ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

Chief Election Commissioner Gyanesh Kumar: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು 2 ಗಂಟೆಗಳ ಬಳಿಕ ರಿಲೀಸ್‌ ಮಾಡಿದ್ದಾರೆ. ಆಕಾಶವಾಣಿ ಭವನದ ಬಳಿ ನಡೆದ ಪ್ರತಿಭಟನೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆ

ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದ ಪೊಲೀಸರು -

Profile
Sushmitha Jain Oct 6, 2026 10:31 PM

ನವದೆಹಲಿ, ಅ. 6: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳ ಇಂಡಿಯಾ (INDIA) ಒಕ್ಕೂಟ ನಡೆಸಿದ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದು ಸುಮಾರು 2 ಗಂಟೆಗಳ ಬಳಿಕ ಬಿಡುಗಡೆ ಮಾಡಿದರು. ಅಕ್ಟೋಬರ್ 6ರಂದು ಆಕಾಶವಾಣಿ ಭವನದ ಬಳಿ ಈ ಬೆಳವಣಿಗೆ ನಡೆದಿದೆ.

ಚುನಾವಣಾ ಆಯೋಗದ ಕಚೇರಿಯತ್ತ ಸಾಗುತ್ತಿದ್ದ ಪ್ರತಿಪಕ್ಷ ನಾಯಕರನ್ನು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು. ಬಳಿಕ ನಾಯಕರು ಸ್ಥಳದಲ್ಲೇ ಧರಣಿ ನಡೆಸಿದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು, ಈ ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿವೆ.

ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಪೊಲೀಸ್ ಬ್ಯಾರಿಕೇಡ್ ಏರಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿದರು. ನಂತರ ಅವರು ಹಾಗೂ ಪ್ರಿಯಾಂಕಾ ಗಾಂಧಿ ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಮುಂದುವರಿಸಿದರು. ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಳಿಕ ವಶಕ್ಕೆ ಪಡೆದು ಬಸ್‌ಗಳಲ್ಲಿ ಕರೆದೊಯ್ದರು. ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ ಸೇರಿ ಹಲವರನ್ನು ಪೊಲೀಸರು ಬಂಧಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಮಧ್ಯ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಯತ್ತ ಸಾಗುವ ಮಾರ್ಗದಲ್ಲಿ ಹಲವು ಕಡೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಪ್ರತಿಪಕ್ಷಗಳು SIR ಪ್ರಕ್ರಿಯೆ ಕುರಿತು ಚುನಾವಣಾ ಆಯೋಗದೊಂದಿಗೆ ನೇರವಾಗಿ ಚರ್ಚಿಸಲು ಹಾಗೂ ತಮ್ಮ ಬೇಡಿಕೆಗಳನ್ನು ಮಂಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿವೆ.