ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Punjab Blast: ಬಿಜೆಪಿ ನಾಯಕನ ಮನೆ ಎದುರು ಸ್ಫೋಟ ಮಾಡಿದ್ದ ಆರೋಪಿ ಬಂಧನ ; ಲಾರೆನ್ಸ್ ಬಿಷ್ಣೋಯ್ ನಂಟು ಪತ್ತೆ

ಪಂಜಾಬ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಸಚಿವ ಮನೋರಂಜನ್ ಕಾಲಿಯಾ ಅವರ ನಿವಾಸದ ಹೊರಗೆ ಮಂಗಳವಾರ ಬೆಳಗಿನ ಜಾವ ಸ್ಫೋಟ ಸಂಭವಿಸಿದೆ. ರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದೀಗ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ.

ಬಿಜೆಪಿ ನಾಯಕನ ಮನೆ ಎದುರು ಸ್ಫೋಟ ಮಾಡಿದ್ದ ಆರೋಪಿ ಬಂಧನ

Profile Vishakha Bhat Apr 8, 2025 3:42 PM

ಚಂಡೀಗಢ: ಪಂಜಾಬ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಸಚಿವ ಮನೋರಂಜನ್ ಕಾಲಿಯಾ ಅವರ ನಿವಾಸದ ಹೊರಗೆ ಮಂಗಳವಾರ ಬೆಳಗಿನ ಜಾವ ಸ್ಫೋಟ (Punjab Blast) ಸಂಭವಿಸಿದೆ. ರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದೀಗ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ. ಕಾಲಿಯಾ ಅವರ ಮನೆಯ ಮೇಲೆ ನಡೆದ ಗ್ರೆನೇಡ್ ದಾಳಿಯ ಸಂಚುಕೋರ ಜೀಶನ್ ಅಖ್ತರ್ ಎಂಬಾತನನ್ನು ಬಂಧಿಸಲಾಗಿದೆ. ಆತ ಬಿಷ್ಣೋಯ್‌ ಗ್ಯಾಂಗ್‌ ಜೊತೆ ನಂಟು ಹೊಂದಿದ್ದಾನೆ ಎಂದು ಹೇಳಲಾಗಿದೆ. ಜೀಶನ್ ಅಖ್ತರ್ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಚರ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬೇಕಾಗಿರುವ ಆರೋಪಿ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಐಎಸ್‌ಐ ಪಂಜಾಬ್‌ನಲ್ಲಿ ಧಾರ್ಮಿಕ ಸಾಮರಸ್ಯವನ್ನು ಕದಡಲು ಸಂಚು ರೂಪಿಸಿದೆ ಮತ್ತು ಬಿಜೆಪಿ ನಾಯಕನ ವಿರುದ್ಧದ ದಾಳಿಯನ್ನು ಗಡಿಯಾಚೆಯಿಂದ ಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪಂಜಾಬ್‌ ಸಚಿವ ಮೊಹಿಂದರ್‌ ಭಗತ್‌ ಕೂಡ ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಭಗವಾನ್‌ ಸ್ಪಷ್ಟ ನಿಲುವನ್ನು ಹೊಂದಿದ್ದಾರೆ. ಅವರು ರಾಜ್ಯದಲ್ಲಿ ಯಾವುದೇ ಶಾಂತಿ ಕದಡುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.



ಮಾಜಿ ರಾಜ್ಯ ಸಭಾ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಅವಿನಾಶ್‌ ರೈ ಖನ್ನಾ ಈ ಘಟನೆಯನ್ನು ಖಂಡಸಿದ್ದಾರೆ. ಸರ್ಕಾರ ರಾಜ್ಯಾಂದ್ಯಂತ ಅಪರಾಧಿಗಳನ್ನು ಪೋಷಿಸುತ್ತಿದೆ ಎಂದು ಹೇಳಿದ್ದಾರೆ. ಇದು ಸರ್ಕಾರದ ವಿಫಲತೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: ಪಾಕಿಸ್ತಾನ ಮಿಲಿಟರಿ ಕ್ಯಾಂಪ್‌ ಮೇಲೆ ಆತ್ಮಾಹುತಿ ಬಾಂಬ್‌ ದಾಳಿ; ಕನಿಷ್ಠ 9 ಸಾವು

ಏನಿದು ಘಟನೆ?

ಮನೋರಂಜನ್ ಕಾಲಿಯಾ ಅವರ ನಿವಾಸದ ಹೊರಗೆ ಮಂಗಳವಾರ ಬೆಳಗಿನ ಜಾವ ಸ್ಫೋಟ (Punjab Blast) ಸಂಭವಿಸಿದೆಘಟನೆಯಲ್ಲಿ ಯಾವುದೇ ಪ್ರಾಣಹಾನಿ ಹಾನಿಯಾಗಿಲ್ಲ. ಘಟನೆಯ ನಂತರ ಪೊಲೀಸ್ ತಂಡಗಳು ಕಾಲಿಯಾ ಅವರ ನಿವಾಸಕ್ಕೆ ಧಾವಿಸಿವೆ. ಸ್ಫೋಟದ ಸ್ಥಳದಿಂದ ವಿಧಿವಿಜ್ಞಾನ ತಜ್ಞರು ಸಹ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸ್ಫೋಟವಾದ ಕುರಿತು ತನಿಖೆ ನಡೆಸುತ್ತಿದ್ದೇವೆ ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಫೋಟದ ಕುರಿತು ಮಾತನಾಡಿರುವ , ಕಾಲಿಯಾ, ರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ನಾನು ಮಲಗಿದ್ದೆ ಏನೋ ಶಬ್ದವಾಯಿತು. ಗುಡುಗಿನ ಶಬ್ದವಾಗಿರಬೇಕೆಂದು ಭಾವಿಸಿದೆ. ನಂತರ ಸ್ಫೋಟ ಸಂಭವಿಸಿದೆ ಎಂದು ನನಗೆ ತಿಳಿಸಿದರು. ಇದಾದ ನಂತರ, ನಾನು ನನ್ನ ಗನ್ ಮ್ಯಾನ್ ಅನ್ನು ಪೊಲೀಸ್ ಠಾಣೆಗೆ ಕಳುಹಿಸಿದೆ. ಪೊಲೀಸರು ಸ್ಥಳದಲ್ಲಿ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.