ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

K Annamalai: ರಾಜ್ಯಸಭಾ ಉಪಚುನಾವಣೆ; ತೆರವಾಗಿರುವ ಸ್ಥಾನಕ್ಕೆ ಅಣ್ಣಾಮಲೈ?

Rajya Sabha Bypolls: ಆಂಧ್ರ ಪ್ರದೇಶದ ಮೂರು ರಾಜ್ಯಸಭಾ ಸ್ಥಾನಗಳಿಗೆ ಮೇ 9 ರಂದು ಉಪಚುನಾವಣೆ ನಡೆಯಲಿದೆ. ಸೀಟು ಹಂಚಿಕೆ ಸಂಬಂಧ ಚರ್ಚೆ ನಡೆಸಲು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು ದಿಲ್ಲಿಗೆ ತೆರಳಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ರಾಜ್ಯಸಭೆಗೆ ಅಣ್ಣಾಮಲೈ?

Profile Vishakha Bhat Apr 22, 2025 1:45 PM

ಹೈದರಾಬಾದ್‌: ಆಂಧ್ರ ಪ್ರದೇಶದ ಮೂರು ರಾಜ್ಯಸಭಾ ಸ್ಥಾನಗಳಿಗೆ ಮೇ 9 ರಂದು ಉಪಚುನಾವಣೆ ನಡೆಯಲಿದೆ. ಉಪಚುನಾವಣೆಯಲ್ಲಿ ಒಂದು ಸ್ಥಾನವನ್ನು ಟಿಡಿಪಿ-ಜನಸೇನಾ ಪಕ್ಷಗಳು ಬಿಜೆಪಿಗೆ ಬಿಟ್ಟುಕೊಟ್ಟಿವೆ ಎಂದು ಮೂಲಗಳು ಹೇಳುತ್ತಿವೆ. ಸೀಟು ಹಂಚಿಕೆ ಸಂಬಂಧ ಚರ್ಚೆ ನಡೆಸಲು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು ದಿಲ್ಲಿಗೆ ತೆರಳಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ವೈಎಸ್‌ಆರ್‌ಸಿಪಿಯನ್ನು ಪ್ರತಿನಿಧಿಸುವ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ವಿ. ವಿಜಯಸಾಯಿ ರೆಡ್ಡಿ ಅವರ ರಾಜೀನಾಮೆಯ ನಂತರ ಈ ಹುದ್ದೆ (K Annamalai) ತೆರವಾಗಿದೆ.

ಅವಧಿಯ ಪ್ರಕಾರ ವಿ. ವಿಜಯಸಾಯಿ ರೆಡ್ಡಿ ಅವರ ಅವಧಿ 2028 ರ ಜೂನ್‌ವರೆಗೆ ಇತ್ತು. ಅದಕ್ಕೂ ಮುಂಚೆಯೇ ಅವರು ರಾಜೀನಾಮೆ ನೀಡಿ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದರು. ಇಬ್ಬರು ವೈಎಸ್‌ಆರ್‌ ಕಾಂಗ್ರೆಸ್‌ ಸಂಸದರು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಮೂರು ಸ್ಥಾನಗಳು ತೆರವಾಗಿತ್ತು. ಇದರಲ್ಲಿ ಎರಡು ಸ್ಥಾನಗಳನ್ನು ಆಡಳಿತರೂಢ ಟಿಡಿಪಿ ಪಡೆದುಕೊಂಡಿದೆ. ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಟಿಡಿಪಿಗೆ ಬಹುಮತ ಇರುವುದರಿಂದ ಇವೆರಡೂ ಸ್ಥಾನಗಳನ್ನು ನಿರಾಯಾಸವಾಗಿ ಗೆಲ್ಲಲಿದೆ. ಇದೀಗ ವಿಜಯಸಾಯಿ ರೆಡ್ಡಿ ರಾಜೀನಾಮೆಯಿಂದ ತೆರವಾದ ಮೂರನೇ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧವಾಗಿದೆ.

ಯಾರಿದ್ದಾರೆ ರೇಸ್‌ನಲ್ಲಿ?

ಬಿಜೆಪಿ ತನ್ನ ಅಭ್ಯರ್ಥಿಯ ಹೆಸರನ್ನು ಅಧಿಕೃತವಾಗಿ ಇನ್ನೂ ಘೋಷಣೆ ಮಾಡಿಲ್ಲ. ಈಗಾಗಲೇ ಹಲವು ಹೆಸರುಗಳು ಕೇಳಿ ಬರುತ್ತಿದ್ದು, ಅದರಲ್ಲಿ ಪ್ರಮುಖವಾಗಿ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಅವರ ಹೆಸರು ಮುಂಚೂಣಿಯಲ್ಲಿದೆ. ಸ್ಮೃತಿ ಇರಾನಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಿಶೋರಿ ಲಾಲ್‌ ಶರ್ಮಾ ವಿರುದ್ಧ ಸೋಲು ಕಂಡಿದ್ದರು. ಆದರೆ, ಅವರು ಬಿಜೆಪಿ ಪ್ರಬಲ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: BJP-AIADMK alliance: ಅಣ್ಣಾಮಲೈ ರಾಜೀನಾಮೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಘೋಷಣೆ

ಇನ್ನು ಮಾಜಿ ಐಪಿಎಸ್‌ ಅಧಿಕಾರಿಯಾಗಿದ್ದ ಕೆ ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ಅವರು ಪಕ್ಷವನ್ನು ಬಲಪಡಿಸಿದ್ದರು. ಇದೀಗ ಎಐಎಡಿಎಂಕೆ ಜೊತೆಗಿನ ಬಿಜೆಪಿ ಮೈತ್ರಿಯಿಂದಾಗಿ ಅವರ ಭವಿಷ್ಯ ಮಂಕಾಗಿದೆ. ಮೈತ್ರಿ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ತೊರೆದಿರುವ ಅಣ್ಣಾಮಲೈ ಅವರು ಇದೀಗ ರಾಜ್ಯಸಭೆ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದೆ. ಮೇ 9 ರಂದು ನಡೆಯಲಿರುವ ಚುನಾವಣೆಗೆ ಈಗಾಗಲೇ ಅಧಿಸೂಚನೆ ಹೊರಬಿದ್ದಿದ್ದು, ಏಪ್ರಿಲ್ 29 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.