ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sanchar Saathi APP: ಸಂಚಾರಿ ಆ್ಯಪ್ ಎಲ್ಲಾ ಮೊಬೈಲ್‌ಗಳಿಗೆ ಕಡ್ಡಾಯವೇ? ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದೇನು?

ದೇಶದಾದ್ಯಂತ ಮಾರಾಟವಾಗುವ ಎಲ್ಲಾ ಮೊಬೈಲ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್‌ಗಳನ್ನು ಕಡ್ಡಾಯವಾಗಿ ಇನ್‌ಸ್ಟಾಲ್‌ ಮಾಡಲು ದೂರಸಂಪರ್ಕ ಇಲಾಖೆ ಹ್ಯಾಂಡ್‌ಸೆಟ್‌ ತಯಾರಕರಿಗೆ ಸೂಚಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಮಹತ್ವದ ಮಾಹಿತಿ ನೀಡಿದ್ದಾರೆ.

ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (ಸಂಗ್ರಹ ಚಿತ್ರ)

ನವದೆಹಲಿ: ದೇಶದಾದ್ಯಂತ ಮಾರಾಟವಾಗುವ ಎಲ್ಲಾ ಮೊಬೈಲ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್‌ಗಳನ್ನು ಕಡ್ಡಾಯವಾಗಿ ಇನ್‌ಸ್ಟಾಲ್‌ ಮಾಡಲು ದೂರಸಂಪರ್ಕ ಇಲಾಖೆ ಹ್ಯಾಂಡ್‌ಸೆಟ್‌ ತಯಾರಕರಿಗೆ ಸೂಚಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಮಹತ್ವದ ಮಾಹಿತಿ ನೀಡಿದ್ದಾರೆ. ಸಂಚಾರ್ ಸಾಥಿ ಅಪ್ಲಿಕೇಶನ್ ಯಾವುದೇ ಸಮಯದಲ್ಲಿ ಡಿಲಿಟ್‌ ಮಾಡಬಹದು ಮತ್ತು ಬಳಕೆದಾರರು ಅದನ್ನು ಸಕ್ರಿಯಗೊಳಿಸಲು ಆಯ್ಕೆ ಮಾಡಿದ ನಂತರವೇ ಕಾರ್ಯನಿರ್ವಹಿಸುತ್ತದೆ ಎಂದು ಅವರು ಹೇಳಿದರು.

ಸಾರ್ವಜನಿಕ ಸುರಕ್ಷತೆಗಾಗಿ ಅಪ್ಲಿಕೇಶನ್ ಅನ್ನು ಒಂದು ಸಾಧನವಾಗಿ ಲಭ್ಯವಾಗುವಂತೆ ಮಾಡುವುದಕ್ಕೆ ಸರ್ಕಾರದ ಪಾತ್ರ ಸೀಮಿತವಾಗಿದೆ ಎಂದು ಸಿಂಧಿಯಾ ಹೇಳಿದರು. "ಅದನ್ನು ಅವರ ಸಾಧನಗಳಲ್ಲಿ ಇಟ್ಟುಕೊಳ್ಳುವುದು ಅಥವಾ ಇಲ್ಲದಿರುವುದು ಸಂಪೂರ್ಣವಾಗಿ ಬಳಕೆದಾರರಿಗೆ ಬಿಟ್ಟದ್ದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರವು ಸೈಬರ್ ವಂಚನೆಯನ್ನು ನಿಗ್ರಹಿಸಲು ವಿನ್ಯಾಸಗೊಳಿಸಲಾದ ಸಾಧನಕ್ಕೆ ವ್ಯಾಪಕ ಪ್ರವೇಶವನ್ನು ಖಚಿತಪಡಿಸುತ್ತಿದೆ ಎಂದು ಸಿಂಧಿಯಾ ಹೇಳಿದ್ದಾರೆ.



