ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Terror Attack: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ; ಪಾಕಿಸ್ತಾನ ಹೈಕಮಿಷನ್ ಹೊರಗೆ ಭಾರಿ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಭೀಕರ ಭಯೋತ್ಪಾದಕ ದಾಳಿಯ ಎರಡು ದಿನಗಳ ನಂತರ ಇಂದು ಬೆಳಿಗ್ಗೆ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಹೊರಗೆ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನಾಕಾರರು "ಪಾಕಿಸ್ತಾನಕ್ಕೆ ಧಿಕ್ಕಾರ ಎಂದು ಘೋಷಣೆಯನ್ನು ಕೂಗಿದ್ದಾರೆ.

ದೆಹಲಿಯ ಪಾಕಿಸ್ತಾನ ಹೈಕಮಿಷನ್ ಹೊರಗೆ ಭಾರಿ ಪ್ರತಿಭಟನೆ

Profile Vishakha Bhat Apr 24, 2025 2:14 PM

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) 26 ಜನರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಭೀಕರ ಭಯೋತ್ಪಾದಕ ದಾಳಿಯ ಎರಡು ದಿನಗಳ ನಂತರ ಇಂದು ಬೆಳಿಗ್ಗೆ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಹೊರಗೆ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನಾಕಾರರು "ಪಾಕಿಸ್ತಾನಕ್ಕೆ ಧಿಕ್ಕಾರ ಎಂದು ಘೋಷಣೆಯನ್ನು ಕೂಗಿದ್ದಾರೆ. ಪಾಕಿಸ್ತಾನ ಹೈಕಮಿಷನ್ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲು ಹಲವು ಗುಂಪುಗಳು ಕರೆ ನೀಡಿರುವುದರಿಂದ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವೆ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರತಿಭಟನಾಕಾರರು ಪಾಕಿಸ್ತಾನದ ರಾಯಭಾರಿ ಕಚೇರಿ ಬಳಿ ಪ್ರತಿಭಟನೆ ನಡೆಯುತ್ತಿದೆ. ದೆಹಲಿಯ ರಾಜತಾಂತ್ರಿಕ ಸ್ಥಳವಾದ ಚಾಣಕ್ಯಪುರಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನ ಹೊರಗಿನ ದೃಶ್ಯಗಳು, ಕಟ್ಟಡದ ಹೊರಗೆ ದೊಡ್ಡ ಜನಸಮೂಹ ಜಮಾಯಿಸಿದೆ. ರಾಷ್ಟ್ರೀಯ ಭದ್ರತೆಯ ವಿಷಯಕ್ಕೆ ಬಂದಾಗ, ರಾಜಕೀಯ ಪಕ್ಷಗಳು ಸಿದ್ಧಾಂತವನ್ನು ತ್ಯಜಿಸಿ ದೇಶಕ್ಕಾಗಿ ಒಂದಾಗಬೇಕು. ಎಲ್ಲರೂ ಒಟ್ಟಾಗಿ ನಿಂತಿರುವುದು ಒಳ್ಳೆಯದು. ಸರ್ಕಾರ ಇಲ್ಲಿಯವರೆಗೆ ತೆಗೆದುಕೊಂಡ ಸ್ವಾಗತಾರ್ಹ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ. ಪಾಕಿಸ್ತಾನ ಹೈಕಮಿಷನ್ ಕಚೇರಿಗೆ ಭಾರೀ ಬ್ಯಾರಿಕೇಡ್ ಹಾಕಲಾಗಿದ್ದು, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.



ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. . ಭಾರತ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧವನ್ನು ಸಾರಿದೆ. ಸಿಂಧೂ ನದಿ ಒಪ್ಪಂದವನ್ನು ಅತ್ಯಂಗೊಳಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಪಾಕ್‌ಗೆ ದೊಡ್ಡ ಆಘಾತ ನೀಡಿರುವ ಭಾರತ ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಗಳಿಗೆ ಭಾರತವನ್ನು ತೊರೆಯಲು ಸೂಚಿಸಿದ್ದು, 48 ಗಂಟೆಗಳ ಗಡುವನ್ನು ನೀಡಿದೆ. ವಾಘಾ ಅಟ್ಟಾರಿ ಬಾರ್ಡರ್‌ನನ್ನು ಮುಚ್ಚಲು ಸೂಚಿಸಲಾಗಿದೆ. ದೇಶದಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಭಾರತ ಸರ್ಕಾರ 48 ಗಂಟೆಗಳಲ್ಲಿ ದೇಶ ತೊರೆಯುವಂತೆ ಘೋಷಿಸಿದೆ. ಘಟನೆ ಬಳಿಕ ಕೇಂದ್ರ ಸರ್ಕಾರ ಕೈಗೊಂಡ ವಿವಿಧ ಕ್ರಮಗಳಲ್ಲಿ ಪಾಕ್ ರಾಯಭಾರಿ ಕಚೇರಿ ತೊರೆಯುವಂತೆ ಪಾಕಿಸ್ತಾನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಾಕಿಸ್ತಾನ ಸರ್ಕಾರದ ಅಧಿಕೃತ X ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ.

ಈ ಸುದ್ದಿಯನ್ನೂ ಓದಿ: Pahalgam terror attack: ಪಹಲ್ಗಾಮ್‌ ಉಗ್ರರ ದಾಳಿ- ರಾತ್ರೋರಾತ್ರಿ ಪಾಕ್‌ ರಾಯಭಾರಿ ಕಚೇರಿ ಅಧಿಕಾರಿಗೆ ಸಮನ್ಸ್‌; ಒಂದು ವಾರಗಳ ಗಡುವು

ಇನ್ನು ಉಗ್ರರು ಮಾಡಿರುವ ದುಷ್ಕೃತ್ಯವನ್ನು ಪಾಕಿಸ್ತಾನ ಆನಂದಿಸಿದೆ. ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿಗಳು ತಮ್ಮ ಕಚೇರಿಗೆ ಕೇಕ್ ತರಿಸಿಕೊಂಡು ಸಂಭ್ರಮಾಚರಣೆಗೆ ಮುಂದಾಗಿದ್ದರು ಎನ್ನಲಾಗಿದೆ. ಪಾಕ್ ಅಧಿಕಾರಿಗಳು ಕಚೇರಿಯಿಂದ ಹೊರ ಹೋಗುವಾಗ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ಎನ್ನಲಾಗಿದೆ. ಕೇಕ್ ಒಯ್ಯುತ್ತಿರುವ ವಿಡಿಯೋ ವೈರಲ್ ಆಗಿದೆ.