SIR ವಿವಾದ: ಸುಪ್ರೀಂ ಕೋರ್ಟ್ಗೆ 48 ಪ್ರಶ್ನೆ ಸಲ್ಲಿಸಿದ ವಿಪಕ್ಷಗಳ ಇಂಡಿಯಾ ಒಕ್ಕೂಟ; ಜ್ಞಾನೇಶ್ ಕುಮಾರ್ ಉತ್ತರಕ್ಕೆ ಪಟ್ಟು
INDIA Bloc: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪ್ರಶ್ನಿಸಿ ವಿಪಕ್ಷಗಳ 'ಇಂಡಿಯಾ' ಒಕ್ಕೂಟವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಂದ ಉತ್ತರ ಬಯಸಿ 48 ಪ್ರಶ್ನೆಗಳ ಪಟ್ಟಿಯನ್ನು ಸಲ್ಲಿಸಿದೆ. ಚುನಾವಣಾ ಪ್ರಕ್ರಿಯೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ನಡೆಯುತ್ತಿದೆ ಎಂದು ಭಾರತೀಯ ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
SIR ವಿವಾದ ಸುಪ್ರೀಂ ಕೋರ್ಟ್ಗೆ 48 ಪ್ರಶ್ನೆ ಸಲ್ಲಿಸಿದ ಇಂಡಿಯಾ ಒಕ್ಕೂಟ -
ನವದೆಹಲಿ, ನ. 16: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವು ಭಾರತೀಯ ಚುನಾವಣಾ ಆಯೋಗದ (ECI) ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ನೇರವಾಗಿ ವಿಚಾರಣೆಗೆ ಒಳಪಡಿಸಲು ಮತ್ತು ಪ್ರಶ್ನಿಸಲು ಅನುಮತಿ ಕೋರಿರುವ ವಿಪಕ್ಷ ನಾಯಕರು, ಸುಪ್ರೀಂ ಕೋರ್ಟ್ ಮುಂದೆ 48 ಪ್ರಶ್ನೆಗಳ ಸುದೀರ್ಘ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಚುನಾವಣಾ ಆಯೋಗವು ಈ ಹಿಂದೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ಮತಗಳ್ಳತನ ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಎತ್ತಲಾಗಿದ್ದ ಒಂದೇ ಒಂದು ಪ್ರಶ್ನೆಗೂ ಸಮರ್ಪಕ ಉತ್ತರ ನೀಡಿಲ್ಲ ಎಂದು ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ನಾಯಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಈ ಅರ್ಜಿಯನ್ನು ಸಲ್ಲಿಸಲಾಗಿದ್ದು, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯ ಕುರಿತು ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಇಂಡಿಯಾ ಒಕ್ಕೂಟ ಕೇಳಿದ 48 ಪ್ರಶ್ನೆಗಳು:
'वोट चोरी' पर लगातार उठ रहे सवालों का चुनाव आयोग ने सुप्रीम कोर्ट में दाखिल हलफनामे में कोई जवाब नहीं दिया है। ऐसे में अब INDIA गठबंधन ने सुप्रीम कोर्ट से CEC के साथ-साथ अन्य दो चुनाव आयुक्तों और IT महानिदेशक से सवाल पूछने की अनुमति मांगी है। ये सवाल SIR में हुई उन भारी खामियों के बारे में हैं, जिसके चलते 'वोट चोरी' का रास्ता खोला गया। ECI को 48 सवालों की एक सूची सौंपी गई है, जिनका जवाब उन्हें देना होगा। इनमें से कुछ सवाल ऐसे हैं: 👉 कितने फैसलों पर मुख्य चुनाव आयुक्त की राय से दो अन्य चुनाव आयुक्त असहमत थे? 👉 पूरे देश में SIR कराने का फैसला किसने लिया? 👉 'फॉर्म 6' को बदलने का फैसला किसने लिया? 👉 ERONET और ECINET को सेंट्रलाइज करने और वोटर लिस्ट को केंद्रीय नियंत्रण में रखने का फैसला किसका था? 🔹ये रहे 48 सवाल👇
— Congress (@INCIndia) November 16, 2026
ಏನಿದು 48 ಪ್ರಶ್ನೆಗಳ ವಿವಾದ?
