ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜೂನ್ 13ರಿಂದ 18ರವರೆಗೆ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ - ಸ್ಲೋವಾಕಿಯಾ ಪ್ರವಾಸ; ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 13ರಿಂದ ಫ್ರಾನ್ಸ್-ಸ್ಲೋವಾಕಿಯಾ ಪ್ರವಾಸದಲ್ಲಿರಲಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ರಕ್ಷಣೆ, ಭದ್ರತಾ ಸಹಕಾರ, ವ್ಯಾಪಾರ, ತಂತ್ರಜ್ಞಾನ, ಜಾಗತಿಕ ಕಳವಳಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಫ್ರಾನ್ಸ್-ಸ್ಲೋವಾಕಿಯಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

ಸಂಗ್ರಹ ಚಿತ್ರ -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಜೂನ್ 13ರಿಂದ 18ರವರೆಗೆ ಫ್ರಾನ್ಸ್ ಮತ್ತು ಸ್ಲೋವಾಕಿಯಾ ಪ್ರವಾಸ (France-Slovakia tour) ನಡೆಸಲಿದ್ದಾರೆ. ಮೊದಲು ಅವರು ಫ್ರೆಂಚ್ (france) ಬಂದರು ನಗರವಾದ ನೈಸ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ದ್ವಿಪಕ್ಷೀಯ ಸಂಬಂಧಗಳನ್ನು ( bilateral ties) ಬಲಪಡಿಸುವ ನಿಟ್ಟಿನಲ್ಲಿ ರಕ್ಷಣೆ, ಭದ್ರತಾ ಸಹಕಾರ, ವ್ಯಾಪಾರ, ತಂತ್ರಜ್ಞಾನ, ಜಾಗತಿಕ ಕಳವಳಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಆರು ದಿನಗಳ ಪ್ರವಾಸದ ಸಂದರ್ಭದಲ್ಲಿ ಅವರು ಜಿ7 ಶೃಂಗಸಭೆಯಲ್ಲಿ (G7 Summit) ಭಾಗವಹಿಸಲಿದ್ದಾರೆ.

ಈ ಕುರಿತು ಶನಿವಾರ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಕಾರ್ಯತಂತ್ರದ ದೃಷ್ಟಿಕೋನದಲ್ಲಿ ಫ್ರಾನ್ಸ್ ವಿಶೇಷ ಸ್ಥಾನವನ್ನು ಹೊಂದಿದೆ. ಫ್ರಾನ್ಸ್ ಪ್ರವಾಸದ ವೇಳೆ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪ್ರಮುಖ ಕ್ಷೇತ್ರಗಳಲ್ಲಿ ಅದರಲ್ಲೂ ವಿಶೇಷವಾಗಿ ತಂತ್ರಜ್ಞಾನದಲ್ಲಿ ಸಹಕಾರವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ಕೇಳಿಕೊಳ್ಳುವುದಾಗಿ ತಿಳಿಸಿದರು. ಜಿ7 ಶೃಂಗಸಭೆಯು ಜಾಗತಿಕವಾಗಿ ದಕ್ಷಿಣದ ಆಕಾಂಕ್ಷೆಗಳಿಗೆ ಧ್ವನಿಯಾಗಲು ಒಂದು ವೇದಿಕೆಯಾಗಿದೆ ಎಂದು ತಿಳಿಸಿದರು.

ನೀಟ್ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾಗಿಲ್ಲ: ನಕಲಿ ಸುದ್ದಿ ನಂಬಬೇಡಿ ಎಂದ ಎನ್‌ಟಿಎ

ಇನ್ನು ಸ್ಲೋವಾಕಿಯಾ ಪ್ರವಾಸದ ಬಗ್ಗೆ ಮಾತನಾಡಿರುವ ಅವರು, 1993ರ ಬಳಿಕ ಭಾರತೀಯ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಸ್ಲೋವಾಕಿಯಾಕ್ಕೆ ಭೇಟಿ ನೀಡುತ್ತಿದ್ದಾರೆ. ಇದು ದ್ವಿಪಕ್ಷೀಯ ಸಂಬಂಧಗಳನ್ನು ವರ್ಧಿಸುತ್ತದೆ ಮತ್ತು ಭಾರತ ಮತ್ತು ಯುರೋಪಿಯನ್ ಒಕ್ಕೂಟ ಅಂತಿಮಗೊಳಿಸಿರುವ ಮುಕ್ತ ವ್ಯಾಪಾರ ಒಪ್ಪಂದದ ವೇಗವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.

