ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನೂತನ ರಾಜಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಕೋವಿಂದ್

ನೂತನ ರಾಜಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಕೋವಿಂದ್

ನೂತನ ರಾಜಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಕೋವಿಂದ್

Profile Vishwavani News Jun 15, 2022 4:25 PM
image-a9dfff07-66da-4315-9c12-dc7db371587e.jpg
image-a88a9836-abe4-48f1-9020-16ff70340444.jpg
ಪಣಜಿ: ನಮ್ಮ ರಾಜಭವನವು ರಾಷ್ಟ್ರೀಯ ಸ್ಮಾರಕವಾಗಿದೆ ಎಂದು ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೆ ಹೇಳಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ರವರು ಬುಧವಾರ ಗೋವಾದ ದೋನಾ ಪಾಲುವ ರಾಜಭವನದ ಸಮೀಪ ನೂತನ ರಾಜಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ನೆರವೇರಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ ರವರಿಗೆ ಗೋವಾ ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೆ ಧನ್ಯವಾದ ಹೇಳಿದರು. ಸದ್ಯದ ವಿಲಕ್ಷಣ ಸನ್ನಿವೇಶದಿಂದಾಗಿ ರಾಷ್ಟ್ರಪತಿಗಳು ಭಾಷಣ ಮಾಡುವುದಿಲ್ಲ ಎಂದು ರಾಜ್ಯಪಾಲರು ಹೇಳಿದರು. ಗೋವಾ ರಾಜಭವನವು ರಾಷ್ಟ್ರೀಯ ಸ್ಮಾರಕವಾಗಿ ಘೋಷಣೆಯಾಗಿದೆ. ಆದರೆ ಭದ್ರತೆ ಮತ್ತು ಇತರ ಕೆಲ ಕಾರಣಗಳಿಂದಾಗಿ ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಲಭಿಸುತ್ತಿಲ್ಲ. ಗೋವಾ ರಾಜಭವನವು 450 ವರ್ಷಗಳಷ್ಟು ಹಳೆಯದಾಗಿದೆ. ಇದರಿಂದಾಗಿ ಹೊಸ ರಾಜಭವನ ನಿರ್ಮಾಣಕ್ಕೆ ಚಾಲನೆ ದೊರೆತಿದೆ. ಹಳೇಯ ರಾಜಭವನವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಗಿರುವುದರಿಂದ ಹೊಸ ರಾಜಭವನ ನಿರ್ಮಾಣಗೊಂಡ ನಂತರವೂ ಹಳೆಯ ರಾಜಭವನವನ್ನು ಕೆಡವಿಹಾಕಲು ಅಥವಾ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಗೋವಾ ರಾಜ್ಯಪಾಲ ಹೇಳಿದರು. ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್, ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀಪಾದ ನಾಯ್ಕ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.