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸುವ ನಿರ್ಧಾರವನ್ನು ಯಾರು ಮತ್ತು ಯಾವ ಆಧಾರದ ಮೇಲೆ ತೆಗೆದುಕೊಂಡರು ಎಂಬುದರ ಕುರಿತು ವಿಪಕ್ಷಗಳು ತೀವ್ರ ಅನುಮಾನ ವ್ಯಕ್ತಪಡಿಸಿವೆ. ಚುನಾವಣಾ ಆಯೋಗದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಪೀಠ ಈ ಹಿಂದೆ ತಿಳಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಮತ್ತು ಇಂಡಿಯಾ ಒಕ್ಕೂಟದ ಅರ್ಜಿದಾರರು ಆಯೋಗದಿಂದ ನೇರ ಉತ್ತರ ಬಯಸಿ ಈ 48 ಪ್ರಶ್ನೆಗಳನ್ನು ಸಿದ್ಧಪಡಿಸಿದ್ದಾರೆ.
ಎಸ್ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ; ರಾಜ್ಯದಲ್ಲಿ 99.32 ಲಕ್ಷ ಮತದಾರರು ಡಿಲೀಟ್!
ದೇಶಾದ್ಯಂತ ವಿಶೇಷ ಮತದಾರರ ಪರಿಷ್ಕರಣೆ ನಡೆಸಲು ಅಂತಿಮ ನಿರ್ಧಾರ ಕೈಗೊಂಡವರು ಯಾರು ಮತ್ತು ಅದಕ್ಕೆ ಅನುಸರಿಸಿದ ಮಾನದಂಡಗಳೇನು ಎಂದು ವಿಪಕ್ಷಗಳು ಪ್ರಶ್ನಿಸಿವೆ. ಹೊಸ ಮತದಾರರ ನೋಂದಣಿಗೆ ಬಳಸುವ ಫಾರ್ಮ್-6ರಲ್ಲಿ ಬದಲಾವಣೆ ಮಾಡಲು ಹಾಗೂ ಆನ್ಲೈನ್ ಫಾರ್ಮ್-6ರಲ್ಲಿ ಹೊಸ ಘೋಷಣೆಯನ್ನು ಸೇರಿಸಲು ಅಧಿಕಾರ ನೀಡಿದವರು ಯಾರು ಎಂದು ವಿವರ ಕೇಳಲಾಗಿದೆ. ಅಲ್ಲದೆ ಮತದಾರರ ಪಟ್ಟಿಯ ನಿರ್ವಹಣಾ ವ್ಯವಸ್ಥೆಗಳಾದ ಇರೋನೆಟ್ ಮತ್ತು ಇಸಿನೆಟ್ಗಳನ್ನು ಕೇಂದ್ರೀಕರಿಸಲು ಹಾಗೂ ಮತದಾರರ ಪಟ್ಟಿಯ ಪ್ರವೇಶವನ್ನು ಕೇಂದ್ರೀಯವಾಗಿ ನಿಯಂತ್ರಿಸಲು ನಿರ್ಧರಿಸಿದವರು ಯಾರು ಎಂದು ಪ್ರಶ್ನಿಸಲಾಗಿದೆ. SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯುಕ್ತರು ಯಾವ ಸಂದರ್ಭಗಳಲ್ಲಿ ತಮ್ಮ ಆಕ್ಷೇಪಣೆ ಅಥವಾ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದಾರೆ ಎಂಬ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸುವಂತೆ ಕೋರಲಾಗಿದೆ.
ಚುನಾವಣಾ ಆಯೋಗವು ಅಕ್ರಮಗಳ ಆರೋಪಗಳನ್ನು ತಳ್ಳಿಹಾಕುತ್ತಾ ಬಂದಿದ್ದರೂ, ಈಗ ವಿಪಕ್ಷಗಳು ಸಲ್ಲಿಸಿರುವ ಈ 48 ಪ್ರಶ್ನೆಗಳಿಗೆ ಉತ್ತರಿಸಲು ಸುಪ್ರೀಂ ಕೋರ್ಟ್ ಆಯೋಗಕ್ಕೆ ಸೂಚನೆ ನೀಡಲಿದೆಯೇ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪ್ರಶ್ನಿಸಲು ಅರ್ಜಿದಾರರಿಗೆ ಅನುಮತಿ ಸಿಗಲಿದೆಯೇ ಎಂಬ ಬಗ್ಗೆ ಕುತೂಹಲ ಮೂಡಿಸಿದೆ.