ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಮೋದಿ ಭೇಟಿ, ಕರ್ತವ್ಯಪಥದಲ್ಲಿ ಭಾರತದ ಸೇನಾ ಶಕ್ತಿ ಪ್ರದರ್ಶನ ಶುರು
ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಪ್ರಧಾನಿ ಮೋದಿ ಕರ್ತವ್ಯಪಥಕ್ಕೆ ತೆರಳಿದ್ದಾರೆ.
ಸಂಗ್ರಹ ಚಿತ್ರ -
77 ನೇ ಗಣರಾಜ್ಯೋತ್ಸವದ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿದೆ. ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸುವವನ್ನು ಪ್ರಧಾನಿ ನರೇಂದ್ರ ಮೋದಿ ಸಲ್ಲಿಸಿದರು. ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು. ಪ್ರಧಾನಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್ ನೀಡಿದ್ದಾರೆ. ಮೂರು ಪಡೆಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು. ಬಳಿಕ ಅವರು ಕರ್ತವ್ಯ ಪಥದತ್ತ ತೆರಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಕರ್ತವ್ಯಪಥಕ್ಕೆ ತೆರಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಮುಖ್ಯ ಅಥಿತಿಗಳನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಂಡಿದ್ದಾರೆ. ಬಳಿಕ ಧ್ವಜಾರೋಹಣ ನಡೆಸಲಾಗಿದೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಷೇಶ ಸಾಧನೆ ಮಾಡಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಗೆ ಅಶೋಕ ಚಕ್ರ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಯಿತು.
ಸೂರ್ಯಾಸ್ತ್ರ - URLS ಮತ್ತು ಬ್ರಹ್ಮೋಸ್ ಕ್ಷಿಪಣಿ ಸೇರಿದಂತೆ ಆಪರೇಷನ್ ಸಿಂದೂರದ ಸಮಯದಲ್ಲಿ ಬಳಕೆಯಾಗಿದ್ದ ಶಸ್ತ್ರಾಸ್ರ್ತಗಳನ್ನು ಪರೇಡ್ನಲ್ಲಿ ಪ್ರದರ್ಶಿಸಲಾಗಿದೆ.