ನೋಯ್ಡಾ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಹೆಸರನ್ನು ನೋಯ್ಡಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ( Noida International Airport) ಇಡಲಾಗಿದೆ. ಈ ಕುರಿತ ಪ್ರಸ್ತಾವನೆಗೆ ಉತ್ತರಪ್ರದೇಶದ ಸಚಿವ ಸಂಪುಟ ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (cm Yogi Adityanath) ತಿಳಿಸಿದರು. ಜೆವಾರ್ ನಲ್ಲಿರುವನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Jewar Narendra Modi International Airport) ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಶುಕ್ರವಾರ ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಪುಟದಿಂದ ಅನುಮೋದನೆ ನೀಡಲಾಯಿತು ಎಂದು ಲಕ್ನೋದಲ್ಲಿ ಅವರು ಘೋಷಣೆ ಮಾಡಿದರು.
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು 'ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ನೋಯ್ಡಾ-ಜೆವಾರ್' ಎಂದು ಹೆಸರಿಸುವ ಪ್ರಸ್ತಾಪಕ್ಕೂ ಸಂಪುಟದಿಂದ ಅನುಮೋದನೆ ನೀಡಲಾಗಿದೆ. ಇದರ ಅಭಿವೃದ್ಧಿಯು ರಾಜ್ಯದ ವಾಯು ಸಂಪರ್ಕವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದ ಅವರು ಇದರೊಂದಿಗೆ ಹೆದ್ದಾರಿ, ರೈಲು ಸಂಪರ್ಕ, ಮೆಟ್ರೋ ಜಾಲಗಳು ಮತ್ತು ಸರಕು ಸಾಗಣೆ ಕಾರಿಡಾರ್‌ಗಳು ಸೇರಿದಂತೆ ಉತ್ತರ ಪ್ರದೇಶದಾದ್ಯಂತ ಮೂಲಸೌಕರ್ಯ ಯೋಜನೆಗಳ ಬಗ್ಗೆಯೂ ವಿವರಿಸಿದರು.
ಈ ವಿಮಾನ ನಿಲ್ದಾಣವು ಭವಿಷ್ಯದಲ್ಲಿ ಉತ್ತರ ಪ್ರದೇಶದ ಅತಿದೊಡ್ಡ ವಿಮಾನ ನಿಲ್ದಾಣ ಮತ್ತು ದೇಶದ ಪ್ರಮುಖ ವಾಯುಯಾನ ಕೇಂದ್ರವಾಗುವ ನಿರೀಕ್ಷೆಯಿದೆ ಎಂದ ಅವರು, ಇದು ರಾಜ್ಯದ ಪ್ರಮುಖ ಮೂಲಸೌಕರ್ಯ ಯೋಜನೆಯಲ್ಲೊಂದು. ಈ ವಿಮಾನ ನಿಲ್ದಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಪುಟ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ: 10 ಸಾವು, 16 ಮಂದಿಗೆ ಗಾಯ
ರಾಜ್ಯದಲ್ಲಿ 2,483 ಕಿಲೋಮೀಟರ್‌ಗಳಷ್ಟು ಉದ್ದವಿರುವ 42 ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಲ್ಲಿ ಸುಮಾರು 60,000 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಇದರಲ್ಲಿ ದೆಹಲಿ-ಸಹಾರನ್‌ಪುರ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ಮತ್ತು ಕಾನ್ಪುರ-ಲಕ್ನೋ ಎಕ್ಸ್‌ಪ್ರೆಸ್‌ವೇ ಪೂರ್ಣಗೊಂಡಿರುವುದಾಗಿ ತಿಳಿಸಿದರು.
ದೆಹಲಿ-ಗಾಜಿಯಾಬಾದ್-ಮೀರತ್ ನಮೋ ಭಾರತ್ ರೈಲು ದೇಶದ ಮೊದಲ ಹೈ-ಸ್ಪೀಡ್ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆಯಾಗಿದೆ. ಈ ಯೋಜನೆಯನ್ನು 30,000 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಲಕ್ನೋ, ಕಾನ್ಪುರ, ಆಗ್ರಾ, ಮೀರತ್, ಗಾಜಿಯಾಬಾದ್, ನೋಯ್ಡಾ ಮತ್ತು ಗ್ರೇಟರ್ ನೋಯ್ಡಾಗಳಲ್ಲಿ ಮೆಟ್ರೋ ರೈಲು ಜಾಲಗಳನ್ನು ವಿಸ್ತರಿಸಲಾಗಿದೆ ಎಂದು ಹೇಳಿದರು.
ಉತ್ತರ ಪ್ರದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಇತರ ಮೂಲಸೌಕರ್ಯ ಮತ್ತು ಕೈಗಾರಿಕಾ ಯೋಜನೆಗಳ ಬಗ್ಗೆಯೂ ವಿವರಿಸಿದ ಅವರು, ಪೂರ್ವ ಮತ್ತು ಪಶ್ಚಿಮ ಮೀಸಲು ಸರಕು ಸಾಗಣೆ ಕಾರಿಡಾರ್‌ಗಳನ್ನು ಸಂಪರ್ಕಿಸುವ ಪ್ರಮುಖ ಜಂಕ್ಷನ್ ಆಗಿರುವ ದಾದ್ರಿ ಕಾರಿಡಾರ್‌ನ 1,050 ಕಿಲೋಮೀಟರ್‌ಗಿಂತಲೂ ಹೆಚ್ಚು ಭಾಗವು ರಾಜ್ಯದ ಮೂಲಕ ಹಾದುಹೋಗುತ್ತದೆ ಎಂದು ತಿಳಿಸಿದರು.
ಭಾರತೀಯ ಮೂಲದ ನ್ಯಾಯವಾದಿಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ: ಯಾರು ಈ ನವಿ ಪಿಳ್ಳೈ?
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ನೋಯ್ಡಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲಾಗಿದೆ. ಈ ಕುರಿತ ಪ್ರಸ್ತಾವನೆಗೆ ಉತ್ತರಪ್ರದೇಶದ ಸಚಿವ ಸಂಪುಟ ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು. ಜೆವಾರ್ ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಶುಕ್ರವಾರ ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಪುಟದಿಂದ ಅನುಮೋದನೆ ನೀಡಲಾಯಿತು ಎಂದು ಲಕ್ನೋದಲ್ಲಿ ಅವರು ಘೋಷಣೆ ಮಾಡಿದರು.