ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೇಘಾಲಯ ಹನಿಮೂನ್‌ ಮರ್ಡರ್‌ ಕೇಸ್‌; ಸೋನಂ ರಘುವಂಶಿ ಜಾಮೀನು ರದ್ಧತಿಗೆ ಸುಪ್ರೀಂ ನಿರಾಕರಣೆ

Honey Moon Murder Case: ಹನಿಮೂನ್‌ಗೆ ತೆರಳಿದ್ದಾಗ ಪತಿಯನ್ನು ಬೆಟ್ಟದಿಂದ ತಳ್ಳಿ ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕಿ ಸೋನಮ್ ರಘುವಂಶಿಗೆ ನೀಡಿದ್ದ ಜಾಮೀನು ರದ್ದಿಗೆ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಮೇಘಾಲಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಸಂಗ್ರಹ ಚಿತ್ರ

ನವದೆಹಲಿ: ಹನಿಮೂನ್‌ಗೆ ತೆರಳಿದ್ದಾಗ ಪತಿಯನ್ನು ಬೆಟ್ಟದಿಂದ ತಳ್ಳಿ ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ (Honey Moon Murder Case) ಹಂತಕಿ ಸೋನಮ್ ರಘುವಂಶಿಗೆ (Sonam Raghuvanshi) ನೀಡಿದ್ದ ಜಾಮೀನು ರದ್ದಿಗೆ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಮೇಘಾಲಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಶೀಲ್ ನಾಗು ಅವರಿದ್ದ ಪೀಠವು ಹೈಕೋರ್ಟ್‌ನ ತೀರ್ಪಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ಸೋನಂ ಈಗಾಗಲೇ ಒಂದಿಷ್ಟು ಸಮಯ ಜೈಲು ಶಿಕ್ಷೆ ಅನುಭವಿಸಿರುವುದನ್ನು ಪರಿಗಣಿಸಿದ ಕೋರ್ಟ್, ಅಪರಾಧ ಎಷ್ಟೇ ಘೋರವಾಗಿದ್ದರೂ, ಜಾಮೀನು ನೀಡುವುದು ನಿಯಮ, ಜೈಲಿಗೆ ಕಳುಹಿಸುವುದು ಕೊನೆಯ ಆಯ್ಕೆ ಎಂಬ ತತ್ವವನ್ನು ಪಾಲಿಸಬೇಕಾಗುತ್ತದೆ. ಇದೇ ವೇಳೆ ಹೈಕೋರ್ಟ್ ಈ ಪ್ರಕರಣವನ್ನು ನಿರ್ವಹಿಸಿದ ರೀತಿಯ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮುಂದಿನ ವಿಚಾರಣೆ ಜು.9ಕ್ಕೆ ನಿಗದಿಪಡಿಸಿದೆ.

ಮೇಘಾಲಯ ಸರ್ಕಾರ ಸಲ್ಲಿಸಿದ್ದ ಈ ಅರ್ಜಿ ಪರವಾಗಿ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಹಾಜರಿದ್ದು, ಸೋನಮ್​ ವಿರುದ್ಧದ ಆರೋಪವು ಗಂಭೀರವಾಗಿದೆ. ಆರೋಪಿಯನ್ನು ತಾಂತ್ರಿಕ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಈ ಹಿನ್ನೆಲೆ ಹೈಕೋರ್ಟ್​ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ, ಪೀಠ ಇದನ್ನು ನಿರಾಕರಿಸಿದೆ. ಈ ಪ್ರಕರಣದ ವಿಚಾರಣೆ ಶಿಲ್ಲಾಂಗ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸೋನಮ್ ಅವರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆದು, ಸೋನಮ್ ಅವರ ವಕೀಲರು ಮಂಡಿಸಿದ ವಾದಗಳನ್ನು ಪುರಸ್ಕರಿಸಿದ್ದ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

Honeymoon Murder Case: ತೆರೆ ಮೇಲೆ ಬರುತ್ತಾ ಮೇಘಾಲಯ ಹನಿಮೂನ್ ಕೊಲೆ ಪ್ರಕರಣ? ರಾಜಾ ರಘುವಂಶಿ ಕುಟುಂಬ ಹೇಳೋದೇನು?

ಏನಿದು ಘಟನೆ?

ಕಳೆದ ವರ್ಷ ಜೂನ್‌ನಲ್ಲಿ ಮಧ್ಯಪ್ರದೇಶದಿಂದ ಹನಿಮೂನ್‌ಗೆಂದು ತೆರಳಿದ್ದ ಸೋನಮ್‌ ಹಾಗೂ ರಘುವಂಶಿ ಮೇಘಾಲಯದ ಸೊಹ್ರಾ ಪ್ರದೇಶದಲ್ಲಿ ನಾಪತ್ತೆಯಾಗಿದ್ದರು. ಜೂನ್ 2 ರಂದು ಆಳವಾದ ಕಂದಕದಿಂದ ರಾಜಾ ಅವರ ಮೃತದೇಹ ಪತ್ತೆಯಾಗಿತ್ತು. ಗಂಡನನ್ನು ಕೊಲ್ಲಲು ಸೋನಮ್‌ ತನ್ನ ಪ್ರಿಯಕರ ಹಾಗೂ ಆತನ ಗೆಳೆಯರಿಗೆ ಸುಪಾರಿ ಕೊಟ್ಟಿರುವುದು ತನಿಖೆಯಲ್ಲಿ ತಿಳಿದು ಬಂದಿತ್ತು.

Vishakha Bhat Heggar

View all posts by this author