ಪ್ರವಾಸ ಯೋಜನೆಯಲ್ಲಿ ಏನಿದೆ?

ಫ್ರಾನ್ಸ್ ಮತ್ತು ಸ್ಲೋವಾಕಿಯಾ ಪ್ರವಾಸವು ಯುರೋಪ್ ಮತ್ತು ಜಿ7 ಜೊತೆಗೆ ಭಾರತದ ಸಂಬಂಧವನ್ನು ಬಲಪಡಿಸಲಿದೆ. ಇದರಿಂದ ನಮ್ಮ ಪಾಲುದಾರಿಕೆಯನ್ನು ವಿಸ್ತರಿಸುವ ನಮ್ಮ ದೃಢವಾದ ಬದ್ಧತೆಯನ್ನು ಪ್ರದರ್ಶನವಾಗಲಿದೆ ಎನ್ನುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಸದಲ್ಲಿ ಮೊದಲು ಫ್ರೆಂಚ್ ಬಂದರು ನಗರವಾದ ನೈಸ್‌ಗೆ ಭೇಟಿ ನೀಡಲಿದ್ದು, ಭಾನುವಾರ ಮ್ಯಾಕ್ರನ್‌ರೊಂದಿಗೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇದೇ ದಿನ ಅವರಿಬ್ಬರೂ ನೈಸ್‌ನಲ್ಲಿ ಭಾರತ್ ಇನ್ನೋವೇಟ್ಸ್ ಅನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಇದು ಭಾರತೀಯ ನವೋದ್ಯಮಗಳನ್ನು ಜಾಗತಿಕ ಹೂಡಿಕೆಯೊಂದಿಗೆ ಸಂಪರ್ಕಿಸುವ ಯೋಜನೆಯಾಗಿದೆ.

ಬಳಿಕ ಜೂನ್ 14 ಮತ್ತು 15ರಂದು ಸ್ಲೋವಾಕಿಯಾ ಪ್ರವಾಸ ಮಾಡಲಿರುವ ಅವರು ಬ್ರಾಟಿಸ್ಲಾವಾದಲ್ಲಿ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ ಮತ್ತು ಪ್ರಧಾನಿ ರಾಬರ್ಟ್ ಫಿಕೊ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಜೊತೆಗೆ ವ್ಯಾಪಾರಕ್ಕೆ ಸಂಬಂಧಿಸಿ ಉನ್ನತ ನಾಯಕರೊಂದಿಗೆ ಸಂವಹನ ನಡೆಸಲಿದ್ದಾರೆ. ಇದರಿಂದಾಗಿ ಈ ವರ್ಷದ ಅಂತ್ಯದ ವೇಳೆಗೆ ಮತ್ತಷ್ಟು ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ.

ಬಹು ಹಂತದ ಕ್ಷಿಪಣಿ ರಕ್ಷಣಾ ವ್ಯವಸ್ಥೆಯೇ ಮಿಷನ್ ಸುದರ್ಶನ ಚಕ್ರ: ರಾಜನಾಥ್ ಸಿಂಗ್

ಬಳಿಕ ಜೂನ್ 16 ಮತ್ತು 17ರಂದು ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಎವಿಯನ್ ರೆಸಾರ್ಟ್‌ಗೆ ತೆರಳಲಿದ್ದಾರೆ. ಅಲ್ಲಿ ಅವರು ಫ್ರಾನ್ಸ್ ಬ್ರೆಜಿಲ್, ಈಜಿಪ್ಟ್, ಕೀನ್ಯಾ ಮತ್ತು ದಕ್ಷಿಣ ಕೊರಿಯಾ ನಾಯಕರನ್ನು ಭೇಟಿ ಮಾಡಲಿದ್ದಾರೆ. ಜೂನ್ 18 ರಂದು ಮ್ಯಾಕ್ರನ್‌ ಅವರೊಂದಿಗೆ ವಿವಾಟೆಕ್ 2026 ರಲ್ಲಿ ಭಾಗವಹಿಸಿದ ಬಳಿಕ ಅವರು ಭಾರತಕ್ಕೆ ಹಿಂದಿರುಗಲಿದ್ದಾರೆ.