ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಹುಲ್ ಗಾಂಧಿಯ ಫೇವರೆಟ್ ಬಿಜೆಪಿ ನಾಯಕ ಯಾರು ಗೊತ್ತಾ?

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಜೆಯಲ್ಲಿ ತನ್ನ ನೆಚ್ಚಿನ ನಾಯಕ ಯಾರು ಎಂದು ಹೇಳಿದ್ದಾರೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ತಮ್ಮ ನೆಚ್ಚಿನ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜಕಾರಣಿ ಎಂದು ಹೆಸರಿಸಿದ್ದಾರೆ.

ಸಂಗ್ರಹ ಚಿತ್ರ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಜೆಯಲ್ಲಿ ತನ್ನ ನೆಚ್ಚಿನ ನಾಯಕ ಯಾರು ಎಂದು ಹೇಳಿದ್ದಾರೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ (Amarinder Singh) ಅವರನ್ನು ತಮ್ಮ ನೆಚ್ಚಿನ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜಕಾರಣಿ ಎಂದು ಹೆಸರಿಸಿದ್ದಾರೆ. ರಾಹುಲ್‌, ಅವರನ್ನು "ಕೂಲ್" ಮತ್ತು "ಮಿಲಿಟರಿ ಇತಿಹಾಸದ ಬಗ್ಗೆ ಪರಿಣಿತ" ಎಂದು ಕರೆದಿದ್ದಾರೆ.

"ನನಗೆ ಅವರೊಂದಿಗೆ ಉತ್ತಮ ಒಡನಾಟವಿದೆ. ಅವರು ತುಂಬಾ ಸರಳ ಮತ್ತು ಸ್ನೇಹಪರ ವ್ಯಕ್ತಿ. ಅವರು ಮಿಲಿಟರಿ ಇತಿಹಾಸದ ತಜ್ಞರು. ಹಲೋ, ಅಂಕಲ್ ಅಮರಿಂದರ್ ಎಂದು ಗಾಂಧಿ ಹೇಳಿದ್ದಾರೆ. 'ಜೆನ್-ಝಡ್' ​​(Gen Z) ತಲುಪಲು ಗುರುವಾರ ಇನ್‌ಸ್ಟಾಗ್ರಾಮ್‌ನಲ್ಲಿ "ಆಸ್ಕ್ ಮಿ ಎನಿಥಿಂಗ್" (ನನ್ನನ್ನು ಏನೇ ಕೇಳಿ) ಎಂಬ ಸಂವಾದ ಕಾರ್ಯಕ್ರಮವನ್ನು ಆರಂಭಿಸಿದ ರಾಹುಲ್ ಗಾಂಧಿ, ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕ್ಯಾಪ್ಟನ್ ಅಮರಿಂದರ್ ಸಿಂಗ್, ರಾಹುಲ್ ಗಾಂಧಿ ತಮ್ಮ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದು ಸಂತೋಷದ ವಿಷಯ ಎಂದು ಶುಕ್ರವಾರ ಹೇಳಿದರು. ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರು ಚಿಕ್ಕಮಕ್ಕಳಾಗಿದ್ದಾಗಿನಿಂದಲೂ ತಮಗೆ ಪರಿಚಯವಿದ್ದು, ಅವರ ತಂದೆ ಹಾಗೂ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ತಮ್ಮ ಸಹಪಾಠಿ ಮತ್ತು ಸ್ನೇಹಿತರಾಗಿದ್ದರು ಎಂದು ಅವರು ಸ್ಮರಿಸಿದರು.

ಭಾರತವನ್ನು ಹೊರತುಪಡಿಸಿ ಪ್ರಪಂಚದಾದ್ಯಂತ ಎಲ್ಲೆಡೆ ವೈಯಕ್ತಿಕ ಸಂಬಂಧಗಳನ್ನು ರಾಜಕೀಯ ಬದ್ಧತೆಗಳಿಂದ ಪ್ರತ್ಯೇಕವಾಗಿರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಮುಂದುವರಿದು, ರಾಹುಲ್ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರೊಂದಿಗಿನ ತಮ್ಮ ವೈಯಕ್ತಿಕ ಮತ್ತು ಕೌಟುಂಬಿಕ ಸಂಬಂಧಗಳು ಎಂದಿಗೂ ಮುಂದುವರಿಯಲಿವೆಯಾದರೂ, ರಾಜಕೀಯವಾಗಿ ತಾವು ಭಾರತೀಯ ಜನತಾ ಪಕ್ಷಕ್ಕೆ ಬದ್ಧರಾಗಿರುವುದಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.

ʼʼಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರು ಆರಾಮಾಗಿ ಓಡಾಡಿಕೊಂಡಿದ್ದಾರೆ; ಅನ್ಯಾಯ ಪ್ರಶ್ನಿಸುವವರು ಹೊಡೆತ ತಿನ್ನುತ್ತಿದ್ದಾರೆʼʼ: ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

2022 ರ ಪಂಜಾಬ್ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ರಾಹುಲ್ ಗಾಂಧಿ ಸಿಂಗ್ ಅವರನ್ನು ಸಾರ್ವಜನಿಕವಾಗಿ ತೀವ್ರವಾಗಿ ಟೀಕಿಸಿದ್ದರು. ಬಡವರಿಗೆ ಉಚಿತ ವಿದ್ಯುತ್ ನೀಡಲು ಸಿಂಗ್ ನಿರಾಕರಿಸಿದ್ದರಿಂದ, ಸಾರ್ವಜನಿಕ ಕಲ್ಯಾಣಕ್ಕಿಂತ ವಿದ್ಯುತ್ ಸರಬರಾಜು ಕಂಪನಿಗಳೊಂದಿಗೆ ಕಾರ್ಪೊರೇಟ್ ಒಪ್ಪಂದಗಳಿಗೆ ಆದ್ಯತೆ ನೀಡಿದ್ದರಿಂದ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಬೇಕಾಯಿತು ಎಂದು ಹೇಳಿದ್ದರು.

Vishakha Bhat Heggar

View all posts by this author