ಜೈಪುರ, ಸೆ. 14: ರಾಜಸ್ಥಾನದ 309 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ ಮುನ್ನಡೆ ಸಾಧಿಸಿದೆ (Urban Local Body Polls). ಕಾಂಗ್ರೆಸ್ ಕೂಡ ಹಲವು ವಾರ್ಡ್‌ಗಳಲ್ಲಿ ಬಿಜೆಪಿಗೆ ತೀವ್ರ ಪೈಪೋಟಿ ನೀಡಿದೆ. ರಾಜ್ಯದ 10 ಮಹಾನಗರ ಪಾಲಿಕೆಗಳು, 51 ನಗರಸಭೆಗಳು ಹಾಗೂ 248 ಪುರಸಭೆಗಳನ್ನು ಒಳಗೊಂಡಂತೆ ಒಟ್ಟು 10,245 ವಾರ್ಡ್‌ಗಳಿಗೆ ಚುನಾವಣೆ ನಡೆದಿದೆ. ಸೆಪ್ಟೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.
ಇತ್ತೀಚಿನ ಫಲಿತಾಂಶಗಳ ಪ್ರಕಾರ ಸುಮಾರು 10,210 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 4,171 ವಾರ್ಡ್‌ಗಳಲ್ಲಿ, ಕಾಂಗ್ರೆಸ್ 3,597 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. ಪಕ್ಷೇತರ ಅಭ್ಯರ್ಥಿಗಳು 2,272 ವಾರ್ಡ್‌ಗಳಲ್ಲಿ ಗೆದ್ದು ಹಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಮೂಡಿಸಿದ್ದಾರೆ.
ರೇಷನ್ ಕಾರ್ಡ್ ಹೊಂದಿರುವ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಉಚಿತ ಎಸಿ! ಪ್ರಧಾನಿ ನರೇಂದ್ರ ಮೋದಿಯಿಂದ ಹೊಸ ಯೋಜನೆ?
ಪ್ರಮುಖ ನಗರಗಳ ಪೈಕಿ ಉದಯಪುರ, ಭಿಲ್ವಾರಾ ಮತ್ತು ಕೋಟಾ ನಗರ ಪಾಲಿಕೆಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮತ್ತೊಂದೆಡೆ ಬಿಕಾನೇರ್‌ನಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಅಜ್ಮೇರ್ ಮತ್ತು ಪಾಲಿಯಲ್ಲೂ ಕಾಂಗ್ರೆಸ್ ಮುನ್ನಡೆ ಕಂಡುಬಂದಿದೆ. ಜೋಧ್‌ಪುರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ 44 ವಾರ್ಡ್‌ಗಳನ್ನು ಗೆದ್ದಿದ್ದು, 10 ವಾರ್ಡ್‌ಗಳಲ್ಲಿ ಪಕ್ಷೇತರರು ಜಯಗಳಿಸಿದ್ದಾರೆ.
ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಅವರ ತವರು ಕ್ಷೇತ್ರವಾದ ಭರತ್‌ಪುರದಲ್ಲಿ ಪಕ್ಷೇತರ ಅಭ್ಯರ್ಥಿಗಳ ಪ್ರಾಬಲ್ಯ ಗಮನ ಸೆಳೆದಿದ್ದು, 65 ವಾರ್ಡ್‌ಗಳಲ್ಲಿ 36ರಲ್ಲಿ ಪಕ್ಷೇತರರು ಗೆಲುವು ಅಥವಾ ಮುನ್ನಡೆ ಸಾಧಿಸಿದ್ದಾರೆ. ಈ ಫಲಿತಾಂಶಗಳು 2028ರ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಗೆ ಪ್ರಮುಖ ರಾಜಕೀಯ ಪರೀಕ್ಷೆ ಎಂದು ಪರಿಗಣಿಸಲಾಗಿದೆ.