ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Putin India Visit: ರಾಜ್‌ಘಾಟ್‌ಗೆ ಪುಟಿನ್‌ ಭೇಟಿ; ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಕೆ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಭಾರತಕ್ಕೆ ಬಂದಿಳಿದಿದ್ದಾರೆ. ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಪುಟಿನ್ ಅವರನ್ನು ಸ್ವತಃ ಪ್ರಧಾನಿ ಮೋದಿಯೇ ಸ್ವಾಗತಿಸಿದರು. ಇಂದು ಪುಟಿನ್‌ ಅವರು ಮಹಾತ್ಮ ಗಾಂಧಿ ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು. ರಾಜ್‌ಘಾಟ್‌ನಲ್ಲಿನ ಈ ಸಮಾರಂಭವನ್ನು ಪ್ರತಿ ರಾಷ್ಟ್ರ ನಾಯಕರ ಭೇಟಿಯ ಪ್ರಮುಖ ಭಾಗವೆಂದು ಪರಿಗಣಿಸಲಾಗುತ್ತದೆ.

ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ

ಪುಟಿನ್‌ - ಮೋದಿ -

Vishakha Bhat
Vishakha Bhat Dec 5, 2025 12:56 PM

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಭಾರತಕ್ಕೆ (Putin India Visit) ಬಂದಿಳಿದಿದ್ದಾರೆ. ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಪುಟಿನ್ ಅವರನ್ನು ಸ್ವತಃ ಪ್ರಧಾನಿ ಮೋದಿಯೇ (Narendra Modi) ಸ್ವಾಗತಿಸಿದರು. ಪುಟಿನ್ ಗೌರವಾರ್ಥ ಪ್ರಧಾನಿ ಮೋದಿ ಆಯೋಜಿಸಿದ್ದ ಖಾಸಗಿ ಭೋಜನಕೂಟದಲ್ಲಿ ಭಾಗವಹಿಸಲು ಇಬ್ಬರೂ ನಾಯಕರು ಒಂದೇ ಕಾರಿನಲ್ಲಿ ವಿಮಾನ ನಿಲ್ದಾಣದಿಂದ 7 LKM ಗೆ ತೆರಳಿದರು. ಭೋಜನಕೂಟದಲ್ಲಿ ನಡೆದ ಸಂಭಾಷಣೆಯು ಶುಕ್ರವಾರ ನಡೆಯಲಿರುವ 23 ನೇ ಭಾರತ-ರಷ್ಯಾ ಶೃಂಗಸಭೆಯ ಮಾತುಕತೆಗೆ ನಾಂದಿ ಹಾಡುವ ಸಾಧ್ಯತೆಯಿದೆ.

ಬೆಳಿಗ್ಗೆ 11 ಗಂಟೆಗೆ ಪುಟಿನ್‌ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪುಟಿನ್‌ಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ವ್ಲಾಡಿಮಿರ್ ಪುಟಿನ್ ಅವರಿಗೆ ಗೌರವ ರಕ್ಷೆಯನ್ನು ನೀಡಲಾಗಿದ್ದು, ತ್ರಿ-ಸೇನಾ ಪಥಸಂಚಲನವನ್ನು ವೀಕ್ಷಿಸಿದರು. ಭಾರತೀಯ ಸೇನಾ ತುಕಡಿಗಳು ಅಧ್ಯಕ್ಷ ಪುಟಿನ್ ಅವರಿಗೆ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಗೌರವ ವಂದನೆ ನಡೆಸಿದವು. ಇದೇ ವೇಳೆ ಪುಟಿನ್ ಅವರಿಗೆ, ಯಾವುದೇ ರಾಷ್ಟ್ರದ ಮುಖ್ಯಸ್ಥರಿಗೆ ನೀಡುವ ಅತ್ಯುನ್ನತ ರಾಜ್ಯ ಗೌರವವಾದ ಗಾರ್ಡ್ ಆಫ್ ಹಾನರ್ ಅನ್ನು ನೀಡಲಾಯಿತು.

