ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಆಪರೇಷನ್‌ ಸಿಂದೂರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಾಧ್ಯಾಪಕನಿಗೆ ಮಧ್ಯಂತರ ಜಾಮೀನು

ಆಪರೇಷನ್‌ ಸಿಂದೂರದ (Operation Sindoor) ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್‌ಗೆ ಸುಪ್ರೀಂ ಕೋರ್ಟ್ (Supreme Court) ಇಂದು ಮಧ್ಯಂತರ ಜಾಮೀನು ನೀಡಿದೆ. ಅಲಿ ಖಾನ್ ವಿರುದ್ಧ ಹರಿಯಾಣ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ತಡೆಹಿಡಿಯಲು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ನಿರಾಕರಿಸಿದೆ.

ಆಪರೇಷನ್‌ ಸಿಂದೂರ್‌ ಕುರಿತು ಅವಹೇಳನಕಾರಿ ಹೇಳಿಕೆ; ಪ್ರಧ್ಯಾಪಕನಿಗೆ ಜಾಮೀನು

Profile Vishakha Bhat May 21, 2025 3:10 PM

ನವದೆಹಲಿ: ಆಪರೇಷನ್‌ ಸಿಂದೂರದ (Operation Sindoor) ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್‌ಗೆ ಸುಪ್ರೀಂ ಕೋರ್ಟ್ (Supreme Court) ಇಂದು ಮಧ್ಯಂತರ ಜಾಮೀನು ನೀಡಿತು, ಆದರೆ ಸೇನೆಗೆ ಹಾಗೂ ಸೈನಿಕರಿಗೆ ಅವಮಾನ ಮಾಡುವಂತಹ ಪೋಸ್ಟ್‌ನನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿದೆ. ಅಲಿ ಖಾನ್ ವಿರುದ್ಧ ಹರಿಯಾಣ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ತಡೆಹಿಡಿಯಲು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ನಿರಾಕರಿಸಿದೆ.

ಪ್ರಕರಣದ ತನಿಖೆಗಾಗಿ ಐಜಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ರಚಿಸುವಂತೆ ಹರಿಯಾಣ ಡಿಜಿಪಿಗೆ ನಿರ್ದೇಶಿಸಿದೆ. ಬಳಿಕ ಅಲಿ ಅವರಿಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿತು. ಜಾಮೀನು ಬಾಂಡ್‌ಗಳನ್ನು ಒದಗಿಸಿದರೆ ಅರ್ಜಿದಾರರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಾವು ನಿರ್ದೇಶಿಸುತ್ತೇವೆ. ಎರಡೂ ಎಫ್‌ಐಆರ್‌ಗಳಿಗೆ ಒಂದೇ ಸೆಟ್ ಜಾಮೀನು ಬಾಂಡ್‌ಗಳು ಇರಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಅಷ್ಟೇ ಅಲ್ಲದೆ ಭಾರತ ಹಾಗೂ ಪಾಕಿಸ್ತಾನಕ್ಕೆ ಸಂಬಂಧಿಸಿದಂತಗೆ ಯಾವುದೇ ಪೋಸ್ಟ್‌ ಹಾಕಬೇಡಿ ಎಂದು ಕಟ್ಟು ನಿಟ್ಟಾಗಿ ಸೂಚಿಸಿದೆ.

ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿದಿನ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಸೋನಿಪತ್ ಪೊಲೀಸರು ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹಮೂದಾಬಾದ್ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ, ಪೊಲೀಸರು ಜಥೇಡಿ ಗ್ರಾಮದ ಸರಪಂಚರ ಹೇಳಿಕೆಯನ್ನು ದಾಖಲಿಸಿಕೊಂಡು, ನಂತರ ಸಹಾಯಕ ಪ್ರಾಧ್ಯಾಪಕರನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಅಲಿ ಖಾನ್ ಮಹ್ಮದಾಬಾದ್ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಬಿಜೆಪಿ ಯುವ ಮೋರ್ಚಾದ ನಾಯಕರೊಬ್ಬರ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿತ್ತು.

ಈ ಸುದ್ದಿಯನ್ನೂ ಓದಿ: Operation Sindoor: ಆಪರೇಷನ್‌ ಸಿಂದೂರ್‌ ಚುಟ್ ಪುಟ್ ಯುದ್ಧ ಎಂದ ಮಲ್ಲಿಕಾರ್ಜುನ ಖರ್ಗೆ; ಬಿಜೆಪಿ ಆಕ್ರೋಶ

ಮಹಿಳಾ ಆಯೋಗವು ತನ್ನ ಹೇಳಿಕೆಗಳನ್ನು "ತಪ್ಪಾಗಿ ಅರ್ಥಮಾಡಿಕೊಂಡಿದೆ" ಎಂದು ಪ್ರಾಧ್ಯಾಪಕರು ಹೇಳಿದ್ದರು. "...ಮಹಿಳಾ ಆಯೋಗವು ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿ, ನನ್ನ ಪೋಸ್ಟ್‌ಗಳನ್ನು ತಪ್ಪಾಗಿ ಓದಿದೆ ಮತ್ತು ತಪ್ಪಾಗಿ ಅರ್ಥೈಸಿಕೊಂಡಿದೆ, ಅದು ಅವುಗಳ ಅರ್ಥವನ್ನು ತಲೆಕೆಳಗಾಗಿಸಿದೆ ಎಂದು ನನಗೆ ಆಶ್ಚರ್ಯವಾಗಿದೆ ಎಂದು ಅಲಿ ತಮ್ಮನ್ನು ಸಮರ್ಥಿಸಿಕೊಂಡಿದ್ದರು.