯದ ಹೊರಹರಿವಿನ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಪ್ರಧಾನಿ ಮೋದಿ, ಕನಿಷ್ಠ ಒಂದು ವರ್ಷದವರೆಗೆ ಅತ್ಯಗತ್ಯವಲ್ಲದ ಚಿನ್ನದ ಖರೀದಿ ಮಾಡದಂತೆ ಮನವಿ ಮಾಡಿದ್ದಾರೆ. ರಜಾ ದಿನಗಳು, ಮದುವೆ, ಪ್ರವಾಸಕ್ಕೆ ವಿದೇಶಕ್ಕೆ ತೆರಳದಂತೆ ಸೂಚಿಸಿದ್ದಾರೆ. ಭಾರತದಲ್ಲೇ ಪ್ರವಾಸ ಮಾಡುವಂತೆಯೂ ಪ್ರಧಾನಿ ಸಲಹೆ ನೀಡಿದರು.

ದೇಶಾದ್ಯಂತ ಜಾರಿಯಾಗುತ್ತಾ ಆನ್‌ಲೈನ್‌ ಕ್ಲಾಸ್‌?

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ ಭಾರತದ ಇಂಧನ ಬಳಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಮೇ 11) ನಾಗರಿಕರನ್ನು ಒತ್ತಾಯಿಸಿದ್ದರು. ಅಷ್ಟೇ ಅಲ್ಲದೇ ಶಾಲೆಗಳಲ್ಲಿ ತರಗತಿಗಳನ್ನು ನಡೆಸುವುದರ ಬದಲು ಆನ್‌ಲೈನ್‌ ತರಗತಿಗಳನ್ನು ಪ್ರಾರಂಭಿಸುವಂತೆ ಶಾಲೆಗಳಿಗೆ ಮನವಿ ಮಾಡಿದ್ದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಲಾಕ್‌ಡೌನ್ ಸಮಯದಲ್ಲಿ ತರಗತಿ ಮನೆಗಳಿಗೆ ಸ್ಥಳಾಂತರಗೊಂಡಿತ್ತು. ಅಲ್ಲಿಂದ ಭಾರತ ಮತ್ತು ಪ್ರಪಂಚದಾದ್ಯಂತ ಆನ್‌ಲೈನ್ ಕಲಿಕೆ ಸಾಮಾನ್ಯವಾಗಿದೆ ಎಂದು ಮೋದಿ ಹೇಳಿದ್ದರು.

ಗುಜರಾತ್‌ನ ವಡೋದರಾದಲ್ಲಿ ಸರ್ದಾರ್ ಧಾಮ್ ಹಾಸ್ಟೆಲ್ ಉದ್ಘಾಟನೆ ಸಂದರ್ಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮೋದಿ, ಶಾಲೆಗಳು ಮತ್ತೆ ಇದೇ ರೀತಿಯ ಕ್ರಮವನ್ನು ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದ್ದರು.