ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಮ್ಮು-ಕಾಶ್ಮೀರದಲ್ಲಿ ನಿಷೇಧಿತ ಜಮಾತ್-ಎ-ಇಸ್ಲಾಮಿ ಸೇರಿದ 26 ಸ್ಥಳಗಳ ಮೇಲೆ ದಾಳಿ; ಶಂಕಿತ ಭಯೋತ್ಪಾದಕ ಜಾಲದ ವಿರುದ್ಧ ಕಾರ್ಯಾಚರಣೆ

Jammu and Kashmir: ತನಿಖಾ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಜಮ್ಮು ಮತ್ತು ಕಾಶ್ಮೀರದ 26 ಸ್ಥಳಗಳ ಮೇಲೆ ದಾಳಿ ನಡೆಸಿ, ಶಂಕಿತ ಭಯೋತ್ಪಾದಕ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿವೆ. ನಿಷೇಧಿತ ಸಂಘಟನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ಭೂಗತ ಜಾಲದ ಚಟುವಟಿಕೆಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಯಿತು.

ನಿಷೇಧಿತ ಜಮಾತ್-ಎ-ಇಸ್ಲಾಮಿಗೆ ಸೇರಿದ 26 ಸ್ಥಳಗಳ ಮೇಲೆ ದಾಳಿ

ಸಾಂದರ್ಭಿಕ ಚಿತ್ರ -

Priyanka P
Priyanka P Aug 9, 2026 4:09 PM

ಶ್ರೀನಗರ, ಆ.9: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾನುವಾರ (ಆ.9) ತನಿಖಾ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ 26 ಸ್ಥಳಗಳ ಮೇಲೆ ದಾಳಿ ನಡೆಸಿ, ಶಂಕಿತ ಭಯೋತ್ಪಾದಕ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿವೆ. ಸೋಪೋರ್ (Sopore) ನಗರದಾದ್ಯಂತ ಸಂಘಟಿತ ಶೋಧಗಳನ್ನು ನಡೆಸಲಾಯಿತು. ಜಮಾತ್-ಎ-ಇಸ್ಲಾಮಿ (JEI) ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ನಂತರ ಈ ದಾಳಿಗಳು ನಡೆದಿವೆ.

ನಿಷೇಧಿತ ಸಂಘಟನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ಭೂಗತ ಜಾಲದ ಚಟುವಟಿಕೆಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಯಿತು. ಈ ವರ್ಷದ ಆರಂಭದಲ್ಲಿ, ಮೇ 25 ರಂದು, ಜೆಇಐಗೆ ಸಂಬಂಧಿಸಿದ ಭಯೋತ್ಪಾದನೆಗೆ ಹಣಕಾಸು ನೆರವು ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಾಶ್ಮೀರ ಕಣಿವೆಯಾದ್ಯಂತ ಸರಣಿ ದಾಳಿಗಳನ್ನು ನಡೆಸಿತು.

ಮೇ ತಿಂಗಳಲ್ಲಿ ಶ್ರೀನಗರ ಮತ್ತು ಶೋಪಿಯಾನ್ ಜಿಲ್ಲೆಗಳ ಮೂರು ಸ್ಥಳಗಲ್ಲಿ ದಾಳಿ ನಡೆಸಲಾಗಿದ್ದು, ಅಲ್ಲಿ ತನಿಖಾಧಿಕಾರಿಗಳು ಜಮ್ಮು-ಕಾಶ್ಮೀರದಲ್ಲಿನ ಜೆಇಐ ಮತ್ತು ಅದರ ಸಂಬಂಧಿತ ಟ್ರಸ್ಟ್‌ಗಳು ಮತ್ತು ಸಂಸ್ಥೆಗಳ ಚಟುವಟಿಕೆಗಳಿಗೆ ಸಂಬಂಧಿಸಿದೆ ಎಂದು ಶಂಕಿಸಲಾದ ಹಲವಾರು ಅಪರಾಧಿಕ ಹಣಕಾಸು ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಹೈಬ್ರಿಡ್‌ ಉಗ್ರರು ಸಕ್ರಿಯ; ದಾಳಿಯ ನಂತರ ಸಾಮಾನ್ಯ ಜನರ ನಡುವೆ ಬೆರೆತು ತಪ್ಪಿಸಿಕೊಳ್ಳುವ ತಂತ್ರ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ದಾಳಿ

ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಕೆಲ್ಲಂ ಪ್ರದೇಶದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಛತ್ತೀಸ್‌ಗಢ ಮೂಲದ ಓರ್ವ ವಲಸೆ ಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಇಬ್ಬರು ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಇಬ್ಬರನ್ನೂ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ದೀಪಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಹಾಗೂ ಗಾಯಾಳುವನ್ನು ಛತ್ತೀಸ್‌ಗಢ ಮೂಲದ ದೀಪಕ್ ಮತ್ತು ಭೂಪೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ದೀಪಕ್ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಗಾಯಗೊಂಡಿರುವ ಭೂಪೇಂದ್ರ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅನಂತನಾಗ್ ಸರ್ಕಾರಿ ವೈದ್ಯಕೀಯ ಕಾಲೇಜು (GMC) ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಯ ಬಳಿಕ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಉಗ್ರರ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ. ದಾಳಿಯ ಹಿಂದಿನ ಉದ್ದೇಶ ಹಾಗೂ ಇತರ ವಿವರಗಳ ಕುರಿತು ತನಿಖೆ ಮುಂದುವರಿದಿದೆ.

ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಇದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ. ದಾಳಿಕೋರರನ್ನು ಶೀಘ್ರ ಬಂಧಿಸುವಂತೆ ಹಾಗೂ ಅವರ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವಂತೆ ಭದ್ರತಾ ಪಡೆಗಳಿಗೆ ನಿರ್ದೇಶನ ನೀಡಿರುವುದಾಗಿ ಅವರು ತಿಳಿಸಿದ್ದಾರೆ.