Protest in Patna: ಪ್ರಧಾನಿ ಮೋದಿ ತಾಯಿ ವಿರುದ್ಧ ನಿಂದನೆ; ಕೈ-ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ
PM Narendra Modi's Mother: ಬಿಹಾರದಲ್ಲಿ ರಾಹುಲ್ ಗಾಂಧಿಯವರ (Rahul Gandhi) ಮತಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಮತ್ತು ಆರ್‌ಜೆಡಿ ವಿರುದ್ಧ ಬೀದಿಗಿಳಿದ ಬಿಜೆಪಿ ಪಾಟ್ನಾದ ಸದಾಕತ್ ಆಶ್ರಮಕ್ಕೆ ಮೆರವಣಿಗೆ ನಡೆಸಿತು. ಇದರಲ್ಲಿ ನಿತೀಶ್ ಸರ್ಕಾರದ ಅನೇಕ ಸಚಿವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ಬಿಜೆಪಿಯ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು.


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ತಮ್ಮ ತಾಯಿಯನ್ನು ನಿಂದಿಸಿದ ಘಟನೆಗೆ ಸಂಬಂಧಿಸಿದಂತೆ ಬಿಹಾರದಲ್ಲಿ ಕೈ-ಕಮಲ ಕಾರ್ಯಕರ್ತರ ನಡುವಿನ ಜಗಳ ತಾರಕಕ್ಕೇರಿದೆ. ಕಾಂಗ್ರೆಸ್ ಮತ್ತು ಆರ್‌ಜೆಡಿ ವಿರುದ್ಧ ಬೀದಿಗಿಳಿದ ಬಿಜೆಪಿ ಪಾಟ್ನಾದ ಸದಾಕತ್ ಆಶ್ರಮಕ್ಕೆ ಮೆರವಣಿಗೆ ನಡೆಸಿತು. ಇದರಲ್ಲಿ ನಿತೀಶ್ ಸರ್ಕಾರದ ಅನೇಕ ಸಚಿವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ಬಿಜೆಪಿಯ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಪ್ರವೇಶಿಸಿದರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಓಡಿಸಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ, ಅನೇಕ ವಾಹನಗಳನ್ನು ಧ್ವಂಸಗೊಳಿಸಲಾಯಿತು. ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ದಾಳಿ ನಡೆಸಿದ್ದಾರೆ. ಸಚಿವರಾದ ಸಂಜಯ್ ಸರೋಗಿ ಮತ್ತು ನಿತಿನ್ ನವೀನ್ ಕೂಡ ಮೆರವಣಿಗೆಯಲ್ಲಿ ಹಾಜರಿದ್ದರು.
ಏನಿದು ಪ್ರಕರಣ?
ಬಿಹಾರದಲ್ಲಿ ರಾಹುಲ್ ಗಾಂಧಿಯವರ (Rahul Gandhi) ಮತಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿಯ ವಿರುದ್ಧ ಅವಾಚ್ಯ ಶಬ್ದಗಳಿನಿಂದ ನಿಂದಿಸಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಸಂಸದರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ದರ್ಭಾಂಗದಲ್ಲಿ ನಡೆದ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಮತ್ತು ತೇಜಸ್ವಿ ಯಾದವ್ ಅವರ ಪೋಸ್ಟರ್‌ಗಳನ್ನು ಹೊಂದಿದ್ದ ವೇದಿಕೆಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ.
ಈ ಸುದ್ದಿಯನ್ನೂ ಓದಿ: Narendra Modi: ಒಂದೇ ವೇದಿಕೆಯಲ್ಲಿ ಮೋದಿ-ಪುಟಿನ್-ಜಿನ್ ಪಿಂಗ್; ಮಹತ್ವದ ಚರ್ಚೆ ಸಾಧ್ಯತೆ
ಆದರೆ, ಘಟನೆಯ ಸಮಯದಲ್ಲಿ ನಾಯಕರು ವೇದಿಕೆಯಲ್ಲಿ ಇರಲಿಲ್ಲ. ಈ ವರ್ಷದ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿರುವ ಸ್ಥಳೀಯ ಕಾಂಗ್ರೆಸ್ ನಾಯಕ ನೌಶಾದ್ ಅವರ ಹೆಸರನ್ನು ಕಾರ್ಯಕರ್ತರು ಹೇಳಿರುವುದು ಕೇಳಿಸುತ್ತದೆ. ನೌಶಾದ್ ಈ ಆರೋಪವನ್ನು ತಿರಸ್ಕರಿಸಿದ್ದು, ಮುಜಫರ್ಪುರದಲ್ಲಿ ನಡೆಯಲಿರುವ ರ್ಯಾಲಿಗೆ ರಾಹುಲ್ ಗಾಂಧಿ ಅವರೊಂದಿಗೆ 15-20 ನಿಮಿಷಗಳ ಹಿಂದೆಯೇ ಹೊರಟಿದ್ದಾಗಿ ತಿಳಿಸಿದ್ದರು.
ನಾನು ದೆಹಲಿಯಿಂದ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. 20 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿದ್ದೇನೆ. ನಾವು ಅಂತಹ ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಆದರೂ, ನಾನು ಕ್ಷಮೆಯಾಚಿಸುತ್ತೇನೆ. ನಾವು ಕಾರ್ಯಕ್ರಮವನ್ನು ಆಯೋಜಿಸಿದ್ದರಿಂದ, ನಾನು ಕ್ಷಮೆಯಾಚಿಸುತ್ತಿದ್ದೇನೆ. ಈ ರೀತಿ ಯಾರೇ ಹೇಳಿದ್ದರೂ ಅದು ತಪ್ಪು ಎಂದು ಅವರು ಹೇಳಿದ್ದರು.