ನೀರು ಬಿಡಿ: ಮತ್ತೊಮ್ಮೆ ಸಿಡಬ್ಲ್ಯೂಆರ್‌ಸಿ ಆರ್ಡರ್
ಆಗಸ್ಟ್ 25 ರ ಬೆಳಗ್ಗೆ 8 ಗಂಟೆಯಿಂದ ಮುಂದಿನ 15 ದಿನಗಳ ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಒಟ್ಟು 11.66 ಟಿಎಂಸಿ ನೀರು ಹರಿಯುವಂತೆ ನೋಡಿಕೊಳ್ಳಬೇಕು ಎಂದು ಸಿಡಬ್ಲ್ಯೂಆರ್‌ಸಿ ಸೂಚಿಸಿದೆ. ಈಗಾಗಲೇ ಕೆಆರ್‌ಎಸ್, ಕಬಿನಿ ಸೇರಿದಂತೆ ರಾಜ್ಯದ ಹಲವು ಜಲಾಶಯಗಳಿಂದ 30 ಟಿಎಂಸಿಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ.
-
ತಮಿಳುನಾಡಿಗೆ ಇಂದಿನಿಂದ 15 ದಿನಗಳ ಕಾಲ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ
ದೆಹಲಿ: ಬರಗಾಲದ ಭೀತಿ ನಡುವೆ ಕರ್ನಾಟಕಕ್ಕೆ ಮತ್ತೊಮ್ಮೆ ‘ಕಾವೇರಿ’ದ ಆಘಾತ ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ವರೆಗೆ 9000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಸೋಮವಾರ ಬೆಳಿಗ್ಗೆ ನಡೆದ ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಸಭೆಯಲ್ಲಿ ತಮಿಳುನಾಡಿಗೆ ಮತ್ತೆ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಲಾಗಿದೆ. 12 ಸಾವಿರ ಬದಲಿಗೆ ಈಗ 9 ಸಾವಿರ ಕ್ಯೂಸೆಕ್ ನೀರು ಬಿಡಲು ತಿಳಿಸಲಾಗಿದೆ.
ಸಂಜೆ ನಡೆದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಸಭೆಯಲ್ಲಿ ಈ ಆದೇಶವನ್ನು ಎತ್ತಿ ಹಿಡಿಯಲಾಗಿದೆ. ಈ ನಡುವೆ ಕಾವೇರಿ ನೀರು ಕುರಿತ ತಮಿಳುನಾಡು ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ. ಸಿಡಬ್ಲ್ಯೂಎಂಎ ಮೊದಲ ಬಾರಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶಿಸಲಾಗಿತ್ತು. ಎರಡನೇ ಬಾರಿಗೆ 12 ಸಾವಿರ, ಈಗ ಮೂರನೇ ಬಾರಿಗೆ 9 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಿದೆ. ಸೋಮವಾರ ದೆಹಲಿಯಲ್ಲಿ ಸಿಡಬ್ಲ್ಯೂ ಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತದಲ್ಲಿ ನಡೆದ 141ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇದನ್ನೂ ಓದಿ: Cauvery Water Dispute: ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ನಿತ್ಯ 9000 ಕ್ಯೂಸೆಕ್ ಕಾವೇರಿ ನೀರು ಹರಿಸಲು CWRC ಶಿಫಾರಸು
ಆಗಸ್ಟ್ 25 ರ ಬೆಳಗ್ಗೆ 8 ಗಂಟೆಯಿಂದ ಮುಂದಿನ 15 ದಿನಗಳ ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಒಟ್ಟು 11.66 ಟಿಎಂಸಿ ನೀರು ಹರಿಯುವಂತೆ ನೋಡಿಕೊಳ್ಳಬೇಕು ಎಂದು ಸಿಡಬ್ಲ್ಯೂಆರ್‌ಸಿ ಸೂಚಿಸಿದೆ. ಈಗಾಗಲೇ ಕೆಆರ್‌ಎಸ್, ಕಬಿನಿ ಸೇರಿದಂತೆ ರಾಜ್ಯದ ಹಲವು ಜಲಾಶಯಗಳಿಂದ 30 ಟಿಎಂಸಿಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಇದರ ನಡುವೆಯೇ ಮತ್ತೆ 15 ದಿನಗಳ ಕಾಲ 9 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ನಾಲೆಗಳಿಗೆ ನೀರು ಬಿಡದೆ ಬೆಳೆ ಬೆಳೆಯಲು ರೈತರಿಗೆ ಅವಕಾಶ ನೀಡದ ಸರಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ, ಮೈಸೂರು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಹಲವು ಭಾಗಗಳಲ್ಲಿ ರೈತರು ಪ್ರಾಧಿಕಾರದ ಆದೇಶವನ್ನು ವಿರೋಧಿಸಿದ್ದು, ನೀರು ಹರಿಸುವ ನಿರ್ಧಾರ ಅವೈಜ್ಞಾನಿಕವಾಗಿದೆ ಎಂದು ಖಂಡಿಸಿದ್ದಾರೆ.
