ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terrorist Arrest: ಪಂಜಾಬ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನ; ಆರ್‌ಡಿಎಕ್ಸ್, ಐಇಡಿ ವಶಕ್ಕೆ

ಸುಧಾರಿತ ಸ್ಫೋಟಕ ಸಾಧನ (ಐಇಡಿ)ದೊಂದಿಗೆ ಭಯೋತ್ಪಾದಕರನ್ನು ಬಂಧಿಸಲಾಗಿದೆ (Terrorist Arrest) ಎಂದು ಪಂಜಾಬ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಮಾತನಾಡಿ, ಆರೋಪಿಗಳನ್ನು - ಜಗ್ಗಾ ಸಿಂಗ್ ಮತ್ತು ಮಂಜಿಂದರ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಹೇಳಿದರು.

ಪಂಜಾಬ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಂಧನ

Profile Vishakha Bhat Apr 13, 2025 3:16 PM

ಚಂಡೀಗಢ: ಸುಧಾರಿತ ಸ್ಫೋಟಕ ಸಾಧನ (ಐಇಡಿ)ದೊಂದಿಗೆ ಭಯೋತ್ಪಾದಕರನ್ನು ಬಂಧಿಸಲಾಗಿದೆ (Terrorist Arrest) ಎಂದು ಪಂಜಾಬ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಮಾತನಾಡಿ, ಆರೋಪಿಗಳನ್ನು - ಜಗ್ಗಾ ಸಿಂಗ್ ಮತ್ತು ಮಂಜಿಂದರ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಹೇಳಿದರು. ಇವರಿಬ್ಬರು , ಜರ್ಮನಿ ಮೂಲದ ಗುರ್‌ಪ್ರೀತ್ ಸಿಂಗ್ ಅಲಿಯಾಸ್ ಗೋಲ್ಡಿ ಧಿಲ್ಲೋನ್ ನಿರ್ವಹಿಸುತ್ತಿದ್ದ ಭಯೋತ್ಪಾದನಾ ಘಟಕದ ಪ್ರಮುಖ ಕಾರ್ಯಕರ್ತರಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಅವರಿಂದ 1.6 ಕೆಜಿ ಆರ್‌ಡಿಎಕ್ಸ್ ಮತ್ತು ರಿಮೋಟ್ ಕಂಟ್ರೋಲ್ ಹೊಂದಿರುವ 2.8 ಕೆಜಿ ಐಇಡಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ."ಒಂದು ಪ್ರಮುಖ ಪ್ರಗತಿಯಲ್ಲಿ, ಜರ್ಮನಿ ಮೂಲದ ಗುರುಪ್ರೀತ್ ಸಿಂಗ್ ಅಲಿಯಾಸ್‌ ಗೋಲ್ಡಿ ಧಿಲ್ಲೋನ್ ನಿರ್ವಹಿಸುವ ಭಯೋತ್ಪಾದಕ ಮಾಡ್ಯೂಲ್‌ನ ಪ್ರಮುಖ ಕಾರ್ಯಕರ್ತರಾದ ಜಗ್ಗಾ ಸಿಂಗ್ ಮತ್ತು ಮಂಜಿಂದರ್ ಸಿಂಗ್ ಎಂಬ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಗೋಲ್ಡಿ ಬ್ರಾರ್-ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ನಿಕಟ ಕಾರ್ಯಕರ್ತ ಎಂದು ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಐಇಡಿಯನ್ನು ಬಳಸಿ ಭಯೋತ್ಪಾದಕ ದಾಳಿ ಮಾಡಲು ಯೋಜನೆ ರೂಪಿಸಲಾಗಿತ್ತು ಎಂದು ತಿಳಿದು ಬಂದಿದೆ. ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚೆಗೆ ಪಂಜಾಬ್‌ನ (Punjab Blasts) ಜಲಂಧರ್‌ನಲ್ಲಿರುವ ಬಿಜೆಪಿ ನಾಯಕನ ಮನೆ ಮೇಲೆ ನಡೆದ ಗ್ರೆನೇಡ್‌ ದಾಳಿ ಸಂಚುಕೋರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ (Lawrence Bishnoi) ಲಿಂಕ್‌ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರೆನೇಡ್ ದಾಳಿಯ ಸಂಚುಕೋರ ಜೀಶನ್ ಅಖ್ತರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Basanagouda Patil Yatnal: ಯತ್ನಾಳ್‌ ಹತ್ಯೆಗೆ ಸಂಚು; ಆಡಿಯೋ ಬೆನ್ನಲ್ಲೇ ಮತ್ತೊಂದು ಸ್ಫೋಟಕ ವಿಡಿಯೋ ವೈರಲ್‌!

ಈತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಚರ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬೇಕಾಗಿರುವ ಆರೋಪಿ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಪಾಕಿಸ್ತಾನದ ಐಎಸ್‌ಐ ಪಂಜಾಬ್‌ನಲ್ಲಿ ಧಾರ್ಮಿಕ ಸಾಮರಸ್ಯವನ್ನು ಕದಡಲು ಸಂಚು ರೂಪಿಸಿದೆ. ಬಿಜೆಪಿ ನಾಯಕನ ವಿರುದ್ಧದ ದಾಳಿಯನ್ನು ಗಡಿಯಾಚೆಯಿಂದ ಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಮಾಜಿ ಸಚಿವ ಮತ್ತು ಮಾಜಿ ರಾಜ್ಯ ಬಿಜೆಪಿ ಮುಖ್ಯಸ್ಥರೂ ಆಗಿದ್ದ ಕಾಲಿಯಾ ಅವರ ಮನೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಸ್ಫೋಟದಲ್ಲಿ ಗೋಡೆಗೆ ಹಾನಿಯಾಗಿತ್ತು. ಅವರ ಮನೆ ಮತ್ತು ವಾಹನಗಳ ಗಾಜಿನ ಕಿಟಕಿಗಳು ಪುಡಿಪುಡಿಯಾಗಿದ್ದವು.