ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಕಾಲುವೆಗೆ ಬಿದ್ದ ಶಾಲಾ ಬಸ್: ಮಕ್ಕಳು ಅಪಾಯದಿಂದ ಪಾರು

ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ಬಸ್ ಕಾಲುವೆಗೆ ಬಿದ್ದ ಘಟನೆ ಪಂಜಾಬ್‌ನ ಫಿರೋಜ್‌ಪುರದಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇದರ ಆಘಾತಕಾರಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿವೆ.

ಪಂಜಾಬ್‌ನ ಫಿರೋಜ್‌ಪುರದಲ್ಲಿ ಕಾಲುವೆಗೆ ಬಿದ್ದ ಶಾಲಾ ಬಸ್

ಚಂಡೀಗಢ: ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ಬಸ್ ಕಾಲುವೆಗೆ ಬಿದ್ದ ಘಟನೆ ಪಂಜಾಬ್‌ನ ಫಿರೋಜ್‌ಪುರದಲ್ಲಿ ಶನಿವಾರ ನಡೆದಿದೆ (Road Accident). ಅದೃಷ್ಟವಶಾತ್ ಬಸ್ ನಲ್ಲಿದ್ದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಘಟನೆ ಕುರಿತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಎಕ್ಸ್ ನಲ್ಲಿ ಟ್ವಿಟ್ ಮಾಡಿ, ಎಲ್ಲರ ಯೋಗಕ್ಷೇಮ ಮತ್ತು ಸುರಕ್ಷತೆಗಾಗಿ ನಾನು ಸರ್ವಶಕ್ತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಫಿರೋಜ್‌ಪುರದ ಸೆಮ್ ಕಾಲುವೆಯಲ್ಲಿ ಮಕ್ಕಳಿಂದ ತುಂಬಿದ್ದ ಖಾಸಗಿ ಶಾಲಾ ಬಸ್ ಅಪಘಾತಕ್ಕೀಡಾದ ಬಗ್ಗೆ ದುರಂತ ಸುದ್ದಿ ತಿಳಿದು ಬಂದಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತುರ್ತು ಕ್ರಮಗಳನ್ನು ಕೈಗೊಂಡಿದ್ದಾರೆ. ಘಟನೆಯ ಕಾರಣವನ್ನು ತನಿಖೆ ನಡೆಸುವುದಾಗಿ ಮೂಲಗಳು ತಿಳಿಸಿವೆ

ಇದನ್ನೂ ಓದಿ: Road Accident: ಕಲಬುರಗಿಯಲ್ಲಿ ಘೋರ ಅಪಘಾತ, ಲಾರಿಗೆ ಮ್ಯಾಕ್ಸಿಕ್ಯಾಬ್‌ ಡಿಕ್ಕಿಯಾಗಿ ಐವರು ಸಾವು

ಘಟನೆ ಕುರಿತು ಮಾಹಿತಿ ನೀಡಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೊಲೀಸರು, ಫಿರೋಜ್‌ಪುರ ಬಳಿಯ ಹಸ್ತಿ ವಾಲಾ ಗ್ರಾಮದ ಬಳಿ 30 ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಾಲಾ ಬಸ್ ಸೇತುವೆ ಮೇಲಿಂದ ಒಣಗಿದ ಕಾಲುವೆಗೆ ಉರುಳಿ ಬಿದ್ದಿದೆ. ವಿದ್ಯಾರ್ಥಿಗಳು ಮತ್ತು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.



ಚಾಲಕನ ನಿಯಂತ್ರಣ ತಪ್ಪಿ ಬಸ್ ಸೇತುವೆಯ ಬೇಲಿಯನ್ನು ದಾಟಿ ಸೆಮ್ ಕಾಲುವೆಗೆ ಬಿದ್ದಿದೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯ ನಿವಾಸಿಗಳು ಮತ್ತು ದಾರಿಹೋಕರು ಅವರ ರಕ್ಷಣೆಗೆ ಧಾವಿಸಿದರು. ಬಸ್‌ನ ಕಿಟಕಿ ಗಾಜುಗಳನ್ನು ಒಡೆದು ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು ಎಂದು ಅವರು ಹೇಳಿದ್ದಾರೆ.