ತ.ನಾಡಿನ ಬೇಡಿಕೆ ಏನು?
ಬಾಕಿ ಉಳಿಸಿಕೊಂಡ 17.49 ಟಿಎಂಸಿ ನೀರು ಹರಿಸ ಬೇಕು. ಆಗಸ್ಟ್ 24 ರಿಂದ ಸೆಪ್ಟೆಂಬರ್ 7 ರವರೆಗಿನ 15 ದಿನಗಳಲ್ಲಿ ಒಟ್ಟು 28.386 ಟಿಎಂಸಿ ನೀರು ಬಿಳಿಗುಂಡ್ಲುವಿಗೆ ತಲುಪಬೇಕು. ಇದರಲ್ಲಿ 17.49 ಟಿಎಂಸಿ ಬಾಕಿ ಪ್ರಮಾಣ ಹಾಗೂ 10.896 ಟಿಎಂಸಿ ಪ್ರೊ-ರಾಟಾ ಪಾಲು ಸೇರಿದೆ. ಸಂಕಷ್ಟ ಪರಿಸ್ಥಿತಿಯಲ್ಲೂ ತಮಿಳು ನಾಡಿಗೆ ತನ್ನ ನ್ಯಾಯಸಮ್ಮತ ಪಾಲು ಸಿಗಬೇಕು.
ಸುಪ್ರೀಂ ವಿಚಾರಣೆ ಮುಂದಕ್ಕೆ
ದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 31ಕ್ಕೆ ಮುಂದೂ ಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಸೋಮವಾರ ವಾದ ಮಂಡಿಸಿದ ತಮಿಳುನಾಡು ಪರ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನ ಗಳನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು. ಕರ್ನಾಟಕ ತನ್ನ ರೈತರಿಗೆ ನೀರು ಹರಿಸುತ್ತಿದೆ. ಆದರೆ, ತಮಿಳುನಾಡಿಗೆ ಮಾತ್ರ ನೀರಿನ ಕೊರತೆಯಿದೆ ಎಂದು ಹೇಳುತ್ತಿದೆ ಎಂದು ಅವರು ದೂರಿದರು. ಇದಕ್ಕೆ ಪ್ರತಿಯಾಗಿ ಕರ್ನಾಟಕ ಪರ ವಕೀಲರು, ರಾಜ್ಯವು ಈಗಾಗಲೇ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ತಿಳಿಸಿದರು. ಜಲಾಶಯ ಗಳಲ್ಲಿನ ನೀರಿನ ಮಟ್ಟ, ನೀರು ಬಿಡುಗಡೆ ಹಾಗೂ ಪ್ರಸ್ತುತ ಪರಿಸ್ಥಿತಿಯ ಕುರಿತು ನ್ಯಾಯಾಲಯಕ್ಕೆ ವಿವರಿಸಿದರು. ಎರಡೂ ರಾಜ್ಯಗಳ ವಾದ ಆಲಿಸಿದ ನ್ಯಾಯಪೀಠ, ಈಗ ಸಮಸ್ಯೆ ಏನಿದೆ? ಸಮಸ್ಯೆ ಇದ್ದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಹೋಗಿ ಎಂದು ಸೂಚಿಸಿ ಅರ್ಜಿಯ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ಮುಂದೂಡಿತು.
ಸಿಡಬ್ಲ್ಯೂಆರ್‌ಸಿ ತೀರ್ಮಾನ ಏನು?
ಕರ್ನಾಟಕದ ಜಲಾಶಯಗಳ ಪ್ರಸ್ತುತ ನೀರಿನ ಸಂಗ್ರಹ, ಕೆಆರ್‌ಎಸ್ ಮತ್ತು ಕಬಿನಿ ಮೇಲ್ಭಾಗದ ಕಾವೇರಿ ಜಲ ನಿರ್ವಹಣಾ ಸಮಿತಿ ಕೇಂದ್ರಗಳ ಅಂಕಿ-ಅಂಶಗಳು ಹಾಗೂ 7 ದಿನಗಳ ಒಳಹರಿವು ಮುನ್ಸೂಚನೆ ಗಳನ್ನು ಪರಿಗಣಿಸಿ ಸಮಿತಿಯು, ಕರ್ನಾಟಕದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ಬಿಳಿಗುಂಡ್ಲುವಿನಲ್ಲಿ ದಿನಕ್ಕೆ 9000 ಕ್ಯೂಸೆಕ್ ಹರಿವು ಖಚಿತಪಡಿಸಬೇಕು ಎಂದು ಸಿಡಬ್ಲ್ಯೂಆರ್‌ಸಿ ಸೂಚಿಸಿದೆ.
