Parliament Monsoon Session: ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಸಿಎಂ ವಜಾ ಮಾಡುವ ಮಸೂದೆ ಮಂಡನೆಗೆ ಕೇಂದ್ರ ಸಜ್ಜು; ಪ್ರತಿಪಕ್ಷಗಳಿಂದ ತೀವ್ರ ವಿರೋಧ
ಯಾವುದೇ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯಗಳ ಸಚಿವರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದರೆ ಅಥವಾ ಬಂಧಿಸಿದರೆ, 30 ದಿನಗಳ ಒಳಗೆ ಅವರನ್ನು ಅವರನ್ನು ಹುದ್ದೆಯಿಂದ ತೆಗೆದು ಹಾಕುವ ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಸಜ್ಜಾಗಿದ್ದು, ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.


ದೆಹಲಿ: ಯಾವುದೇ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯಗಳ ಸಚಿವರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದರೆ ಅಥವಾ ಬಂಧಿಸಿದರೆ, 30 ದಿನಗಳ ಒಳಗೆ ಅವರನ್ನು ಅವರನ್ನು ಹುದ್ದೆಯಿಂದ ತೆಗೆದು ಹಾಕುವ ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಸಜ್ಜಾಗಿದ್ದು, ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ (Parliament Monsoon Session). ಈ ಹಿನ್ನೆಲೆಯಲ್ಲಿ ಸಂಸತ್‌ನಲ್ಲಿ ಕೋಲಾಹಲ ನಡೆಯುವ ಸಾಧ್ಯತೆ ಇದೆ. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕರಡು ಮಸೂದೆಗೆ ಅನುಮೋದನೆ ನೀಡಲಾಗಿತ್ತು.
ಪ್ರಸ್ತಾವಿತ ಕಾನೂನುಗಳಾದ - ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025, ಸಂವಿಧಾನ (130ನೇ ತಿದ್ದುಪಡಿ) ಮಸೂದೆ 2025 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2025 - ಇವುಗಳನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ (ಆಗಸ್ಟ್ 20) ಮಂಡಿಸಲಿದೆ. ಗೃಹ ಸಚಿವ ಅಮಿತ್ ಶಾ ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವ ಪ್ರಸ್ತಾವನೆಯನ್ನು ಸಂಸತ್‌ನ ಮುಂದಿರಿಸಲಿದ್ದಾರೆ.
Monsoon Session: Govt to introduce Constitution Amendment Bill to remove CM, Ministers held on serious charges
— ANI Digital (@ani_digital) August 20, 2025
Read @ANI Story | https://t.co/vU20Ad5DD3#Parliament #AmitShah #BJP #JammuKashmir pic.twitter.com/6jBoFOS5Sv
ಈ ಸುದ್ದಿಯನ್ನೂ ಓದಿ: Indian Railways: ಭಾರತೀಯ ರೈಲ್ವೆಯಲ್ಲಿ ಹೊಸ ನಿಯಮ; ಹೆಚ್ಚು ಲಗೇಜ್ ತೆಗೆದುಕೊಂಡು ಹೋದರೆ ಬೀಳುತ್ತೆ ದಂಡ!
ಆದಾಗ್ಯೂ ಪ್ರಸ್ತಾವಿತ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ವಿಪಕ್ಷಗಳು, ಕೇಂದ್ರ ಸರ್ಕಾರವು ತನ್ನ ಮುಖ್ಯಮಂತ್ರಿಗಳನ್ನು ಕೇಂದ್ರ ತನಿಖಾ ಸಂಸ್ಥೆಗಳಿಂದ ಬಂಧಿಸುವ ಮೂಲಕ ಮತ್ತು ಅವರ ಬಂಧನದ ನಂತರ ಹುದ್ದೆಯಿಂದ ತೆಗೆದುಹಾಕುವ ಮೂಲಕ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸಲು ಕಾನೂನುಗಳನ್ನು ತರಲು ಉದ್ದೇಶಿಸಿದೆ ಎಂದು ಹೇಳಿವೆ.
ಈ ಮಾತನಾಡಿದ ವಿರೋಧ ಪಕ್ಷದ ಸಂಸದರೊಬ್ಬರು ಮಸೂದೆಯನ್ನು ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಸೂದೆ ಮಂಡಿಸಿದಾಗ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. "ನಾವು ಮಸೂದೆಯನ್ನು ಪರಿಚಯಿಸಲು ಬಿಡುವುದಿಲ್ಲ. ನಾವು ಮೇಜು ಮುರಿದು ಮಸೂದೆಯ ಪ್ರತಿಯನ್ನು ಹರಿದು ಹಾಕುತ್ತೇವೆ" ಎಂದು ಅಧಿವೇಶನಕ್ಕೂ ಮುನ್ನ ಅವರು ಎಚ್ಚರಿಸಿದ್ದಾರೆ.
ಈತನ್ಮಧ್ಯೆ, ಬಿಜೆಪಿ ತನ್ನ ಸಂಸದರಿಗೆ ಸದನದಲ್ಲಿ ಹಾಜರಿರುವಂತೆ ಮೂರು ಸಾಲಿನ ವಿಪ್ ಜಾರಿ ಮಾಡಿದೆ. ಈ 3 ಮೂರು ಭ್ರಷ್ಟಾಚಾರ ವಿರೋಧಿ ಕಾನೂನುಗಳ ಪ್ರಕಾರ, ಪ್ರಧಾನಿ, ಮುಖ್ಯಮಂತ್ರಿ ಅಥವಾ ಸಚಿವರನ್ನು 5 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಶಿಕ್ಷೆ ವಿಧಿಸಿ 30 ದಿನಗಳ ಕಾಲ ಬಂಧನದಲ್ಲಿರಿಸಿದರೆ, ಅವರನ್ನು 31ನೇ ದಿನದಂದು ಸ್ವಯಂಚಾಲಿತವಾಗಿ ಅಧಿಕಾರದಿಂದ ತೆಗೆದುಹಾಕಲಾಗುತ್ತದೆ.
ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಅವರಂತಹ ನಾಯಕರು ಜೈಲಿನಲ್ಲಿದ್ದರೂ ಅಧಿಕಾರದಲ್ಲಿ ಮುಂದುವರಿದ ವಿವಾದಗಳ ಹಿನ್ನೆಲೆಯಲ್ಲಿ ಸರ್ಕಾರದ ಈ ಕ್ರಮ ಕೈಗೊಂಡಿದೆ.