ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ದೀರ್ಘಾವಧಿಯ ಅಧಿಕಾರವನ್ನು (longest-serving elected prime minister) ಗುರುತಿಸುವ ಸಲುವಾಗಿ ಕೇಂದ್ರ ಸಚಿವ ಸಂಪುಟ (Union Cabinet) ಬುಧವಾರ ನಿರ್ಣಯವನ್ನು ಅಂಗೀಕರಿಸಿತ್ತು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಸಚಿವ ಸಂಪುಟದ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದರು. ಪ್ರಧಾನಿ ಮೋದಿ ಅವರು ಅಧಿಕಾರದಲ್ಲಿ ಬುಧವಾರ ಸತತ 4,399 ದಿನಗಳನ್ನು ಪೂರ್ಣಗೊಳಿಸಿದ್ದು, ಈ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ 4,398 ದಿನಗಳ ಅಧಿಕಾರಾವಧಿಯ ದಾಖಲೆಯನ್ನು ಮುರಿದರು.
ದೇಶದ ಆಡಳಿತ ನಡೆಸಿರುವ ೧೫ ಪ್ರಧಾನಿಗಳಲ್ಲಿ ಈಗ ನರೇಂದ್ರ ಮೋದಿ ಅವರೇ ದೀರ್ಘಕಾಲ ಅಧಿಕಾರ ನಡೆಸಿದ ಪ್ರಧಾನಿಯಾಗಿ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದ್ದಾರೆ. ಸುದೀರ್ಘ ಅವಧಿಗೆ ಚುನಾಯಿತ ಪ್ರಧಾನಿಯಾಗಿದ್ದಕ್ಕಾಗಿ ಅವರನ್ನು ಅಭಿನಂದಿಸಲು ಕೇಂದ್ರ ಸಚಿವ ಸಂಪುಟ ನಿರ್ಣಯವನ್ನು ಬುಧವಾರ ಅಂಗೀಕರಿಸಿತು. ಈ ಮೈಲಿಗಲ್ಲನ್ನು ಗುರುತಿಸಲು ಸಂಪುಟದ ಸದಸ್ಯರು ಅವರಿಗೆ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದಿಸಿದರು.
ಅತಿ ದೀರ್ಘಾವಧಿ ಸೇವೆ ಸಲ್ಲಿಸಿದ ಪ್ರಧಾನಿ; ಮೋದಿ ಸಾಧನೆಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅಭಿನಂದನೆ
ಚುನಾಯಿತ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಧಿವರವಧಿಯ ದಾಖಲೆಯನ್ನು ಮುರಿದಿದ್ದಾರೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ ನರೇಂದ್ರ ಮೋದಿ ಅವರು ಅಧಿಕಾರದಲ್ಲಿ ಬುಧವಾರ ಸತತ 4,399 ದಿನಗಳನ್ನು ಪೂರ್ಣಗೊಳಿಸಿದರು. ಜವಾಹರ್ ಲಾಲ್ ನೆಹರೂ ಅವರು ಅಧಿಕಾರಾವಧಿ ದಿನಗಳ 4,398 ಆಗಿವೆ.
ಜವಾಹರ್ ಲಾಲ್ ನೆಹರೂ ಅವರು 1952ರಲ್ಲಿ ಮೊದಲ ಬಾರಿಗೆ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿದ್ದು, 1964ರ ಮೇ 27ರ ವರೆಗೆ ಅಂದರೆ ತಮ್ಮ ಸಾವಿನ ದಿನದವರೆಗೂ ಅಧಿಕಾರದಲ್ಲಿದ್ದರು. ಸಾರ್ವತ್ರಿಕ ಚುನಾವಣೆಗಳು ನಡೆದಿಲ್ಲದ ಕಾರಣ 1947 ಮತ್ತು 1952 ರ ನಡುವಿನ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅವರ ಅವಧಿಯನ್ನು ಚುನಾಯಿತ ಅಧಿಕಾರಾವಧಿ ಎಂದು ಪರಿಗಣಿಸಲಾಗುವುದಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು 2014ರ ಮೇ 26ರಂದು ಮೊದಲು ಅಧಿಕಾರ ವಹಿಸಿಕೊಂಡಿದ್ದು, 2019ರ ಮೇ 30ರಂದು ತಮ್ಮ ಎರಡನೇ ಅವಧಿಯನ್ನು ಪ್ರಾರಂಭಿಸಿದರು. 2024ರ ಜೂನ್ 9ರಂದು ಸತತ ಮೂರನೇ ಅವಧಿಗೆ ಅವರು ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಒಟ್ಟು 14 ವರ್ಷಗಳಿಗೂ ಹೆಚ್ಚು ಕಾಲ ಪ್ರಧಾನಿಯಾಗಿದ್ದರೂ ಕೂಡ ಅವರ ಅಧಿಕಾರಾವಧಿ ನಿರಂತರವಾಗಿರಲಿಲ್ಲ. ಹೀಗಾಗಿ ನರೇಂದ್ರ ಮೋದಿ ಅವರು ನಿರಂತರ ದೀರ್ಘಾವಧಿಗೆ ಪ್ರಧಾನಿಯಾಗಿದ್ದವರು ಎಂದು ಗೌರವಿಸಲ್ಪಟ್ಟಿದ್ದಾರೆ.
ವಿಶ್ವನಾಯಕರಿಂದ ಅಭಿನಂದನೆ
ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗೆ ಹಲವಾರು ವಿಶ್ವ ನಾಯಕರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, ಭಾರತದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇವರು ಭಾರತದ ಆರ್ಥಿಕತೆ ಮತ್ತು ಸ್ಥಾನಮಾನವನ್ನು ಪರಿವರ್ತಿಸಿದ ನಿಜವಾದ ರಾಜಕಾರಣಿ ಎಂದು ಹೇಳಿದ್ದಾರೆ.
ನನ್ನ ಮತ್ತು ಮೋದಿಯವರ ನಡುವಿನ ಬಾಂಧವ್ಯ ರಾಜ್ಯಸಭೆ ಸ್ಥಾನವನ್ನು ಮೀರಿದ್ದು: ಎಚ್.ಡಿ.ದೇವೇಗೌಡ
ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರಾವಧಿಯ ಈ ಮೈಲಿಗಲ್ಲು ಭಾರತದ ಅಭಿವೃದ್ಧಿ ಮತ್ತು ಸಮೃದ್ಧಿಯನ್ನು ಮುನ್ನಡೆಸುವಲ್ಲಿ ಅವರ ಸೇವೆ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ನೈಜೀರಿಯಾದ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು, ಮಾಲ್ಡೀವಿಯನ್ ಮಾಜಿ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್, ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಕೂಡ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದಾರೆ.