Madhabi Buch: ಮಾಧಬಿ ಪುರಿ ಬುಚ್ ಕೇಸ್; ಸಿಬಿಐ ಕೋರ್ಟ್ ಆದೇಶ ಪ್ರಶ್ನಿಸಿ ಸೆಬಿ ಅರ್ಜಿ
ವಂಚನೆ ಪ್ರಕರಣದಲ್ಲಿ ಕಾನೂನು ಸಂಕಷ್ಟ ಎದುರಿಸುತ್ತಿರುವ ಸೆಬಿ ಮಾಜಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಮತ್ತು ಇತರ ಅಧಿಕಾರಿಗಳ ವಿರುದ್ಧ ವಿಶೇಷ ಭ್ರಷ್ಟಾಚಾರ ನಿಗ್ರಹ ಕೋರ್ಟ್ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿದೆ. ಇದೀಗ ಈ ಆದೇಶವನ್ನು ಪ್ರಶ್ನಿಸಿ ಸೆಬಿ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.


ಮುಂಬೈ: ಷೇರು ಮಾರುಕಟ್ಟೆ ವಂಚನೆ ಮತ್ತು ನಿಯಂತ್ರಕ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷೆ ಮಾಧಬಿ ಪುರಿ ಬುಚ್(Madhabi Buch) ಮತ್ತು ಇತರ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಭ್ರಷ್ಟಾಚಾರ ನಿಗ್ರಹ (ACB)ಕೋರ್ಟ್ ನಿರ್ದೇಶನ ಪ್ರಶ್ನಿಸಿ ಅರ್ಜಿ ಸಲ್ಲಿಸಲು ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ (SEBI)ನಿರ್ಧರಿಸಿದೆ. ಮಾಧಾಬಿ ಪುರಿ ಬುಚ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿದ ವಿಶೇಷ ಭ್ರಷ್ಟಾಚಾರ ನಿಗ್ರಹ (ACB) ನ್ಯಾಯಾಲಯವನ್ನು ಪ್ರಶ್ನಿಸಲು ಶೀಘ್ರದಲ್ಲೇ ಕಾನೂನು ಕ್ರಮಗಳನ್ನು ಪ್ರಾರಂಭಿಸುವುದಾಗಿ ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ (SEBI) ಭಾನುವಾರ ತಿಳಿಸಿದೆ.
ಸೆಬಿ, ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಎಸಿಬಿ ಕೋರ್ಟ್ ಆದೇಶವನ್ನು ಪ್ರಶ್ನಿಸಲು ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಸಪನ್ ಶ್ರೀವಾಸ್ತವ ಸಲ್ಲಿಸಿದ್ದ ವಿವಿಧ ಅರ್ಜಿಯ ಮೇರೆಗೆ ವಿಚಾರಣೆ ನಡೆಸಿದ ಎಸಿಬಿ ನ್ಯಾಯಾಲಯವು, ಬುಚ್, ಪೂರ್ಣಾವಧಿ ಸದಸ್ಯರಾದ ಅಶ್ವನಿ ಭಾಟಿಯಾ, ಅನಂತ್ ನಾರಾಯಣ್ ಮತ್ತು ಕಮಲೇಶ್ ಚಂದ್ರ ವರ್ಷ್ನಿ, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್ಇ) ಸಿಇಒ ಸುಂದರರಾಮನ್ ರಾಮಮೂರ್ತಿ ಮತ್ತು ಮಾಜಿ ಅಧ್ಯಕ್ಷ ಮತ್ತು ಸಾರ್ವಜನಿಕ ಹಿತಾಸಕ್ತಿ ನಿರ್ದೇಶಕ ಪ್ರಮೋದ್ ಅಗರ್ವಾಲ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೋರ್ಟ್ ನಿನ್ನೆ ನಿರ್ದೇಶನ ನೀಡಿತ್ತು.
ಈ ಸುದ್ದಿಯನ್ನೂ ಓದಿ: SEBI: SEBI ಮುಖ್ಯಸ್ಥರಾಗಿ ತುಹಿನ್ ಕಾಂತಾ ಪಾಂಡೆ ಆಯ್ಕೆ; ಯಾರಿವರು? ಹಿನ್ನಲೆಯೇನು?
ಭಾರತದ ಮೊದಲ ಮಹಿಳಾ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್, ಫೆಬ್ರವರಿ 28 ರಂದು ಯುಎಸ್ ಮೂಲದ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್‌ನಿಂದ ಆಗಸ್ಟ್ 2024 ರಲ್ಲಿ ಅವರ ಮೇಲೆ ಹಿತಾಸಕ್ತಿ ಸಂಘರ್ಷದ ಆರೋಪ ಹೊರಿಸಿದ ನಂತರ ಅವರು ರಾಜೀನಾಮೆ ನೀಡಬೇಕಾದ ಒತ್ತಡಕ್ಕೆ ಒಳಗಾಗಿದ್ದರು. ಬುಚ್ ಮತ್ತು ಅವರ ಪತಿ ಧವಲ್ ಬುಚ್ ವಿದೇಶಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಹಿಂಡೆನ್‌ಬರ್ಗ್ ಆರೋಪಿಸಿತ್ತು.