ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Supreme Court: ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗರ್ಹಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ

ಭಾರತಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳು ಕಳೆದಿವೆ. ಕೇವಲ ಕವಿತೆ ವಾಚನ ಅಥವಾ ಹಾಸ್ಯ ಪ್ರದರ್ಶನವನ್ನು ಗಣರಾಜ್ಯವನ್ನೇ ಅಲುಗಾಡಿಸುವ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗರ್ಹಿ ವಿರುದ್ಧ ಗುಜರಾತ್ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಹೇಳಿಕೆ ನೀಡಿದೆ.

ಇಮ್ರಾನ್ ಪ್ರತಾಪ್‌ಗರ್ಹಿ ಮೇಲಿದ್ದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ

Profile Vishakha Bhat Mar 29, 2025 11:53 AM

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳು ಕಳೆದಿವೆ. ಕೇವಲ ಕವಿತೆ ವಾಚನ ಅಥವಾ ಹಾಸ್ಯ ಪ್ರದರ್ಶನವನ್ನು ಗಣರಾಜ್ಯವನ್ನೇ ಅಲುಗಾಡಿಸುವ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. 'ಏ ಖೂಂ ಕೆ ಪ್ಯಾಸೆ ಬಾತ್ ಸುನೋ' ಎಂಬ ಕವಿತೆಯನ್ನು ಪೋಸ್ಟ್‌ ಮಾಡಿದ್ದ ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್‌ಗರ್ಹಿ ವಿರುದ್ಧ ಗುಜರಾತ್ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಹೇಳಿಕೆ ನೀಡಿದೆ.

ಇಮ್ರಾನ್ ಪ್ರತಾಪ್‌ಗರ್ಹಿ ಯಾವುದೇ ಅಪರಾಧ ಮಾಡಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ಇಂತಹ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸುವ ಮೊದಲು ಪೊಲೀಸರು ಸಾಹಿತ್ಯ ಹಾಗೂ ಪದಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತೀರ್ಪು ನೀಡಿದೆ. ಈ ವರ್ಷದ ಜನವರಿಯಲ್ಲಿ ಗುಜರಾತ್ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ನಂತರ, ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಸಂಸದರು ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು.

ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು, ಎಫ್‌ಐಆರ್ ಅನ್ನು ರದ್ದುಗೊಳಿಸುವಾಗ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ಒತ್ತಿ ಹೇಳಿದರು. ಭಾರತದ ನಾಗರಿಕರಿಗೆ ನೀಡಲಾದ ಪ್ರಮುಖ ಮೂಲಭೂತ ಹಕ್ಕುಗಳಲ್ಲಿ ಒಂದು ಸಂವಿಧಾನದ 19 (1) (ಎ) ವಿಧಿಯ ಅಡಿಯಲ್ಲಿದೆ, ಅದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಎಂದು ನ್ಯಾಯಾಲಯ ಹೇಳಿದೆ. ಸಾಹಿತ್ಯ, ಕಾವ್ಯ, ನಾಟಕ, ವಿಡಂಬನೆ ಮತ್ತು ಕಲೆ ಮಾನವರ ಜೀವನವನ್ನು ಹೆಚ್ಚು ಅರ್ಥಪೂರ್ಣವಾಗಿಸುವ ಪ್ರಜಾಪ್ರಭುತ್ವ ಸಮಾಜದ ಅತ್ಯಗತ್ಯ ಅಂಶಗಳಾಗಿವೆ ಮತ್ತು ನಾಗರಿಕರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕನ್ನು, ಅವು ಜನಪ್ರಿಯವಲ್ಲದಿದ್ದರೂ ಅಥವಾ ಅನೇಕರಿಂದ ಇಷ್ಟಪಡದಿದ್ದರೂ ಸಹ, "ಗೌರವಿಸಬೇಕು ಮತ್ತು ರಕ್ಷಿಸಬೇಕು" ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಈ ಸುದ್ದಿಯನ್ನೂ ಓದಿ: Justice Yashwant Varma: 15 ಕೋಟಿ ರೂ. ಪತ್ತೆ ಪ್ರಕರಣ; ಅಲಹಾಬಾದ್‌ ಹೈಕೋರ್ಟ್‌ಗೆ ಯಶವಂತ್ ವರ್ಮಾ ವರ್ಗಾವಣೆಗೆ ಸುಪ್ರೀಂ ಕೋರ್ಟ್‌ ಶಿಫಾರಸು

ಏನಿದು ಪ್ರಕರಣ?

ವಿಡಿಯೋ ಒಂದರಲ್ಲಿ ಏ ಖೂನ್ ಕೆ ಪ್ಯಾಸೆ ಬಾತ್ ಸುನೋ ಶೀರ್ಷಿಕೆಯ ಕವಿತೆಯನ್ನು ಸಾಮೂಹಿಕ ವಿವಾಹ ವೀಡಿಯೊದ ಹಿನ್ನೆಲೆಯಲ್ಲಿ ತೋರಿಸಲಾಗಿದೆ. ಇದನ್ನು ಪ್ರತಾಪ್‌ಗರ್ಹಿ ಅವರು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಿದ್ದರು. ಜನವರಿ 17 ರಂದು ಗುಜರಾತ್ ಹೈಕೋರ್ಟ್, ಕವಿತೆಯು ಅಶಾಂತಿಯನ್ನು ಪ್ರಚೋದಿಸಬಹುದು ಎಂಬ ಆಧಾರದ ಮೇಲೆ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡು ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿತ್ತು. ಆದಾಗ್ಯೂ, ಹೈಕೋರ್ಟ್ ಆದೇಶದ ವಿರುದ್ಧ ಪ್ರತಾಪಗಢಿ ಸಲ್ಲಿಸಿದ ಮೇಲ್ಮನವಿಯನ್ನು ಅನುಮತಿಸಿದ ಸುಪ್ರೀಂ ಕೋರ್ಟ್, ಪ್ರತಾಪ ವಿರುದ್ಧ ದಾಖಲಾದ ಎಫ್‌ಐಆರ್‌ ರದ್ದು ಮಾಡಲು ಆದೇಶಿಸಿದೆ.