ಆದೇಶಕ್ಕಿಂತ ಹೆಚ್ಚೇ ನೀರು ಬಿಡುಗಡೆ ಕರ್ನಾಟಕದ ನಾಲ್ಕು ಪ್ರಮುಖ ಕಾವೇರಿ ಜಲಾಶಯಗಳಿಗೆ ಒಳಹರಿವು ಕಳೆದ 30 ವರ್ಷಗಳ ಸರಾಸರಿಗಿಂತ ಶೇ.49.18 ರಷ್ಟು ಕಡಿಮೆಯಾಗಿದೆ. ಇಷ್ಟಾದರೂ ಜುಲೈ 29ರಿಂದ ಆಗಸ್ಟ್ 23ರವರೆಗೆ ಬಿಳಿಗುಂಡ್ಲು ಮೂಲಕ ತಮಿಳುನಾಡಿಗೆ ಒಟ್ಟು 2,16,993
ಕ್ಯೂಸೆಕ್ ನೀರು ಹರಿಸಲಾಗಿದೆ. ಇದು ಆದೇಶಿತ ೧,೮೪,೫೦೦ ಕ್ಯೂಸೆಕ್‌ಗಿಂತ ೩೨,೪೯೩ ಕ್ಯೂಸೆಕ್ ಹೆಚ್ಚಾಗಿದೆ. ಈ ನಡುವೆ ಜಲಾಶಯಗಳ ಒಟ್ಟು ಒಳಹರಿವು ೭೭,೦೪೮ ಕ್ಯೂಸೆಕ್‌ನಿಂದ ೯,೨೮೨ ಕ್ಯೂಸೆಕ್‌ಗೆ ತೀವ್ರವಾಗಿ ಕುಸಿದಿದೆ. ಹೀಗಾಗಿ, ಬಿಳಿಗುಂಡ್ಲುವಿನಲ್ಲಿ ನಿರಂತರವಾಗಿ ೧೨,೦೦೦ ಕ್ಯೂಸೆಕ್ ನೀರು ಕಾಯ್ದುಕೊಳ್ಳುವುದು ಕಷ್ಟ. ಸಂಕಷ್ಟ ಪರಿಸ್ಥಿತಿಗೆ ಅನುಗುಣವಾಗಿ ಖಾರಿ- ಬೆಳೆಗಳಿಗೆ ಕರ್ನಾಟಕದ ಅಗತ್ಯ ೫೬.೬೭ ಟಿಎಂಸಿ ಎಂದು ಅಂದಾಜಿಸಲಾಗಿದ್ದು, ಈವರೆಗೆ ಕೇವಲ ೫.೦೬ ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.
ಕುಡಿಯುವ ನೀರಿಗಾಗಿ ಸುಮಾರು 38 ಟಿಎಂಸಿ, ಪರಿಸರದ ಹರಿವಿಗಾಗಿ 10 ಟಿಎಂಸಿ ನೀರನ್ನು ಕಾಯ್ದಿರಿಸುವ ಅಗತ್ಯವಿದೆ. ತಮಿಳುನಾಡಿನ ಮೆಟ್ಟೂರು ಜಲಾಶಯದ ಸಂಗ್ರಹ, ಅಂತರ್ಜಲ ಲಭ್ಯತೆ ಮತ್ತು ಈಶಾನ್ಯ ಮುಂಗಾರು ನಿರೀಕ್ಷಿತ ಹರಿವುಗಳನ್ನು ಪರಿಗಣಿಸಬೇಕು. ಸಂಕಷ್ಟದ ಹೊರೆ ಕೇವಲ ಕರ್ನಾಟಕದ ಜಲಾಶಯಗಳ ಮೇಲೆ ಬೀಳಬಾರದು.12000 ಕ್ಯೂಸೆಕ್ ಬದಲು ದಿನಕ್ಕೆ ೬,೦೦೦ ಕ್ಯೂಸೆಕ್‌ಗೆ ಇಳಿಸಿ, ಆಗಸ್ಟ್ ೨೭ ರವರೆಗೆ ಮಾತ್ರ ನೀರು ಹರಿಸಲು ಸೂಚಿಸಬೇಕೆಂದು ರಾಜ್ಯಸರಕಾರ ಮನವಿ ಮಾಡಿತ್ತು