ಹ್ಯಾಂಡ್‌ ಶೇಕ್‌, ಬೆಚ್ಚನೆಯ ಅಪ್ಪುಗೆ, ಒಂದೇ ಕಾರಿನಲ್ಲಿ ಪಯಣ; ಗೆಳೆಯ ವ್ಲಾಡಿಮಿರ್ ಪುಟಿನ್‌ನನ್ನು ಆತ್ಮೀಯವಾಗಿ ಸ್ವಾಗತಿಸಿದ ಮೋದಿ

ನಂತರ ಅಲ್ಲಿಂದ ರಾಜ್‌ಘಾಟ್‌ಗೆ ತೆರಳಿದರು. ಪುಟಿನ್‌ ಅವರು ಮಹಾತ್ಮ ಗಾಂಧಿ ಸ್ಮಾರಕಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು. ರಾಜ್‌ಘಾಟ್‌ನಲ್ಲಿನ ಈ ಸಮಾರಂಭವನ್ನು ಪ್ರತಿ ರಾಷ್ಟ್ರ ನಾಯಕರ ಭೇಟಿಯ ಪ್ರಮುಖ ಭಾಗವೆಂದು ಪರಿಗಣಿಸಲಾಗುತ್ತದೆ. ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ನಾನು ಕೃತಜ್ಞನಾಗಿದ್ದೇನೆ. ಉಕ್ರೇನ್‌ನೊಂದಿಗೆ ಶಾಂತಿಯುತ ಇತ್ಯರ್ಥಕ್ಕಾಗಿ ರಷ್ಯಾ ಕೆಲಸ ಮಾಡುತ್ತಿದೆ. ರಷ್ಯಾ ಮತ್ತು ಭಾರತದ ನಡುವಿನ ಸಂಬಂಧವು ನಂಬಿಕೆಯನ್ನು ಆಧರಿಸಿದೆ. ನಾವು ಶಾಂತಿಯ ಹಾದಿಯಲ್ಲಿ ಸಾಗಿದರೆ ಮಾತ್ರ ಜಗತ್ತಿಗೆ ಪ್ರಯೋಜನವಾಗುತ್ತದೆ ಎಂದು ಪುಟಿನ್‌ ತಮ್ಮ ಮಾತುಕತೆ ವೇಳೆ ಹೇಳಿದ್ದಾರೆ.

ಉಕ್ರೇನ್ ಬಿಕ್ಕಟ್ಟು ಪ್ರಾರಂಭವಾದಾಗಿನಿಂದ, ನಾವು ನಿರಂತರ ಚರ್ಚೆಯಲ್ಲಿದ್ದೇವೆ. ಕಾಲಕಾಲಕ್ಕೆ, ನೀವು ಕೂಡ ನಿಜವಾದ ಸ್ನೇಹಿತರಾಗಿ ಎಲ್ಲದರ ಬಗ್ಗೆ ನಮಗೆ ಮಾಹಿತಿ ನೀಡುತ್ತಿದ್ದೀರಿ. ನಂಬಿಕೆ ಒಂದು ದೊಡ್ಡ ಶಕ್ತಿ ಎಂದು ನಾನು ನಂಬುತ್ತೇನೆ, ಮತ್ತು ನಾನು ಈ ವಿಷಯವನ್ನು ನಿಮ್ಮೊಂದಿಗೆ ಹಲವು ಬಾರಿ ಚರ್ಚಿಸಿದ್ದೇನೆ ಮತ್ತು ಅದನ್ನು ಪ್ರಪಂಚದ ಮುಂದೆ ಪ್ರಸ್ತುತಪಡಿಸಿದ್ದೇನೆ' ಎಂದು ಪ್ರಧಾನಿ ಮೋದಿ ಪುಟಿನ್ ಅವರಿಗೆ ತಿಳಿಸಿದರು.