ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಶಬರಿಮಲೆ ಚಿನ್ನ ಕಳುವು ಕೇಸ್‌; ಎಲ್‌ಡಿಎಫ್, ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಮುಂಬರುವ ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಪರೋಕ್ಷವಾಗಿ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅನ್ನು ಬೆಂಬಲಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.

ಸಂಗ್ರಹ ಚಿತ್ರ

ನವದೆಹಲಿ: ಮುಂಬರುವ ಕೇರಳಂ (Keralam) ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಪರೋಕ್ಷವಾಗಿ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅನ್ನು ಬೆಂಬಲಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸೋಮವಾರ ಆರೋಪಿಸಿದ್ದಾರೆ. ಕೇರಳದ ಪತ್ತನಂತಿಟ್ಟದಲ್ಲಿ ಮಾತನಾಡಿದ ಅವರು, ಕೇರಳದಲ್ಲಿರುವ ಯಾವುದೇ ಎಲ್‌ಡಿಎಫ್ ಸರ್ಕಾರವು ಸಂಪೂರ್ಣವಾಗಿ ಅವರ ನಿಯಂತ್ರಣದಲ್ಲಿದೆ ಎಂದು ಬಿಜೆಪಿಗೆ ತಿಳಿದಿದೆ. ಇದಕ್ಕೆ ಮೊದಲ ಪುರಾವೆಯೆಂದರೆ ಬಿಜೆಪಿ ವಿರುದ್ಧ ಹೋರಾಡುವ ಜನರ ಮೇಲೆ ಅವರು ದಾಳಿ ಮಾಡಿ ಬೆದರಿಕೆ ಹಾಕುತ್ತಾರೆ ಎಂದು ಹೇಳಿದ್ದಾರೆ.

ನನ್ನ ಮೇಲೆಯೂ ದಾಳಿ ಮಾಡಲಾಗಿದೆ ಮತ್ತು ನನ್ನ ವಿರುದ್ಧ 36 ಪ್ರಕರಣಗಳಿವೆ. 55 ಗಂಟೆಗಳ ಕಾಲ ನಿರಂತರ ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ ಕೇರಳದ ಮುಖ್ಯಮಂತ್ರಿಯ ಮೇಲೆ ಬಿಜೆಪಿಯಿಂದ ಯಾವುದೇ ದಾಳಿಯಾಗಿಲ್ಲ ಎಂದು ಹೇಳಿದ್ದಾರೆ. ಎಲ್‌ಡಿಎಫ್ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗಾಂಧಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿ, ಇತ್ತೀಚೆಗೆ ಪಾಲಕ್ಕಾಡ್‌ಗೆ ಭೇಟಿ ನೀಡಿದ್ದಾಗ ಶಬರಿಮಲೆ ಬಗ್ಗೆ ಮೌನವಾಗಿದ್ದಕ್ಕಾಗಿ ಅವರನ್ನು ಟೀಕಿಸಿದ್ದಾರೆ. ಚುನಾವಣೆ ಸಮಯದಲ್ಲಿ ಮಾತ್ರ ಅವರು ದೇವರು ಹಾಗೂ ದೇವಾಲಯದ ಕುರಿತು ಮಾತನಾಡುತ್ತಾರೆ. ಶಬರಿಮಲೆ ಪ್ರಕರಣದ ಕುರಿತು ಯಾವೊಬ್ಬ ಬಿಜೆಪಿ ನಾಯಕರೂ ಮಾತನಾಡಿಲ್ಲ. ಇದು ಬಿಜೆಪಿ ಮತ್ತು ಎಲ್‌ಡಿಎಫ್ ಒಟ್ಟಾಗಿ ಕೆಲಸ ಮಾಡುವುದನ್ನು ತೋರಿಸುತ್ತದೆ" ಎಂದು ಗಾಂಧಿ ಆರೋಪಿಸಿದರು. ಯುಡಿಎಫ್ ಅಧಿಕಾರಕ್ಕೆ ಬಂದರೆ ದೇವಾಲಯಕ್ಕೆ ಸಂಬಂಧಿಸಿದ ಯಾವುದೇ ಅಕ್ರಮಗಳನ್ನು ಸರಿಪಡಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಪಶ್ಚಿಮ ಬಂಗಾಳ, ಕೇರಳಂ ಸೇರಿ 5 ವಿಧಾನಸಭೆಗಳ ಚುನಾವಣೆ ದಿನಾಂಕ ಘೋಷಣೆ

ನಿನ್ನೆ ಕೇರಳಂನ ಪಾಲಕ್ಕಾಡ್‌ನಲ್ಲಿ ಪ್ರಧಾನಿ ಮೋದಿ ಪ್ರಚಾರದ ಯಾರ್ಲಿ ನಡೆಸಿದ್ದರು. ಮಾತನಾಡಿದ ಪ್ರಧಾನಿ ಮೋದಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇರಳವನ್ನು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಪರಿವರ್ತಿಸುತ್ತದೆ ಮತ್ತು ಮೋದಿಯ ಭರವಸೆಗಳ ಬಲದ ಮೇಲೆ ರಾಜ್ಯವು ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಕೇರಳದಲ್ಲಿ ನನಗೆ ಹೊಸ ಮತ್ತು ವಿಶಿಷ್ಟ ಶಕ್ತಿ ಸಿಕ್ಕಿದೆ. ರಾಜ್ಯವು ಬದಲಾವಣೆಯ ಸ್ಪಷ್ಟ ಸಂದೇಶವನ್ನು ರವಾನಿಸುತ್ತಿದೆ ಎಂದ ಮೋದಿ, ಎನ್‌ಡಿಎಯ ಜನಪ್ರಿಯತೆ ಹೆಚ್ಚುತ್ತಿರುವ ಮತ್ತು ಜನರಲ್ಲಿ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲದೊಂದಿಗೆ, ಪಾಲಕ್ಕಾಡ್‌ನಲ್ಲಿ ನಿಮ್ಮ ಉತ್ಸಾಹ ಮತ್ತು ದೊಡ್ಡ ಸಂಖ್ಯೆಯಲ್ಲಿ ಬಲವಾದ ಉಪಸ್ಥಿತಿಯು ಕೇರಳದ ಮನಸ್ಥಿತಿ ಒಂದು ಚಳುವಳಿಯಾಗಿ ರೂಪಾಂತರಗೊಂಡಿದೆ ಎಂಬುದನ್ನು ತೋರಿಸುತ್ತದೆ. ಈಗ, ಕೇರಳ ಬಿಜೆಪಿ ಮತ್ತು ಎನ್‌ಡಿಎ ಮೇಲೆ ತನ್ನ ನಂಬಿಕೆಯನ್ನು ಇರಿಸಿದೆ ಎಂದು ಹೇಳಿದ್ದರು.

Vishakha Bhat Heggar

View all posts by this author