ಸಂಚಾರ ಸಾಥಿ ಬಳಸಿದರೆ, ಮೊಬೈಲ್‌ ಕಳ್ಳತನವಾದರೆ ಅಥವಾ ಕಳೆದುಹೋದರೆ ಬ್ಲಾಕ್‌ ಮಾಡಬಹುದು. ಅಷ್ಟೇ ಅಲ್ಲದೇ ಈ ಫೋನ್‌ ದೇಶದ ಬೇರೆ ಕಡೆ ಬಳಕೆಯಾಗುತ್ತಿದ್ದರೂ ಕಾನೂನು ಸಂಸ್ಥೆಗಳಿಗೆ ಎಲ್ಲಿ ಈ ಫೋನ್‌ ಸಕ್ರಿಯವಾಗಿದೆ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ. ಸೈಬರ್ ಅಪರಾಧ, ನಕಲಿ ಐಇಎಂಐ ಸಂಖ್ಯೆ ಬಳಸಿ ನಡೆಸುವ ಕೃತ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈ ಆ್ಯಪ್ ಇನ್‌ಸ್ಟಾಲ್‌ ಮಾಡಲು ಕಡ್ಡಾಯ ಮಾಡಿತ್ತು.

ಅಂಗನವಾಡಿ ನೌಕರರ ಬೇಡಿಕೆಗಳಿಗೆ ಒತ್ತಾಯಿಸಿ, ಡಿ. ೧ ರಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನೆ ಮುಂದೆ ಪ್ರತಿಭಟನೆ

ಸಂಚಾರ್ ಸಾಥಿ ಪೋರ್ಟಲ್ ಅನ್ನು 20 ಕೋಟಿಗೂ ಹೆಚ್ಚು ಬಾರಿ ಡೌನ್‌ಲೋಡ್ ಮಾಡಲಾಗಿದೆ ಮತ್ತು ಅಪ್ಲಿಕೇಶನ್ ಸ್ವತಃ 1.5 ಕೋಟಿಗೂ ಹೆಚ್ಚು ಬಾರಿ ಡೌನ್‌ಲೋಡ್ ಆಗಿದೆ ಎಂದು ಸಿಂಧಿಯಾ ಹೇಳಿದ್ದಾರೆ. ಸುಮಾರು 1.75 ಕೋಟಿ ವಂಚನೆಯ ಮೊಬೈಲ್ ಸಂಪರ್ಕಗಳ ಸಂಪರ್ಕ ಕಡಿತಗೊಳಿಸುವುದು ಮತ್ತು ಸುಮಾರು 20 ಲಕ್ಷ ಕದ್ದ ಫೋನ್‌ಗಳನ್ನು ಪತ್ತೆಹಚ್ಚುವುದು ಸೇರಿದಂತೆ ಅದರ ಪ್ರಾಯೋಗಿಕ ಪರಿಣಾಮವನ್ನು ಅವರು ಬಹಿರಂಗಪಡಿಸಿದ್ದಾರೆ. ಏತನ್ಮಧ್ಯೆ, ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು ಸಂಚಾರ್ ಸಾಥಿ ಅಪ್ಲಿಕೇಶನ್ ಬಗ್ಗೆ "ನಕಲಿ ಸುದ್ದಿ"ಗಳಿಗೆ ಜನರು ಬಲಿಯಾಗಬಾರದು ಎಂದು ಒತ್ತಾಯಿಸಿದ್ದಾರೆ.

ಸಂಚಾರ್ ಸಾಥಿ ಬಳಕೆದಾರರಿಗೆ ಸ್ಪ್ಯಾಮ್ ವರದಿ ಮಾಡಲು, ಕದ್ದ ಫೋನ್‌ಗಳನ್ನು ನಿರ್ಬಂಧಿಸಲು, ವಂಚನೆಯ ಕರೆಗಳನ್ನು ಪತ್ತೆಹಚ್ಚಲು ಮತ್ತು ಅವರ ಹೆಸರಿನಲ್ಲಿ ನೀಡಲಾದ ಸಿಮ್‌ಗಳನ್ನು ಪರಿಶೀಲಿಸಲು ಸಹಾಯ ಮಾಡುತ್ತದೆ ಎಂದು ಮಾಳವಿಯಾ ಹೇಳಿದ್ದಾರೆ.