Narendra Modi: ಆಪರೇಷನ್ ಸಿಂದೂರ್‌ಗೆ ಅಪಮಾನ ಮಾಡಿ ವಿಪಕ್ಷಗಳು ದೊಡ್ಡ ತಪ್ಪು ಮಾಡಿವೆ; ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಲು ಮೇ ತಿಂಗಳಲ್ಲಿ ಪ್ರಾರಂಭಿಸಲಾದ ಆಪರೇಷನ್ ಸಿಂದೂರ್ ಬಗ್ಗೆ ಚರ್ಚೆ ಕೇಳುವ ಮೂಲಕ ವಿರೋಧ ಪಕ್ಷವು "ತಪ್ಪು ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ.


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಲು ಮೇ ತಿಂಗಳಲ್ಲಿ ಪ್ರಾರಂಭಿಸಲಾದ ಆಪರೇಷನ್ ಸಿಂದೂರ್ ಬಗ್ಗೆ ಚರ್ಚೆ ಕೇಳುವ ಮೂಲಕ ವಿರೋಧ ಪಕ್ಷವು "ತಪ್ಪು ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ವಿಪಕ್ಷಗಳ ಮೇಲೆ ಮೋದಿ ಕಿಡಿ ಕಾರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ , ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಳೆದ ವರ್ಷ ಜೂನ್‌ನಲ್ಲಿ ಸರ್ಕಾರ ರಚನೆಯಾದ ನಂತರ ಸಂಸತ್ತಿನ ಅಧಿವೇಶನಗಳಲ್ಲಿ ಇದು ಅವರ ಎರಡನೇ ಸಭೆಯಾಗಿದೆ. ಮೇ 7 ರಿಂದ ನಡೆಸಿದ್ದ ಆಪರೇಷನ್ ಸಿಂದೂರದ ಯಶಸ್ಸಿಗಾಗಿ ಸಂಸದರು ಪ್ರಧಾನಿಯನ್ನು ಶ್ಲಾಘಿಸಿದ್ದಾರೆ. ಮೋದಿಯವರ "ಅಸಾಧಾರಣ ನಾಯಕತ್ವಕ್ಕಾಗಿ ಅವರಿಗೆ ಸನ್ಮಾನ ಮಾಡಲಾಗಿದೆ. ಪ್ರಧಾನಿ ಮೋದಿಯವರ "ಅಚಲವಾದ ಸಂಕಲ್ಪ, ದೂರದೃಷ್ಟಿಯ ರಾಜನೀತಿ ಮತ್ತು ದೃಢನಿಶ್ಚಯದ ಆಜ್ಞೆಯು ರಾಷ್ಟ್ರವನ್ನು ಮುನ್ನಡೆಸಿದೆ ಮಾತ್ರವಲ್ಲದೆ, ಎಲ್ಲಾ ಭಾರತೀಯರ ಹೃದಯಗಳಲ್ಲಿ ಏಕತೆ ಮತ್ತು ಹೆಮ್ಮೆಯ ನವೀಕೃತ ಮನೋಭಾವವನ್ನು ಹೊತ್ತಿಸಿದೆ ಎಂದು ಎನ್‌ಡಿಎ ಸಂಸದರು ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.
#WATCH | Delhi: PM Narendra Modi was welcomed and felicitated with a thunderous applause amid chants of 'Har Har Mahadev', after the success of Operation Sindoor and Operation Mahadev, at the NDA Parliamentary Party Meeting. pic.twitter.com/DO4SjNPOAh
— ANI (@ANI) August 5, 2025
ಈ ಸುದ್ದಿಯನ್ನೂ ಓದಿ: Narendra Modi: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ, 40 ಸಾವಿರ ಜನ ಸೇರಿಸಲು ಬಿಜೆಪಿ ಪ್ಲಾನ್
ಆಗಸ್ಟ್ 7 ರಿಂದ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುವ ಎರಡು ದಿನಗಳ ಮೊದಲು ಎನ್‌ಡಿಎ ಸಭೆ ನಡೆಯಲಿದೆ. ಸ್ಪಷ್ಟ ಬಹುಮತದೊಂದಿಗೆ, NDA ಯ ಅಭ್ಯರ್ಥಿಯು ಅವಿರೋಧವಾಗಿ ಗೆಲ್ಲುವ ನಿರೀಕ್ಷೆಯಿದೆ. ಆದಾಗ್ಯೂ, ಮೈತ್ರಿಕೂಟವು ಆಗಸ್ಟ್ 21 ರೊಳಗೆ ತನ್ನ ಅಭ್ಯರ್ಥಿಯನ್ನು ಘೋಷಿಸಬೇಕು. ನಾಮಪತ್ರ ಸಲ್ಲಿಸುವ ಕೊನೆಯ ದಿನ ಮತ್ತು ಮಳೆಗಾಲದ ಅಧಿವೇಶನದ ಕೊನೆಯ ದಿನವಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಕೆಲವು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಉಪರಾಷ್ಟ್ರಪತಿ ಚುನಾವಣೆಗೆ ಮಿತ್ರಪಕ್ಷಗಳೊಂದಿಗೆ ಸಮನ್ವಯ ಸಾಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.