ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Road accident: ವಾಲ್ಪಾರೈ ಘಾಟಿಯಲ್ಲಿ ಭೀಕರ ಅಪಘಾತ, 9 ಪ್ರವಾಸಿಗರು ಸಾವು

ಕೇರಳದ ಪೆರಿಂತಲ್ಮಣ ಮೂಲದ 13 ಸದಸ್ಯರ ತಂಡ ವಾಲ್ಪಾರೈ ಪ್ರವಾಸ ಮುಗಿಸಿ ವಾಪಸಾಗುತ್ತಿತ್ತು. ಚಾಲಕ ಸೇರಿದಂತೆ 13 ಮಂದಿ ಈ ಪ್ರವಾಸಿಗರು ಗುಂಪಿನ ಭಾಗವಾಗಿದ್ದರು. ಪ್ರಾಥಮಿಕ ವರದಿಗಳ ಪ್ರಕಾರ, ಭಾರಿ ತಿರುವಿನಲ್ಲಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ.

ವಾಲ್ಪಾರೈ ಘಾಟಿಯಲ್ಲಿ ಭೀಕರ ಅಪಘಾತ, 9 ಪ್ರವಾಸಿಗರು ಸಾವು

ವಾಲ್ಪಾರೈ ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Apr 18, 2026 7:29 AM

ಕೊಯಮತ್ತೂರು, ಏ.18: ತಮಿಳುನಾಡಿನ (Tamil Nadu) ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ (Valparai Ghat) ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ್ದರಿಂದ ಈ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಪಾಂಗು ಎಂಬಲ್ಲಿನ ಸರ್ಕಾರಿ ಎಲ್‌ಪಿ ಶಾಲೆಯ ಐವರು ಶಿಕ್ಷಕಿಯರು ಸೇರಿದ್ದಾರೆ.

ಮೃತರನ್ನು ಅಜಿತಾ (54), ರಮ್ಲಾ (52), ಸುಹ್ರಾ (43), ಆಶಾ (41), ಮಜೀತ್ (43), ಸಜಿತಾ (45), ಶಕೀಲಾ (37), ರುಕಿಯಾ (39) ಮತ್ತು ಹಿಶಾಂ (12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಾಲಕ ಸೇರಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇರಳದ ಪೆರಿಂತಲ್ಮಣ ಮೂಲದ 13 ಸದಸ್ಯರ ತಂಡ ವಾಲ್ಪಾರೈ ಪ್ರವಾಸ ಮುಗಿಸಿ ವಾಪಸಾಗುತ್ತಿತ್ತು. ಚಾಲಕ ಸೇರಿದಂತೆ 13 ಮಂದಿ ಈ ಪ್ರವಾಸಿಗರು ಗುಂಪಿನ ಭಾಗವಾಗಿದ್ದರು. ಪ್ರಾಥಮಿಕ ವರದಿಗಳ ಪ್ರಕಾರ, ಭಾರಿ ತಿರುವಿನಲ್ಲಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ. ಸಂಜೆ 5:15ರ ಸುಮಾರಿಗೆ 13ನೇ ಹೇರ್ ಪಿನ್ ಬೆಂಡ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯಿಂದ ಕೆಳಕ್ಕೆ ಜಾರಿ 9ನೇ ಹೇರ್ ಪಿನ್ ಬೆಂಡ್ ವರೆಗೆ ಉರುಳಿದೆ. ಕಡಿದಾದ ಭೂಪ್ರದೇಶ ಮತ್ತು ದಟ್ಟ ಅರಣ್ಯದ ಕಾರಣದಿಂದ ರಕ್ಷಣಾ ಕಾರ್ಯಾಚರಣೆ ಅತ್ಯಂತ ಸವಾಲಿನದ್ದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Yadgir accident: ಯಾದಗಿರಿ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ; ಸಿರವಾರ ಪಟ್ಟಣ ಪಂಚಾಯತ್ ಸದಸ್ಯನ ಕುಟುಂಬದ 6 ಮಂದಿ ಸಜೀವ ದಹನ

ಕೊಯಮತ್ತೂರು ಜಿಲ್ಲಾಧಿಕಾರಿ ಪವನಕುಮಾರ್ ಜಿ. ಗಿರಿಯಪ್ಪನವರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಡಂಪರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ತುಂಬಾ ದುಃಖವಾಯಿತು. ಈ ಅಪಘಾತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿಯವರು ಸಂದೇಶದಲ್ಲಿ ತಿಳಿಸಿದ್ದಾರೆ.