Terror Attack: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ; ಆರು ಮಂದಿ ಪ್ರವಾಸಿಗರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿರುವ ರೆಸಾರ್ಟ್‌ನಲ್ಲಿ ಮಂಗಳವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ ಆರು ಪ್ರವಾಸಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದ ಬಗ್ಗೆ ಯಾವುದೇ ವರದಿಗಳು ಬಂದಿಲ್ಲ. ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿರುವ ರೆಸಾರ್ಟ್‌ನಲ್ಲಿ ಮಂಗಳವಾರ ಭಯೋತ್ಪಾದಕರು ಗುಂಡಿನ (Terror Attack) ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ ಆರು ಪ್ರವಾಸಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಸದ್ದು ಕೇಳಿದ ನಂತರ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪಹಲ್ಗಾಮ್ ಪ್ರವಾಸಿ ಪಟ್ಟಣದ ಬೈಸರನ್ ಪ್ರದೇಶಕ್ಕೆ ಧಾವಿಸಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಧೃಡಪಡಿಸಿದರು. ಇಲ್ಲಿಯವರೆಗೆ, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದ ಬಗ್ಗೆ ಯಾವುದೇ ವರದಿಗಳು ಬಂದಿಲ್ಲ. ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.
#BREAKING : 05 injured individuals have been evacuated to the hospital. Among them 02 are locals and 03 are non-locals.#Pahalgam #terrorattack #attack #terrorist #JammuKashmir #encounter #tourists#SouthKashmir #BreakingNews pic.twitter.com/XB2DH2sVYT
— mishikasingh (@mishika_singh) April 22, 2025
ಅಧಿಕಾರಿಗಳ ಪ್ರಕಾರ, ಭಯೋತ್ಪಾದಕರು ಸುಮಾರು 3 ರಿಂದ 5 ನಿಮಿಷಗಳ ಕಾಲ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಸುಮಾರು ಐದರಿಂದ ಆರು ಜನರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ, ಅವರನ್ನು ಅನಂತ್‌ನಾಗ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಮತ್ತು ವೈದ್ಯಕೀಯ ತಂಡಗಳು ಸ್ಥಳದಲ್ಲಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಗಾಯಾಳುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಭಾರತೀಯ ಸೇನೆಯ ವಿಕ್ಟರ್ ಫೋರ್ಸ್, ವಿಶೇಷ ಪಡೆಗಳು, ಜೆಕೆಪಿ ಸೋಜಿ ಮತ್ತು ಸಿಆರ್‌ಪಿಎಫ್ 116 ಬೆಟಾಲಿಯನ್ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
ನನ್ನ ಗಂಡನ ತಲೆಗೆ ಗುಂಡು ಹಾರಿಸಲಾಯಿತು ಮತ್ತು ಇತರ ಏಳು ಮಂದಿ ದಾಳಿಯಲ್ಲಿ ಗಾಯಗೊಂಡರು" ಎಂದು ಬದುಕುಳಿದ ಮಹಿಳೆಯೊಬ್ಬರು ಮಾಧ್ಯಗಳಿಗೆ ತಿಳಿಸಿದ್ದಾರೆ.